ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದ ರಸ್ತೆಯಲ್ಲಿ ಮತ್ತೊಮ್ಮೆ ಗುಡ್ಡ ಕುಸಿತವಾಗಿದ್ದು, ಮಾರ್ಗ ಮಧ್ಯೆ ಬೃಹತ್ ಬಂಡೆಯೊಂದು ಉರುಳುವ ಆತಂಕ ಎದುರಾಗಿದೆ.
ಮಿರ್ಜಾ ಸರ್ಕಲ್ ಮುಂಭಾಗದ ತಿರುವಿನಲ್ಲಿ ಈ ಘಟನೆ ನಡೆದಿದೆ. ಭಾರೀ ಮಳೆ (Rain) ಗೆ ನಂದಿಬೆಟ್ಟದಲ್ಲಿ ಗುಡ್ಡ ಕುಸಿತವಾಗಿದೆ. ಮಣ್ಣು ಹಾಗೂ ಬಂಡೆಗಳು ರಸ್ತೆಯ ಮುಕ್ಕಾಲು ಭಾಗ ಆವರಿಸಿವೆ. ಇದೀಗ ಮತ್ತೊಂದು ಬೃಹದಾಕಾರದ ಬಂಡೆ ಸಹ ಉರುಳುವ ಆತಂಕ ಎದುರಾಗಿದೆ. ಸದ್ಯ ಆತಂಕದಲ್ಲೇ ನಂದಿಬೆಟ್ಟ(NandiHills) ಕ್ಕೆ ವಾಹನಗಳು ಸಂಚರಿಸುತ್ತಿವೆ.
Advertisement
Advertisement
ಕಳೆದ ಜೂನ್ ತಿಂಗಳಿನಲ್ಲಿಯೂ ಭಾರೀ ಮಳೆಗೆ ಎರಡು ಕಡೆಗಳಲ್ಲಿ ಗುಡ್ಡಕುಸಿತ (Landslide) ವಾಗಿತ್ತು. ಸುಲ್ತಾನಪೇಟೆ ಗ್ರಾಮದ ಕಡೆ ಎರಡು ಕಡೆ ಗುಡ್ಡಗಳು ಕುಸಿದಿದೆ. ಸುಲ್ತಾನಪೇಟೆಯಿಂದ ನಂದಿಬೆಟ್ಟಕ್ಕೆ ತೆರಳುವ ಮೆಟ್ಟಿಲು ಮಾರ್ಗದ ಕಡೆ ವೀರಭದ್ರ ಸ್ವಾಮಿ ದೇಗುಲದ ಭಾಗದಲ್ಲಿ ಭೂ ಕುಸಿತವಾಗಿತ್ತು. ಇದನ್ನೂ ಓದಿ: ನಂದಿಬೆಟ್ಟದಲ್ಲಿ ಎರಡು ಕಡೆ ಗುಡ್ಡ ಕುಸಿತ
Advertisement
Advertisement
ಇದೇ ಸುಲ್ತಾನಪೇಟೆ ಗ್ರಾಮದ ಮತ್ತೊಂದು ಭಾಗದಲ್ಲಿ ಕೂಡ ಭೂ ಕುಸಿತವಾಗಿತ್ತು. ಬೃಹತ್ ಗಾತ್ರದ ಕಲ್ಲು ಬಂಡೆಗಳು ಮರಗಳು ಮಣ್ಣು ಸಮೇತ ಕೊಚ್ಚಿಕೊಂಡು ಬಂದಿದ್ದವು. ಈ ಗುಡ್ಡ ಕುಸಿತ ಉಂಟಾದ ಭಾಗದಿಂದ ಝರಿಯಂತೆ ನೀರು ಹರಿದುಬಂದಿತ್ತು.