ಮಡಿಕೇರಿಯ ಬೆಟ್ಟದ ನಿವಾಸಿಗಳಿಗೆ ಭೂಕುಸಿತದ ಭೀತಿ – ಡೇಂಜರ್ ಜೋನ್‌ನಲ್ಲಿ 13 ಕುಟುಂಬಗಳು

Public TV
2 Min Read
Kodagu Landslide 2

ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಮಳೆಗಾಲ ಶುರುವಾದ್ರೆ ಸಾಕು ಎಲ್ಲಿ, ಯಾವಾಗ, ಯಾವ ಬೆಟ್ಟ ಕುಸಿಯುತ್ತದೆಯೋ? ಎನ್ನುವ ಆತಂಕ ಶುರುವಾಗಿ ಬಿಡುತ್ತದೆ. ಇದರ ನಡುವೆ ಮಡಿಕೇರಿ ತಾಲೂಕಿನ ಮೇಕೇರಿ ಗ್ರಾಮದ ಬೆಟ್ಟದ ನಿವಾಸಿಗಳಿಗೆ ಭೂಕುಸಿತ (Landslide) ಉಂಟಾಗುವ ಅತಂಕ ಎದುರಾಗಿದ್ರೂ ಬೆಟ್ಟದಲ್ಲಿಯೇ ಬದುಕು ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮಡಿಕೇರಿ (Madikeri) ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ 2-3 ದಿನಗಳಿಂದ ನಿರಂತರ ಮಳೆಯಾಗುತ್ತಿರೋದ್ರಿಂದ (Heavy Rain) ಮೇಕೇರಿ ಗ್ರಾಮದಲ್ಲಿ ನವಗ್ರಾಮ ಹಾಗೂ ಶಕ್ತಿ ನಗರದಲ್ಲಿ ಭೂಕುಸಿತದ ಅತಂಕ ಮನೆ ಮಾಡಿದೆ. ಈ ವ್ಯಾಪ್ತಿಯ ಬೆಟ್ಟದ ತಪ್ಪಲಿನಲ್ಲಿರುವ ಸುಮಾರು 13 ಮನೆಗಳು ಅಪಾಯದ ಅಂಚಿನಲ್ಲಿದ್ದು ಕೆಲ ಮನೆಗಳ ಹಿಂಭಾಗದ ನೆಲ ಬಿರುಕು ಬಿಟ್ಟಿದೆ. ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಬೆಟ್ಟದ ಮೇಲಿರುವ ಮನೆಗಳ ಹಿಂಬದಿಯ ಗುಡ್ಡಗಳು ಜರುಗುತ್ತಿದೆ.

Kodagu Landslide

ಇದೀಗ ಮಳೆ ಹೆಚ್ಚಾದ ಹಿನ್ನೆಲೆ ನೆಲ ಕೂಡ ಬಿರುಕುಬಿಟ್ಟಿದೆ. ಇನ್ನೂ ಬೆಟ್ಟದಲ್ಲಿ ಭೂಕುಸಿತದ ಭೀತಿ ಇರುವುದರಿಂದ ಈಗಾಗಲೇ ಅಲ್ಲಿನ ಮೂರು ಮನೆಗಳಿಗೆ ತೆರಳಲು ಇದ್ದ ಸಣ್ಣ ಕಾಲು ದಾರಿ ಕೂಡ ಮುಚ್ಚಿಹೋಗಿದೆ. ಮುಂಜಾಗ್ರತಾ ಕ್ರಮವಾಗಿ 3 ಕುಟುಂಬಗಳೂ ಸದ್ಯ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ. ಇದನ್ನೂ ಓದಿ: ಬೇಲ್‌ ನೀಡುವಾಗ ಹೈಕೋರ್ಟ್ ತನ್ನ ವಿವೇಚನೆ ಬಳಸಿಲ್ಲ – ನ್ಯಾ.ಪರ್ದಿವಾಲಾ ಅಭಿಪ್ರಾಯ

