ಯಾದಗಿರಿ: ವಕ್ಫ್ ಆಸ್ತಿ ವಿವಾದಕ್ಕೆ (Waqf Board) ಸಂಬಂಧಿಸಿದಂತೆ ರಾಜ್ಯಾದ್ಯಂತ ಬಿಜೆಪಿ (BJP) ಪ್ರತಿಭಟನೆ ನಡೆಸುತ್ತಿದ್ದು, ಯಾದಗಿರಿಯಲ್ಲಿಯೂ ಪ್ರತಿಭಟನೆಯ ಕಾವು ಜೋರಾಗಿದೆ.
ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ (BJP Protest) ನಡೆಸುತ್ತಿದ್ದು, ರಾಜ್ಯ ಸರ್ಕಾರ ಲ್ಯಾಂಡ್ ಜಿಹಾದ್ ಮಾಡುತ್ತಿದೆ ಎಂದು ಕಿಡಿಕಾರಿದೆ.ಇದನ್ನೂ ಓದಿ: US Election 2024 | 7 ಕೋಟಿಗೂ ಹೆಚ್ಚು ಜನರಿಂದ ಮೊದಲೇ ಮತದಾನ – Swing ರಾಜ್ಯಗಳಲ್ಲಿ ಟ್ರಂಪ್ ಮುನ್ನಡೆ
ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರೆಡ್ಡಿ ಯಾಳಗಿ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು, ಮಠ, ಮಂದಿರ, ರೈತರ ಆಸ್ತಿ ಕಬಳಿಕೆ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ರಾಜ್ಯ ಕಾಂಗ್ರೆಸ್ (Congress) ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ, ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಹೋರಾಟಗಾರರು ಆಗ್ರಹಿಸಿದ್ದು, ಕೂಡಲೇ ಸಚಿವ ಜಮೀರ್ ಅಹ್ಮದ್ ರಾಜೀನಾಮೆ ನೀಡಬೇಕು. ಸಿಎಂ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದ್ದಾರೆ.ಇದನ್ನೂ ಓದಿ: Uttarakhand | ಕಮರಿಗೆ ಉರುಳಿದ ಬಸ್, ಸಾವಿನ ಸಂಖ್ಯೆ 36ಕ್ಕೆ ಏರಿಕೆ, 19 ಮಂದಿಗೆ ಗಾಯ