ಚಿಕ್ಕಮಗಳೂರು: ಚಾರ್ಮಾಡಿ ಘಾಟ್ (Charmadi Ghat) ತಪ್ಪಲಿನಲ್ಲಿ ಭಾರೀ ಮಳೆಯಾಗುತ್ತಿದ್ದು (Rain) ಇಂದು ಮತ್ತೆ ಗುಡ್ಡ (Land Slide) ಕುಸಿದಿದೆ.
ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಗುಡ್ಡ ಮತ್ತು ಬಂಡೆಗಳು ಕುಸಿದಿದೆ. ಮಳೆ ನೀರಿನ ಜೊತೆ ರಸ್ತೆಗೆ ಕಲ್ಲುಗಳು ತೇಲಿಕೊಂಡು ಬಂದಿವೆ. ಚಾರ್ಮಾಡಿ ಘಾಟಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
Advertisement
ವಾಹನ ಸಂಚಾರ ಎಂದಿನಂತೆ ಇದ್ದು ಯಾವುದೇ ತೊಂದರೆ ಇಲ್ಲ. ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು ರಸ್ತೆಯಲ್ಲಿ ಅಡಿಗಟ್ಟಲೇ ನೀರು ಹರಿಯುತ್ತಿದೆ. ಇದನ್ನೂ ಓದಿ: Bharat Bandh| ಮಕ್ಕಳಿದ್ದ ಶಾಲಾ ಬಸ್ಸಿಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಾಕಾರರು
Advertisement
ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಯನ್ನು ಚಾರ್ಮಾಡಿ ಘಾಟ್ ಸಂಪರ್ಕಿಸುತ್ತದೆ. ಬೆಂಗಳೂರಿನಿಂದ (Bengaluru) ದಕ್ಷಿಣ ಕನ್ನಡ, ಉಡುಪಿ ಭಾಗಗಳಿಗೆ ತೆರಳುವ ಮಂದಿ ಶಿರಾಡಿ ಮೂಲಕ ತೆರಳುತ್ತಿದ್ದರು. ಆದರೆ ಶಿರಾಡಿ ಘಾಟಿಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತದ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದೆ.