Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲ್ಯಾಂಡ್ ಲಾರ್ಡ್ ಟೀಸರ್ ರಿಲೀಸ್ – ಹೊಸ ಪಾತ್ರದಲ್ಲಿ ದುನಿಯಾ ವಿಜಯ್, ಜ.23ಕ್ಕೆ ರಿಲೀಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಲ್ಯಾಂಡ್ ಲಾರ್ಡ್ ಟೀಸರ್ ರಿಲೀಸ್ – ಹೊಸ ಪಾತ್ರದಲ್ಲಿ ದುನಿಯಾ ವಿಜಯ್, ಜ.23ಕ್ಕೆ ರಿಲೀಸ್‌

Cinema

ಲ್ಯಾಂಡ್ ಲಾರ್ಡ್ ಟೀಸರ್ ರಿಲೀಸ್ – ಹೊಸ ಪಾತ್ರದಲ್ಲಿ ದುನಿಯಾ ವಿಜಯ್, ಜ.23ಕ್ಕೆ ರಿಲೀಸ್‌

Public TV
Last updated: November 2, 2025 7:06 pm
Public TV
Share
4 Min Read
Duniya Vijay
SHARE

ನಾಡಿನೆಲ್ಲೆಡೆ ರಾಜ್ಯೋತ್ಸವದ ಸಂಭ್ರಮ. ಈ ಶುಭದಿನದಂದು ಸಾರಥಿ ಫಿಲ್ಮ್ಸ್‌ ಲಾಂಛನದಲ್ಲಿ ಕೆ.ವಿ ಸತ್ಯಪ್ರಕಾಶ್ – ಹೇಮಂತ್ ಗೌಡ ಕೆ.ಎಸ್ ನಿರ್ಮಿಸಿರುವ, ಜಡೇಶ್ ಕೆ.ಹಂಪಿ ನಿರ್ದೇಶನದ ಹಾಗೂ ದುನಿಯಾ ವಿಜಯ್, ರಚಿತಾ ರಾಮ್ ಅಭಿನಯದ ‘ಲ್ಯಾಂಡ್ ಲಾರ್ಡ್’ ಚಿತ್ರದ ಸರ್ವೈವರ್ ಟೀಸರ್ ಬಿಡುಗಡೆ ಸಮಾರಂಭ ನವರಂಗ್ ಚಿತ್ರಮಂದಿರದಲ್ಲಿ ಅದ್ಧೂರಿಯಾಗಿ ನೆರವೇರಿತು. ಟೀಸರ್ ಮೂಲಕ ಚಿತ್ರತಂಡ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದೆ. ಬಹು ನಿರೀಕ್ಷಿತ ಈ ಚಿತ್ರ 2026ರ ಜನವರಿ 23 ರಂದು ಬಿಡುಗಡೆಯಾಗಲಿದೆ. ಜನವರಿ 20 ದುನಿಯಾ ವಿಜಯ್ ಅವರ ಹುಟ್ಟುಹಬ್ಬ. ಆ ಸಂದರ್ಭದಲ್ಲೇ ಈ ಚಿತ್ರ ಬಿಡುಗಡೆಯಾಗುತ್ತಿರುವುದು ಅಭಿಮಾನಿಗಳಿಗೆ ಖುಷಿಯಾಗಿದೆ. ಟೀಸರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

