ನೆಲಮಂಗಲ: ಜಮೀನು ವಿಚಾರದಲ್ಲಿ ದಾಯಾದಿಗಳ ಮಧ್ಯೆ ಗಲಾಟೆ ನಡೆದಿದ್ದು, ಮನೆಗೆ ನುಗ್ಗಿ ದಾಂಧಲೆ ಮಾಡಿ ಪೀಠೋಪಕರಣ, ಬೈಕ್ ಧ್ವಂಸ ಮಾಡಿರುವ ಘಟನೆ ನಡೆದಿದೆ.
ಒಂಟಿ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದು, ಜಮೀನು ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಯಾಗಿ ಮಾರಾ ಮರಿಯಾಗಿದೆ. ಈ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಎಡೆಹಳ್ಳಿ ಬಳಿ ಈ ರ್ದುಘಟನೆ ನಡೆದಿದೆ. ಇದನ್ನೂ ಓದಿ: ಕೊರೊನಾ ವಾರಿಯರ್ಸ್‍ಗೆ 4 ತಿಂಗಳಿನಿಂದ ಸಿಕ್ಕಿಲ್ಲ ಸಂಬಳ
Advertisement
Advertisement
ಮನೆಗೆ ನುಗ್ಗಿ ಮೂವರ ಮೇಲೆ ಹಲ್ಲೆಗೊಳಿಸಿ, ಮನೆಯಲ್ಲಿದ್ದ ಪೀಠೋಪಕರಣಗಳು ಸೇರಿದಂತೆ ಬೈಕ್ ಧ್ವಂಸ ಮಾಡಿದ್ದಾರೆ. ಮಂಜುನಾಥ್, ಭಾರತಿ, ಕುಸುಮ ಮೇಲೆ ಹತ್ತು ಜನರ ತಂಡದಿಂದ ಹಲ್ಲೆ ಆರೋಪ ಕೇಳಿಬಂದಿದ್ದು, ದಾಯಾದಿ ಪುಟ್ಟಗಂಗಯ್ಯ ಸೇರಿದಂತೆ ಹತ್ತು ಮಂದಿಯಿಂದ ಹಲ್ಲೆ ಆರೋಪ ನಡೆದಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ನಮ್ಮ ಭೂಮಿ ಹೋದರೂ ಪರವಾಗಿಲ್ಲ, ಮೇಕೆದಾಟು ಯೋಜನೆ ಬೇಗ ಆರಂಭವಾಗಬೇಕು: ಡಿಕೆಶಿ
Advertisement
ದೊಣ್ಣೆ, ಕಬ್ಬಿಣದ ಸಲಾಖೆ, ಇನ್ನಿತರ ವಸ್ತುಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಕೌಟುಂಬಿಕ ಜಮೀನು ವಿವಾದವೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಮನೆಯಲ್ಲಿದ್ದ ಪೀಠೋಪಕರಣ ಬೈಕ್ ಜಖಂ ಆಗಿದ್ದು, ಡಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಡಾಬಸ್ ಪೇಟೆ ಪೊಲೀಸರು ಭೇಟಿ ನೀಡಿದ್ದಾರೆ. ಜಮೀನಿನ ಬೆಲೆ ಯಾವಾಗ ಚಿನ್ನದ ಬೆಲೆಯಂತಾಯ್ತೋ ಇಂತಹ ಘಟನೆ ಹೆಚ್ಚಾಗುತ್ತವೆ. ಸಧ್ಯ ಗಾಯಾಳು ನೆಲಮಂಗಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.