– 150 ಕ್ಕೂ ಹೆಚ್ಚು ಸಿಬ್ಬಂದಿಯಿಂದ 10 ಜೆಸಿಬಿ ಬಳಸಿ ತೆರವು ಕಾರ್ಯ
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ದೂಧ್ ಸಾಗರ್ ಫಾಲ್ಸ್ (Dudhsagar) ಬಳಿ ಬೃಹತ್ ಪ್ರಮಾಣದ ಭೂಕುಸಿತವಾಗಿದೆ. ಇದರಿಂದಾಗಿ ಗೋವಾ ಹಾಗೂ ಕರ್ನಾಟಕ ನಡುವಿನ ರೈಲು ಸಂಚಾರದಲ್ಲಿ ಎರಡು ದಿನಗಳ ಕಾಲ ವ್ಯತ್ಯಯ ಆಗಲಿದೆ. ನೈರುತ್ಯ ರೈಲ್ವೆ (Railway) ವಲಯದ 150 ಕ್ಕೂ ಅಧಿಕ ಸಿಬ್ಬಂದಿಯಿಂದ 10ಕ್ಕೂ ಹೆಚ್ಚು ಜೆಸಿಬಿ ಬಳಸಿ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ.
ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದ ನಿರಂತರ ಭೂಕುಸಿತವಾಗುತ್ತಿದೆ. ಇದರಿಂದಾಗಿ ಕಳೆದ ಎರಡು ದಿನಗಳಿಂದ ಗೋವಾ-ಕರ್ನಾಟಕ ಮಾರ್ಗ ಮಧ್ಯೆ ರೈಲ್ವೆ ಸಂಚಾರ ಸ್ಥಗಿತವಾಗಿತ್ತು. ಕಳೆದ 36 ಗಂಟೆಗಳಿಂದ ಕಾರ್ಯಾಚರಣೆ ನಡೆಸಿ ರೈಲ್ವೆ ಹಳಿ ಮೇಲೆ ಬಿದ್ದಿರುವ ಕಲ್ಲು ಹಾಗೂ ಮರಗಳನ್ನು ತೆರವುಗೊಳಿಸಲಾಗುತ್ತಿದೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಸರ್ವೆ ಕೇಸ್ – ಅಲಹಾಬಾದ್ ಹೈಕೋಟ್‌ನಲ್ಲಿ ಇಂದು ವಿಚಾರಣೆ
ಕಾರ್ಯಾಚರಣೆ ನಡೆಯುತ್ತಿರುವುದರಿಂದ ದೂಧ್ ಸಾಗರ್ ಬಳಿ ರೈಲ್ವೆ ಸಿಬ್ಬಂದಿ ಹೊರತುಪಡಿಸಿ ಅನ್ಯ ವ್ಯಕ್ತಿಗಳಿಗೆ ಪ್ರವೇಶಕ್ಕೆ ನಿಷೇಧಿಸಲಾಗಿದೆ. ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಠಿಕಾಣಿ ಹೂಡಿದ್ದಾರೆ. ಆದರೆ ಈ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ತೆರವು ಕಾರ್ಯಾಚರಣೆಗೆ ತೊಡಕಾಗಿದೆ. ಇದು ಅಧಿಕಾರಿಗಳಿಗೆ ತಲೆ ನೋವಾಗಿ ಪರಿಣಮಿಸಿದೆ.
ಕಾರ್ಯಾಚರಣೆ ಇನ್ನೂ ಒಂದು ದಿನ ನಡೆಯಲಿದ್ದು, ಎರಡು ದಿನಗಳು ರೈಲು ಸಂಚಾರದಲ್ಲಿ ವ್ಯತ್ಯಯ ಆಗಲಿದೆ. ಇದನ್ನೂ ಓದಿ: ನನ್ನ 3ನೇ ಅವಧಿಯಲ್ಲಿ ಭಾರತ ವಿಶ್ವದ ಟಾಪ್ 3 ಆರ್ಥಿಕತೆಯಲ್ಲಿ ಒಂದಾಗಲಿದೆ: ಮೋದಿ ಭರವಸೆ
Web Stories