ಹಾಸನ: ಶಿರಾಡಿ ಘಾಟ್‍ನಲ್ಲಿ ಮತ್ತೆ ಭೂಕುಸಿತವಾಗಿದ್ದು, ಭಾರೀ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದೆ.
ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪದ ರಸ್ತೆ ವಾರದ ಹಿಂದೆ ಸ್ವಲ್ಪ ಪ್ರಮಾಣದಲ್ಲಿ ಕುಸಿದಿತ್ತು. ಈ ಹಿನ್ನೆಲೆ ಲೋಕೋಪಯೋಗಿ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸಚಿವರು ಭೇಟಿ ನೀಡಿದ ನಾಲ್ಕನೇ ದಿನಕ್ಕೆ ಮತ್ತೆ ಭೂಕುಸಿತ ಕಾಣಿಸಿಕೊಂಡಿದೆ.
Advertisement
Advertisement
ಇಂದು ಮಧ್ಯಾಹ್ನದ ವೇಳೆಗೆ ಮತ್ತೆ ಭೂಕುಸಿತವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹಾಕಿದ್ದಾರೆ. ಲಘು ವಾಹನಗಳನ್ನು ಏಕ ಮುಖ ಸಂಚಾರದಂತೆ ಚಲಿಸಲು ಅವಕಾಶ ನೀಡಿದ್ದಾರೆ. ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮತ್ತೆ ರಸ್ತೆ ಕುಸಿಯುತ್ತಿದ್ದು, ಆತಂಕ ಹೆಚ್ಚಾಗಿದೆ.
Advertisement
Advertisement
ಕಳೆದ ವರ್ಷ ಕೂಡ ಇದೇ ಸ್ಥಳದಲ್ಲಿ ರಸ್ತೆ ಕುಸಿದಿತ್ತು. ಈ ರಾಷ್ಟ್ರೀಯ ಹೆದ್ದಾರಿ 75 ರಾಜಧಾನಿ ಬೆಂಗಳೂರು ಹಾಗೂ ಬಂದರು ನಗರಿ ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ಇದನ್ನೂ ಓದಿ: ಯುವಕರಿಗೆ ಪೊಲೀಸ್ ಕೆಲ್ಸ – ಕಲರ್ ಕಲರ್ ಕಥೆ ಕಟ್ಟಿದ್ದ ನಕಲಿ ಪೊಲೀಸಪ್ಪ ಪರಾರಿ