Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಿಂದಾಲ್‌ಗೆ ಭೂ ಮಾರಾಟ ಪ್ರಕರಣ: ಕಾಂಗ್ರೆಸ್ಸಿಗರಿಗೂ, ಹೈಕಮಾಂಡಿಗೂ ಸಂದಾಯ ಆಗಿರಬಹುದು – ಸಿ.ಟಿ ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಿಂದಾಲ್‌ಗೆ ಭೂ ಮಾರಾಟ ಪ್ರಕರಣ: ಕಾಂಗ್ರೆಸ್ಸಿಗರಿಗೂ, ಹೈಕಮಾಂಡಿಗೂ ಸಂದಾಯ ಆಗಿರಬಹುದು – ಸಿ.ಟಿ ರವಿ

Bengaluru City

ಜಿಂದಾಲ್‌ಗೆ ಭೂ ಮಾರಾಟ ಪ್ರಕರಣ: ಕಾಂಗ್ರೆಸ್ಸಿಗರಿಗೂ, ಹೈಕಮಾಂಡಿಗೂ ಸಂದಾಯ ಆಗಿರಬಹುದು – ಸಿ.ಟಿ ರವಿ

Public TV
Last updated: August 27, 2024 8:41 pm
Public TV
Share
3 Min Read
ct ravi 3
SHARE

ಬೆಂಗಳೂರು: ಈ ಹಿಂದೆ ಜಿಂದಾಲ್‌ಗೆ (Jindal) ಭೂಮಿ ಕೊಡಲು ಕಾಂಗ್ರೆಸ್ಸಿಗರು ವಿರೋಧಿಸಿದ್ದರು. ಈಗ ಕೊಡುತ್ತಿದ್ದಾರೆ ಅಂದ್ರೆ ಕಾಂಗ್ರೆಸ್ಸಿಗರಿಗೂ, ಅವರ ಹೈಕಮಾಂಡಿಗೂ ದೊಡ್ಡ ಪ್ರಮಾಣದ ಮೊತ್ತ ಸಂದಾಯ ಆಗಿರಬಹುದು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ (C T Ravi) ಸಂಶಯ ವ್ಯಕ್ತಪಡಿಸಿದ್ದಾರೆ.

ನಗರದ ಮಲ್ಲೇಶ್ವರ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಂದಾಲ್ ಕಂಪನಿಗೆ ಸುಮಾರು 3,677 ಎಕರೆ ಭೂಮಿ ಕೊಡುವ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಆಗ್ರಹಿಸಿದ್ದಾರೆ.ಇದನ್ನೂ ಓದಿ: ಐಸಿಸಿ ಮುಖ್ಯಸ್ಥರಾಗಿ ಜಯ್‌ ಶಾ ಅವಿರೋಧ ಆಯ್ಕೆ

ಬಿಜೆಪಿ ಆಡಳಿತದಲ್ಲಿ ಇದ್ದಾಗ ಈ ಪ್ರಸ್ತಾವನೆ ಬಂದಿತ್ತು. ನಾವೆಲ್ಲರೂ ಒಳಗಡೆಯೂ ವಿರೋಧ ಮಾಡಿದ್ದೆವು. ಕಾಂಗ್ರೆಸ್‌ನವರು (Congress)  ಬಹಿರಂಗವಾಗಿ ಭೂ ಮಾರಾಟವನ್ನು ವಿರೋಧಿಸಿದ್ದರು. ಇದು ದೊಡ್ಡ ಪ್ರಮಾಣದ ಕಿಕ್‌ಬ್ಯಾಕ್ ಎಂದು ನಮ್ಮ ಮೇಲೆ ಕಾಂಗ್ರೆಸ್‌ನವರು ಆರೋಪಿಸಿದ್ದರು. ಒಂದು ಎಕರೆಗೆ 1.22 ಲಕ್ಷ ರೂ. ಕೊಡುವುದು ಎಂದರೇನು? ಎಂಬ ಮಾತನ್ನು ನಮ್ಮ ಮೇಲೆ ಆರೋಪಿಸಿದ್ದರು. ಆಗ ಆರೋಪಿಸಿದವರೇ ಭೂಮಿ ಕೊಟ್ಟಿದ್ದಾರೆ. ಹಾಗಿದ್ದರೆ ನೀವು ಎಷ್ಟು ಕಿಕ್‌ಬ್ಯಾಕ್ ಪಡೆದಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಕೈಗಾರಿಕೆ ಖಾತೆ ಸಚಿವರು ಈ ಕುರಿತು ಬಿಜೆಪಿ (BJP) ಆಡಳಿತದಲ್ಲಿರುವಾಗಲೇ ನಿರ್ಧಾರ ಆಗಿತ್ತು ಎಂದಿದ್ದರು. ಮಾನ್ಯ ಎಂ.ಬಿ.ಪಾಟೀಲರೇ, (M B Patil) ನಮ್ಮ ಅವಧಿಯಲ್ಲಿ ಪ್ರಸ್ತಾಪ ಬಂದಿದ್ದು ನಿಜ. ನಮ್ಮಂಥ ಹಲವರು ವಿರೋಧಿಸಿದ್ದ ಕಾರಣಕ್ಕೆ ಪ್ರಸ್ತಾಪವನ್ನು ಅಲ್ಲಿಗೇ ಕೈಬಿಟ್ಟಿದ್ದೆವು. ನೀವ್ಯಾಕೆ ಅದನ್ನು ಮಾಡುತ್ತೀರಿ? ಬಿಜೆಪಿ ಕಂಡರೆ ಆಗದವರು ಬಿಜೆಪಿ ನಿರ್ಧಾರವನ್ನು ಯಾಕೆ ಮುಂದುವರೆಸಬೇಕು ಎಂದು ಕೆಣಕಿದ್ದಾರೆ.ಇದನ್ನೂ ಓದಿ: ತುಮಕೂರು ಜಿಲ್ಲೆಗೆ ಮೂರು ರೈಲ್ವೆ ಸೇತುವೆ ಮಂಜೂರು

ಹೂಡಿಕೆದಾರರು ಜನರಿಗೆ ಸೇವೆ ಮಾಡಲು ಬರುತ್ತಿಲ್ಲ..
ಹೆಚ್.ಕೆ.ಪಾಟೀಲರೇ (H K Patil) ಅವತ್ತು ಉದ್ದದ ಪತ್ರ ಬರೆದಿದ್ದಿರಿ. ಪತ್ರಿಕಾಗೋಷ್ಠಿ ಮಾಡಿದ್ದೀರಿ. ಈಗ ಕ್ಯಾಬಿನೆಟ್ ನಿರ್ಣಯವನ್ನು ಹೊರಗಡೆ ಬಂದು ಪತ್ರಿಕಾಗೋಷ್ಠಿ ಮಾಡಿ ನಿಮ್ಮ ಬಾಯಿಂದಲೇ ಹೇಳಿದ್ದೀರಿ ಎಂದಿರಿ. 90 ಸಾವಿರ ಕೋಟಿ ರೂ.ಗೂ ಹೆಚ್ಚು ಹೂಡಿಕೆ ಮಾಡಿ, 50 ಸಾವಿರ ಜನರಿಗೆ ಉದ್ಯೋಗ ಕೊಡಲಾಗಿದೆ ಎಂದು ಹೇಳಿದ್ದಾರೆ. ಜಿಂದಾಲ್ ಏನೂ ನಾನ್ ಪ್ರಾಫಿಟ್ ಆರ್ಗನೈಸೇಶನ್ ಅಲ್ಲ. ಅವರು ಕಂಪನಿ ನಡೆಸುತ್ತಿದ್ದಾರೆ. ಲಾಭದ ಲೆಕ್ಕಾಚಾರ ಹಾಕಿ ಹೂಡಿಕೆ ಮಾಡುತ್ತಾರೆ. ಜಿಂದಾಲ್ ಅಥವಾ ಇತರ ಕಂಪನಿಗಳು, ಹೂಡಿಕೆದಾರರು ಕರ್ನಾಟಕದ 7 ಕೋಟಿ ಜನರಿಗೆ ಸೇವೆ ಮಾಡಲು ಬರುತ್ತಿಲ್ಲ. ಅವರು ಲಾಭದ ಉದ್ದೇಶ ಇಟ್ಟುಕೊಂಡೇ ಹೂಡಿಕೆ ಮಾಡುತ್ತಾರೆ ಎಂದು ವಿಶ್ಲೇಷಿಸಿದ್ದಾರೆ.

ಜಿಂದಾಲ್ ಮತ್ತು ಕರ್ನಾಟಕ ಸರ್ಕಾರದ ನಡುವೆ ಯಾವ ಒಪ್ಪಂದ ಪತ್ರ ಆಗಿತ್ತು? ನಾವು ಕಡಿಮೆ ಬೆಲೆಗೆ ಜಮೀನು ಕೊಟ್ಟಿದ್ದೇವೆ. ಅಣೆಕಟ್ಟಿನಿಂದ ನೀರು ಕೊಡುತ್ತೇವೆ. ಪ್ರಾಕೃತಿಕ ಸಂಪನ್ಮೂಲ ತೆಗೆಯಲು ಅವಕಾಶ ನೀಡಿದ್ದೇವೆ. ಅವರು ಎಷ್ಟು ಉದ್ಯೋಗ ಸಿಗಲಿದೆ ಎಂದು ತೋರಿಸಿದ್ದರು? ಯಾವ ಭರವಸೆ ಕೊಟ್ಟಿದ್ದರು? ಈಗ ಎಷ್ಟು ಉದ್ಯೋಗ ಸೃಷ್ಟಿ ಆಗಿದೆ? ಉದ್ಯೋಗಿಗಳಲ್ಲಿ ಕರ್ನಾಟಕದವರು, ಕನ್ನಡಿಗರು ಎಷ್ಟು ಜನ ಎಂಬ ಬಗ್ಗೆ ಜಾಬ್ ಆಡಿಟ್ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಕೊಡುವ ಉದ್ದೇಶ ಇದ್ದರೆ ಇವತ್ತಿನ ಮಾರುಕಟ್ಟೆ ದರ ವಿಧಿಸಿ..
ಆವತ್ತು ಕಿಕ್‌ಬ್ಯಾಕ್ ಆರೋಪ ಮಾಡಿ, ಈಗ ನೀವು ಅನುಮತಿ ಕೊಟ್ಟ ಕಾರಣ ನೀವೆಷ್ಟು ಕಿಕ್‌ಬ್ಯಾಕ್ ಪಡೆದಿದ್ದೀರಿ ಎಂಬ ಸಂಶಯ ಬಂದೇ ಬರುತ್ತದೆ. ಇದರ ಜೊತೆಜೊತೆಗೇ ಯಾವತ್ತಿನದೋ ಮಾರುಕಟ್ಟೆ ದರ ಅಳವಡಿಸಿ, ಇವತ್ತು 1.22 ಲಕ್ಷ ರೂ. ನಿಗದಿ ಮಾಡಿದ್ದಾರೆ. ನಮ್ಮ ರಾಜ್ಯದಲ್ಲಿ ಯಾವ ಮೂಲೆಯಲ್ಲೂ ಈ ದರಕ್ಕೆ ಭೂಮಿ ಸಿಗುವುದಿಲ್ಲ. ಪ್ರತಿ ಎಕರೆ ಜಮೀನಿಗೆ ಕಡಿಮೆ ಎಂದರೂ 20-25 ಲಕ್ಷ ರೂ. ಬೆಲೆ ಇದೆ. ಹಾಗಿರುವಾಗ 1.22 ಲಕ್ಷ ರೂ. ನಿಗದಿ ಮಾಡಿದ್ದು ಸಮರ್ಥನೀಯವಲ್ಲ ಎಂದು ಆಕ್ಷೇಪಿಸಿದ್ದಾರೆ.ಇದನ್ನೂ ಓದಿ: ಹೆಚ್‌ಡಿಕೆ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ಆಗ್ರಹ: ಆ.31 ರಂದು ರಾಜಭವನಕ್ಕೆ ಕಾಂಗ್ರೆಸ್ ಶಾಸಕರ ಪರೇಡ್

ಕೊಡುವ ಉದ್ದೇಶ ಇದ್ದರೆ ಇವತ್ತಿನ ಮಾರುಕಟ್ಟೆ ದರದಲ್ಲಿ ಕೊಡಬೇಕು. ಅಲ್ಲಿರುವ ಅದಿರು ನಿಕ್ಷೇಪಗಳ ಮೇಲೆ ಸರ್ಕಾರದ ಹಕ್ಕು ಎಂದು ಷರತ್ತಿನೊಂದಿಗೆ ಕೊಡಬೇಕು. ಹಾಗಾಗಿ ನಿರ್ಧಾರವನ್ನು ಪುನರ್ ಪರಿಶೀಲನೆ ಮಾಡಬೇಕೆಂದು ತಿಳಿಸಿದ್ದಾರೆ.

TAGGED:bengalurubjpc t ravicongressjindalಜಿಂದಾಲ್ಬಿಜೆಪಿಬೆಂಗಳೂರುಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

uranium.jpg
Latest

ಇರಾನ್‌ನ ಯುರೇನಿಯಂ ಮೇಲೆ ಟ್ರಂಪ್‌ ಕಣ್ಣಿಟ್ಟಿದ್ದೇಕೆ? – 32 ವರ್ಷಗಳ ಹಿಂದಿನ ʻಸಫೈರ್ʼ ಸೀಕ್ರೆಟ್ ಆಪರೇಷನ್ ರಿಪೀಟ್ ಆಗುತ್ತಾ?

Public TV
By Public TV
2 minutes ago
Manipur Home Bomb Attack
Crime

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ, ತಾಯಿಗೆ ಗಾಯ

Public TV
By Public TV
3 minutes ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
6 minutes ago
2nd PUC Exam
Bagalkot

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

Public TV
By Public TV
18 minutes ago
Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
30 minutes ago
northrop b 2 spirit stealth bomber 1
Latest

ಇರಾನ್‌ನ ಹಿಟ್‌ ಲಿಸ್ಟ್‌ ಸಿದ್ಧಪಡಿಸಿದ ಅಮೆರಿಕ – ಮಧ್ಯಪ್ರಾಚ್ಯದಲ್ಲಿ ಇಂದು ರಾತ್ರಿಯೇ ರಣಭೀಕರ ಕಾಳಗ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?