ಇನ್ನೂ ಈ ಬೆಟ್ಟದ ತಪ್ಪಲಿನಲ್ಲಿ ವಾಸಿಸುತ್ತಿರುವ ಹತ್ತಾರು ಕುಟುಂಬಗಳು 2018 ರಿಂದಲ್ಲೇ ಬೆಟ್ಟದ ಮೇಲೆ ಆತಂಕ ನಡುವೆ ಜೀವನ ಸಾಗಿಸುತ್ತಿದ್ದಾರೆ. ಈ ನಡುವೆ ಕಳೆದ ವರ್ಷದಿಂದ ಈ ವರ್ಷದ ಮಳೆಗಾಲದಿಂದ ಹಲವೆಡೆ ಚಿಕ್ಕಪುಟ್ಟ ಭೂಕುಸಿತಗಳು ಆಗಿವೆ. ಹೀಗಾಗಿ ಇಲ್ಲಿನ ಜನರು ನಿತ್ಯ ಭಯದಲ್ಲೇ ಜೀವನ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸಿಎಂ ನಿತೀಶ್ ಕುಮಾರ್ ಪಕ್ಷದ ನಾಯಕನ ಬರ್ಬರ ಹತ್ಯೆ – ನಾಲ್ಕೇ ದಿನಗಳಲ್ಲಿ 2ನೇ ರಾಜಕೀಯ ಹತ್ಯೆ

Kodagu Landslide 4

ಈ ಬಗ್ಗೆ ಗ್ರಾಮ ಪಂಚಾಯತಿ ಸದಸ್ಯರನ್ನು ಕೇಳಿದ್ರೆ. ಹಲವಾರು ವರ್ಷಗಳಿಂದ ಇಲ್ಲಿನ ಜನರು ಭಯದ ವಾತಾವರಣದಲ್ಲೇ ಮಳೆಗಾಲವನ್ನು ಕಳೆಯುತ್ತಿದ್ದಾರೆ. ಇವರ ಸಮಸ್ಯೆ ಬಗ್ಗೆ ಅನೇಕ ಬಾರಿ ಜಿಲ್ಲಾಡಳಿತ ಹಾಗೂ ಶಾಸಕರ ಬಳಿ ಇಲ್ಲಿನ ಸಮಸ್ಯೆ ಬಗ್ಗೆ ಗಮನ ಸೇಳೆಯಲಾಗಿದೆ. ಶಾಸಕ ಎ.ಎಸ್ ಪೋನ್ನಣ್ಣ ಅವರು ಮುಂದಿನ ದಿನಗಳಲ್ಲಿ ಸ್ಪಂದಿಸುವ ಭರವಸೆ ನೀಡಿದ್ದಾರೆಂದು ತಿಳಿಸಿದ್ದಾರೆ. ಇದನ್ನೂ ಓದಿ: ಭೀಮಾತೀರದ ಹಂತಕನ ಮಾಜಿ ಶಿಷ್ಯ ಸುಶೀಲ್ ಕಾಳೆ ಹತ್ಯೆ ಕೇಸ್ – ಪರಾರಿಯಾಗಿದ್ದ ನಾಲ್ವರು ಅರೆಸ್ಟ್

Kodagu Landslide 3

ಪಂಚಾಯಿತಿ ಪಿಡಿಓ ಇದಕ್ಕೆ ಪ್ರತಿಕ್ರಿಯಿಸಿದ್ದು, ಬೆಟ್ಟದ ನಿವಾಸಿಗಳು‌ ಡೇಂಜರ್‌ ಪರಿಸ್ಥಿತಿಯಲ್ಲಿದ್ದಾರೆ. ಈ ಭಾಗದ ಜನರ ಪರಿಸ್ಥಿತಿ ಬಗ್ಗೆ ಸಂಬಂಧಪಟ್ಟ ಇಲಾಖೆಯ ಆದಿಕಾರಿಗಳಿಗೆ ಗಮನಕ್ಕೆ ತರಲಾಗಿದೆ. ಮುಂದಿನ ದಿನಗಳಲ್ಲಿ ಅವರ ಜೀವದ ರಕ್ಷಣೆ ನಮ್ಮ ಹೋಣೆಯಾಗಿರುವುದರಿಂದ ಅವರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದೇವೆ ಬಾರೀ ಮಳೆಯಾಗುವ ಸಂದರ್ಭದಲ್ಲಿ ಒತ್ತಾಯ ಪೂರ್ವಕವಾಗಿ ಕಾಳಜಿ ಕೇಂದ್ರಗಳಿಗೆ ಕರೆತರಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: India’s Cleanest City: ದೇಶದ ‘ಸ್ವಚ್ಛ ನಗರ’ ಪಟ್ಟಿಯಲ್ಲಿ ಇಂದೋರ್‌ ನಂ.1 – ಮೈಸೂರಿಗೆ 3ನೇ ಸ್ಥಾನ

Share This Article