ಭೂ ಕಬಳಿಕೆ ಆರೋಪ – ಶಾಸಕ ಜಮೀರ್‌, ಸಹೋದರರ ವಿರುದ್ಧ ಎಫ್‌ಐಆರ್‌

Public TV
1 Min Read
ZAMEER AHMAD KHAN

ಬೆಂಗಳೂರು: ಭೂ ಕಬಳಿಕೆ ಆರೋಪದಡಿ ನ್ಯಾಯಾಲಯದ ಆದೇಶದ ಮೇರೆಗೆ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಹಾಗೂ ಸಹೋದರರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಜಮೀರ್‌ ಹಾಗೂ ಸಹೋದರರ ವಿರುದ್ಧ ಸಂಪಿಗೆಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಳೆದ ವರ್ಷ ಶಾಹೀತಾ ನಾಸೀನ್, ತಸ್ನೀಮ್ ಫಾತೀಮಾರಿಂದ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಕೆಯಾಗಿತ್ತು. ಈ ಸಂಬಂಧ ಕೋರ್ಟ್ ಆದೇಶದಂತೆ ಎಫ್‌ಐಆರ್ ದಾಖಲಾಗಿದೆ. ಜಮೀರ್ ಕುಟುಂಬದ ವಿರುದ್ಧ ಆರೋಪಿಸಿ ಸೈಟ್‌ ಮಾಲೀಕರು ಕೋರ್ಟ್‌ ಮೊರೆ ಹೋಗಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಮುಖಂಡರ ಮನೆ ಮುಂದೆ ಪ್ರತಿಭಟನೆ ಮಾಡಿದವರ ಮೇಲೆ FIR ದಾಖಲು

ZAMEER 1

ಚೊಕ್ಕನಹಳ್ಳಿ ಬಡಾವಣೆಯ ಸೈಟ್ ನಂ. 5, 6 ರ ವ್ಯಾಜ್ಯ ಸಂಬಂಧ ಜಮೀರ್ ಕುಟುಂಬಸ್ಥರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 2015 ರಲ್ಲಿ ಶಾಹಿತಾ ನಾಸೀನ್, ತಸೀಮಾ ಫಾತೀಮಾ ಅವರು ಜಮೀರ್ ಕುಟುಂಬಸ್ಥರಿಂದ ಸೈಟ್ ಖರೀದಿಸಿದ್ದರಂತೆ.‌ ಚಾಮರಾಜಪೇಟೆ ಶಾಸಕ ಜಮೀರ್ ಸಹೋದರ ಹಾಗೂ ಕುಟುಂಬಸ್ಥರೇ ಮಾರಾಟ ಮಾಡಿದ್ದರು. 2018 ರಲ್ಲಿ ಜಮೀರ್ ಕುಟುಂಬಸ್ಥರಿಂದ ಮತ್ತೊಂದು ಸೈಟ್ ಖರೀದಿಸಿದ್ದಾಗಿ ಶಾಹೀತಾ ನಾಸೀನ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು.

ಜೆಸಿ ನಗರ ನಿವಾಸಿಗಳಾಗಿದ್ದ ಶಾಹೀತಾ ನಾಸೀನ್ ಸೈಟ್‌ಗಳ ಕಡೆ ಗಮನ ಹರಿಸಿರಲಿಲ್ಲ. ಈ ಮಧ್ಯೆ ಮಾರಾಟ ಮಾಡಿದ್ದ ಜಮೀರ್ ಕುಟುಂಬದಿಂದಲೇ ಸೈಟ್‌ಗಳ ಕಬಳಿಕೆ ಯತ್ನಿಸಿದ್ದಾರೆ. ಅದನ್ನು ಪ್ರಶ್ನಿಸಿದ್ದಕ್ಕೆ ನಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಶಾಹೀತಾ ನಾಸೀನ್ ಗಂಭೀರ ಆರೋಪ ಮಾಡಿದ್ದರು. ಇದನ್ನೂ ಓದಿ: ಬೊಮ್ಮಾಯಿ ಹೇಳಿದ್ದೆ ವೇದ ವಾಕ್ಯನಾ? ಬೊಮ್ಮಾಯಿಗಿಂತ ಹಿರಿಯ ನಾನು: ಸಿದ್ದರಾಮಯ್ಯ

court order law

ಖಾಸಗಿ ದೂರು ವಿಚಾರಣೆ ನಡೆಸಿದ ಕೋರ್ಟ್, ಈ ಸಂಬಂಧ ತನಿಖೆ ನಡೆಸುವಂತೆ ಆದೇಶ ಹೊರಡಿಸಿದೆ. ಕಬಳಿಕೆ ಮಾಡಿರುವ ಸೈಟ್ ಸಂಬಂಧ ಯಥಾಸ್ಥಿತಿ ಕಾಪಾಡಲು ಕೋರ್ಟ್‌ ಆದೇಶಿಸಿದೆ. ಆದರೆ ಕೋರ್ಟ್‌ನಿಂದ ತಡೆಯಾಜ್ಞೆ ಬಂದರೂ ಜಮೀರ್‌ ಕುಟುಂಬಸ್ಥರು ಸೈಟ್‌ ಬಿಟ್ಟುಕೊಟ್ಟಿಲ್ಲ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ದೂರುದಾರರಿಂದ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *