ಮೈಸೂರು: ಚಾಮುಂಡಿ ಬೆಟ್ಟದಲ್ಲಿ(Chamundi Hills) ಮತ್ತೆ ಭೂಕುಸಿತ ಉಂಟಾಗಿದೆ. ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಭೂ ಕುಸಿತ ಉಂಟಾಗಿದ್ದ ಚಾಮುಂಡಿ ಬೆಟ್ಟದ ನಂದಿ ಮಾರ್ಗದ(Nandi Road) ರಸ್ತೆಯ ಮತ್ತೊಂದು ಭಾಗದಲ್ಲಿ ಈ ಕುಸಿತ ಉಂಟಾಗಿದೆ.
Advertisement
ಕುಸಿತವಾಗಿರುವ ಜೊತೆಗೆ ಮತ್ತೊಂದಿಷ್ಟು ಭಾಗದ ರಸ್ತೆಯು ಬಿರುಕು ಬಿಟ್ಟಿರುವ ಕಾರಣ ಇದೇ ಭಾಗದಲ್ಲಿ ಮತ್ತೆ ಭೂಕುಸಿತವಾಗುವ ಸಾಧ್ಯತೆ ಹೆಚ್ಚಿದೆ. ಇದನ್ನೂ ಓದಿ: ವ್ಯರ್ಥವಾಯ್ತು 10 ಕೋಟಿ ಕೋವಿಶೀಲ್ಡ್ ಡೋಸ್
Advertisement
Advertisement
ಭಾರೀ ಮಳೆಯಿಂದಾಗಿ ಮೈಸೂರಿನ ಜಯಲಕ್ಷ್ಮಿಪುರಂನ ಹಲವೆಡೆ ಭಾರೀ ಪ್ರಮಾಣದ ಮರಗಳು ಬುಡಸಮೇತ ಮನೆಗಳ ಮೇಲೆ ಉರುಳಿ ಬಿದ್ದಿವೆ. ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು ಕೂಡ ಮುರಿದು ಬಿದ್ದಿವೆ.