Duniya Vijay 3

ಇಂತಹ ಉತ್ತಮ ಸಂದೇಶವಿರುವ ಈ ಕಥೆಯನ್ನು ತೆರೆಗೆ ತರುತ್ತಿರುವ ನಿರ್ದೇಶಕ ಜಡೇಶ್ ಕೆ ಹಂಪಿ ಹಾಗೂ ನಿರ್ಮಾಣ ಮಾಡುತ್ತಿರುವ ಕೆ.ವಿ ಸತ್ಯಪ್ರಕಾಶ್ ಹಾಗೂ ಕೆ.ಎಸ್ ಹೇಮಂತ್ ಗೌಡ ಅವರಿಗೆ ಧನ್ಯವಾದ ತಿಳಿಸಿ ಮಾತನಾಡಿದ ನಾಯಕ ದುನಿಯಾ ವಿಜಯ್, ಕಷ್ಟದ ಸಮಯದಲ್ಲಿ ಕೈ ಹಿಡಿದ ಅಭಿಮಾನಿಗಳಿಗೆ ವಿಶೇಷ ಧನ್ಯವಾದ ಹೇಳಿದರು. ಇನ್ನೂ, ನಾನು ಹಾಗೂ ರಚಿತಾ ರಾಮ್ ಅವರು ಒಂದೇ ಬಡಾವಣೆಯವರು. ಮೊದಲಿನಿಂದಲೂ ಸ್ನೇಹಿತರು. ಅವರ ಜೊತೆಗೆ ಅಭಿನಯಿಸಿದ್ದು ಹಾಗೂ ತೆರೆಯ ಮೇಲೆ ಅಷ್ಟೇ ಅಲ್ಲ. ನಿಜಜೀವನದಲ್ಲೂ ನನ್ನನ್ನು ತಾಯಿಯ ತರಹ ಪ್ರೀತಿ ಮಾಡುವ ಹಿರಿಯ ನಟಿ ಉಮಾಶ್ರೀ ಅವರೊಂದಿಗೆ ನಟಿಸಿದ್ದು ಬಹಳ ಸಂತೋಷವಾಗಿದೆ. ನನ್ನ ಮಗಳು ರಿತನ್ಯ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾಳೆ. ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ತಂತ್ರಜ್ಞರ ಕಾರ್ಯವೈಖರಿಯೂ ಚೆನ್ನಾಗಿದೆ. ನಮ್ಮ ಚಿತ್ರ ಜನವರಿ 23 ರಂದು ತೆರೆಗೆ ಬರಲಿದೆ. ಚಿತ್ರ ನಿಮ್ಮೆಲ್ಲರಿಗೂ ಮೆಚ್ಚುಗೆಯಾಗುವ ಭರವಸೆಯಿದೆ ಎಂದರು.

Rachita Ram

ಈ ಸಂದರ್ಭದಲ್ಲಿ ನಟಿ ರಚಿತಾ ರಾಮ್ ಮಾತನಾಡುತ್ತಾ, ನಾನು ಈ ಚಿತ್ರದ ಕಥೆ ಕೇಳುವಾಗಲೇ ಬಹಳ ಕುತೂಹಲ ಎನಿಸಿತು. ಕಥೆ ಕೇಳುತ್ತಿರುವಾಗಲೇ ಈ ಪಾತ್ರ ನಾನೇ ಮಾಡಬೇಕು ಅಂದುಕೊಂಡೆ. ಕಥೆ ಕೇಳಿದ ಮೇಲೆ ನಾನು ದರ್ಶನ್ ಸರ್ ಹಾಗೂ ಲೋಕೇಶ್ ಕನಕರಾಜು ಅವರಿಗೆ ಈ ಚಿತ್ರದ ಬಗ್ಗೆ ಹೇಳಿದೆ. ಅವರು ಕೂಡ ಕಥೆ ಚೆನ್ನಾಗಿದೆ ಎಂದರು. ʻಜಾನಿ ಜಾನಿ ಎಸ್ ಪಪ್ಪʼ ಚಿತ್ರದ ನಂತರ ನಾನು ದುನಿಯಾ ವಿಜಯ್ ಅವರ ಜೊತೆಗೆ ನಟಿಸಿದ್ದೇನೆ. ಈ ಚಿತ್ರತಂಡದೊಟ್ಟಿಗೆ ಕೆಲಸ ಮಾಡಿದ್ದು ಖುಷಿಯಾಗಿದೆ. ನಿಂಗವ್ವ ನನ್ನ ಪಾತ್ರದ ಹೆಸರು, ಟೀಸರ್ ಕೂಡ ಚೆನ್ನಾಗಿದೆ. ಚಿತ್ರ ಜನವರಿ 23 ತೆರೆಗೆ ಬರಲಿದೆ. ಎಲ್ಲರೂ ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಎಂದರು.

