ನೆಲಮಂಗಲ: ಜಮೀನು, ಮನೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಕಬ್ಬಿಣದ ರಾಡ್ ಹಾಗೂ ಬಡಿಗೆಯಿಂದ ಬಡಿದಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಹಿಸುವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ನರಸಿಂಹಮೂರ್ತಿ, ನಾಗರಾಜು ಅವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಜಮೀನು, ಮನೆ ವಿಚಾರಕ್ಕಾಗಿಯೇ 2 ಗುಂಪುಗಳ ನಡುವೆ ಗಲಾಟೆಯಾಗಿದ್ದು, ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಇದನ್ನೂ ಓದಿ: ಪ್ರಕ್ಷುಬ್ಧಗೊಂಡ ಶಿವಮೊಗ್ಗದಲ್ಲಿ 2 ದಿನ ಕರ್ಫ್ಯೂ – ನಾಳೆ ಬೆಳಗ್ಗೆವರೆಗೂ ನಿಷೇಧಾಜ್ಞೆ, ಖಾಕಿ ಭದ್ರತೆ
ಜಮೀನು ನಮ್ಮದು ಎಂದು ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ಮಾಡಿರುವ ಆರೋಪವನ್ನ ಗಾಯಾಳುಗಳು ಮಾಡಿದ್ದು, ಗಲಾಟೆಯಾಗಿ ಹಲ್ಲೆಯಾದರೂ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರು ವಿಫಲರಾಗಿದ್ದು ಆರೋಪಿಗಳ ವಿರುದ್ಧ ಸೂಕ್ತ ಕ್ರಮಗಳನ್ನ ಜರುಗಿಸಿಲ್ಲ ಎಂದು ಗಾಯಾಳುಗಳು ಆರೋಪಿಸಿದ್ದಾರೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.