Umashree Duniya Vijay

ಇದೊಂದು 80ರ ಕಾಲಘಟ್ಟದಲ್ಲಿ ನಡೆಯುವ ಈ ನೆಲದ ಕಥೆ. 45 ವರ್ಷಗಳ ಹಿಂದಿನದ್ದನ್ನು ತೆರೆಯ ಮೇಲೆ ತರುವುದು ಅಷ್ಟು ಸುಲಭವಲ್ಲ. ನಾವು ಅಂದುಕೊಂಡ ಹಾಗೆ ಚಿತ್ರ ಬಂದಿದೆ ಅಂದರೆ ಅದಕ್ಕೆ ಚಿತ್ರತಂಡದ ಸಹಕಾರವೇ ಕಾರಣ. ಇನ್ನೂ ದುನಿಯಾ ವಿಜಯ್ ಅವರ ಅಭಿನಯಕ್ಕೆ ಅಭಿಮಾನಿ ನಾನು. ರಚಿತಾರಾಮ್ ಅವರು ಅಭಿನಯಿಸಲು ಸೆಟ್ ಗೆ ಬಂದರೆ ಅವರ ಸಂಭಾಷಣೆಗೆ ವಿಷಲ್ ಬೀಳುತ್ತಿತ್ತು. ರಿತನ್ಯ, ಶಿಶಿರ್, ರಾಕೇಶ್ ಅಡಿಗ, ಅಚ್ಯುತ್ ಕುಮಾರ್, ಮಿತ್ರ, ಅಭಿಷೇಕ್ ದಾಸ್ ಹೀಗೆ ಎಲ್ಲರ ಅಭಿನಯವೂ ಬಹಳ ಚೆನ್ನಾಗಿದೆ. ಐವತ್ತಕ್ಕೂ ಹೆಚ್ಚು ರಂಗಭೂಮಿ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನದಲ್ಲಿ ಹಾಡುಗಳು ಚೆನ್ನಾಗಿ ಬಂದಿದೆ. ಅದರಲ್ಲೂ ಯೋಗರಾಜ್ ಭಟ್ ಅವರು ಬರೆದು ದುನಿಯಾ ವಿಜಯ್ ಹಾಗೂ ರಚಿತರಾಮ್ ಅವರು ಅಭಿನಯಿಸಿರುವ ಹಾಡೊಂದು ಸದ್ಯದಲ್ಲೇ ಬಿಡುಗಡೆಯಾಗಲಿದ್ದು, ಅದು ಸಾರ್ವಕಾಲಿಕ ಹಿಟ್ ಹಾಡುಗಳ ಸಾಲಿಗೆ ಸೇರಲಿದೆ. ಚಿತ್ರವನ್ನು ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಪಕರು ನಿರ್ಮಾಣ ಮಾಡಿದ್ದಾರೆ. ಜನವರಿ 23 ನಮ್ಮ ಚಿತ್ರ ನಿಮ್ಮ ಮುಂದೆ ಬರಲಿದೆ ಎಂದರು ನಿರ್ದೇಶಕ ಜಡೇಶ್ ಕೆ. ಹಂಪಿ.

Duniya Vijay 2

“ಸಾರಥಿ” ಚಿತ್ರದ ಬಳಿಕ ಹದಿನಾಲ್ಕು ವರ್ಷಗಳ ನಂತರ ನಮ್ಮ ಸಂಸ್ಥೆಯಿಂದ “ಲ್ಯಾಂಡ್ ಲಾರ್ಡ್” ಚಿತ್ರ ನಿರ್ಮಾಣವಾಗಿದೆ. ನಿರ್ದೇಶಕರು ಒಂದೊಳ್ಳೆ ಕಥೆ ಮಾಡಿದ್ದಾರೆ. ನೋಡುಗರು ಕೊಡುವ ದುಡ್ಡಿಗೆ ಐದು ಪಟ್ಟು ಹೆಚ್ಚು ಮನೋರಂಜನೆ ಕೊಡುವ ಚಿತ್ರವಿದು. ಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ದುನಿಯಾ ವಿಜಯ್, ರಚಿತರಾಮ್ ಅವರು ಸೇರಿದಂತೆ ಎಲ್ಲಾ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಧನ್ಯವಾದ ಎಂದರು ನಿರ್ಮಾಪಕ ಕೆ.ವಿ ಸತ್ಯಪ್ರಕಾಶ್. ನಮ್ಮ ಚಿತ್ರ ಜನವರಿ 23ರಂದು ಬಿಡುಗಡೆಯಾಗಲಿದೆ. ಮುಂದೆ ಕೂಡ ನಮ್ಮ ಸಂಸ್ಥೆಯಿಂದ ಉತ್ತಮ ಚಿತ್ರಗಳು ನಿರ್ಮಾಣವಾಗಲಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ತಂದೆ ಕೆ.ವಿ.ಸತ್ಯಪ್ರಕಾಶ್ ಅವರ ಜೊತೆಗೂಡಿ ಈ ಚಿತ್ರವನ್ನು ನಿರ್ಮಿಸಿರುವ ಕೆ.ಎಸ್ ಹೇಮಂತ್ ಗೌಡ ತಿಳಿಸಿದರು. ಈ ಚಿತ್ರದಲ್ಲಿ ಅಭಿನಯಿಸಿದ್ದು ಬಹಳ ಖುಷಿಯಾಗಿದೆ. ದುನಿಯಾ ವಿಜಯ್ ತೆರೆ ಮೇಲೆ ಮಾತ್ರ ನನ್ನ ಮಗ ಅಲ್ಲ. ನಿಜಜೀವನದಲ್ಲೂ ನನ್ನ ಮಗ ಇದ್ದ ಹಾಗೆ. ಆರೀತಿಯ ಪ್ರೀತಿ ತೋರಿಸುತ್ತಾರೆ ಎಂದು ಹಿರಿಯ ನಟಿ ಉಮಾಶ್ರೀ ಹೇಳಿದರು.

ಈ ಚಿತ್ರದ ಮೂಲಕ ನಾನು ಚಿತ್ರರಂಗ ಪ್ರವೇಶಿಸುತ್ತಿದ್ದೇನೆ. ಈ ಚಿತ್ರದಲ್ಲೂ ನಾನು ದುನಿಯಾ ವಿಜಯ್ ಅವರ ಮಗಳಾಗಿಯೇ ಕಾಣಿಸಿಕೊಂಡಿದ್ದೇನೆ ಎಂದರು ದುನಿಯಾ ವಿಜಯ್ ಪುತ್ರ ರಿತನ್ಯ. ಚಿತ್ರದಲ್ಲಿ ನಟಿಸಿರುವ ಮಿತ್ರ, ಶಿಶಿರ್, ಅಭಿಷೇಕ್ ದಾಸ್ ಛಾಯಾಗ್ರಾಹಕ ಸ್ವಾಮಿ ಜೆ ಗೌಡ, ಸಂಭಾಷಣೆ ಬರೆದಿರುವ ಮಾಸ್ತಿ, ಶ್ರೀಕಾಂತ್ ಮುಂತಾದ ಚಿತ್ರತಂಡದ ಸದಸ್ಯರು “ಲ್ಯಾಂಡ್ ಲಾರ್ಡ್” ಚಿತ್ರದ ಕುರಿತು ಮಾತನಾಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಹಾಗೂ ಚಿತ್ರರಂಗದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

TAGGED:Duniya VijayLand LordRachita Ramsandalwoodumashreeಉಮಾಶ್ರೀದುನಿಯಾ ವಿಜಯ್ರಚಿತಾ ರಾಮ್ಲ್ಯಾಂಡ್‌ ಲಾರ್ಡ್‌ ಸಿನಿಮಾ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Ajinkya Rahane
Cricket

ಸತತ ಸೋಲಿನ ಬಳಿಕ ಮತ್ತೆ ಶಾಕ್‌ – KKR ನಾಯಕ ಅಜಿಂಕ್ಯ ರಹಾನೆಗೆ 12 ಲಕ್ಷ ದಂಡ

Public TV
By Public TV
53 minutes ago
oil tankers hormuz
Latest

ಹಾರ್ಮುಜ್‌ ದಾಟಲು ಯತ್ನಿಸಿದ 2 ತೈಲ ಟ್ಯಾಂಕರ್‌ ತಡೆದ ಯುಎಸ್‌ ನೌಕಾಪಡೆ – ವಾಪಸ್‌ ಹೋಗುವಂತೆ ವಾರ್ನಿಂಗ್

Public TV
By Public TV
1 hour ago
Maharashtra Man Arrest
Crime

180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್‌ ಮಾಡಿದ್ದ ಆರೋಪಿ ಬಂಧನ

Public TV
By Public TV
2 hours ago
Vijayapura Murder
Crime

ವಿಜಯಪುರದಲ್ಲಿ ಹಾಡಹಗಲೇ ಶೂಟೌಟ್ – ಗುಂಡಿನ ಸುರಿಮಳೆಗೈದು ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆ

Public TV
By Public TV
2 hours ago
chikkamagaluru accident case
Chikkamagaluru

ಅಂಬೇಡ್ಕರ್‌ ಜಯಂತಿ ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿಯಿಂದ ಕಾರು ಚಾಲನೆ – 7 ವರ್ಷದ ಮಗು ಸ್ಥಳದಲ್ಲೇ ಸಾವು

Public TV
By Public TV
2 hours ago
PM Modi In Mangaluru
Districts

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ – 80 ಕೋಟಿ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?