ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಳಚೆ ಗ್ರಾಮದಲ್ಲಿ ಭೂ ಕುಸಿತಗೊಂಡಿದೆ. ಕಳೆದ ವರ್ಷ ಜುಲೈನಲ್ಲಿ ಭೂಕುಸಿತಗೊಂಡು ಕಳಚೆ ಗ್ರಾಮದಲ್ಲಿ 50ಕ್ಕೂ ಹೆಚ್ಚು ಮನೆಗಳು ಹಾನಿಯಾಗಿತ್ತು ಇದೀಗ ಮತ್ತೆ ಗುಡ್ಡ ಕುಸಿತವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
Advertisement
ಗ್ರಾಮಸ್ಥರಲ್ಲಿ ಭಯ:
ಈ ಹಿಂದೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುದಿನವೇ ಈ ಗ್ರಾಮಕ್ಕೆ ಭೇಟಿ ನೀಡಿದ್ದರು. ಇಡೀ ಗ್ರಾಮ ಸ್ಥಳಾಂತರಿಸಲು ಅಧಿಕಾರಿಗಳಿಗೆ ಆದೇಶಿಸಿದ್ದರು. ಆದರೇ ಈ ಗ್ರಾಮದ ಜನರನ್ನು ಇದುವರೆಗೂ ಸ್ಥಳಾಂತರಿಸಿಲ್ಲ. ಇದನ್ನೂ ಓದಿ: ಆನ್‍ಲೈನ್‍ನಲ್ಲಿ ದೇಗುಲಕ್ಕೆ ಕಾಣಿಕೆ – ಯೋಜನೆಗೆ ಬುಧವಾರ ಸಿಎಂ ಚಾಲನೆ
Advertisement
ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಚೆಯಲ್ಲಿ ಜುಲೈ 22 ಮತ್ತು 23 ರಂದು ಭಾರಿ ಪ್ರಮಾಣದಲ್ಲಿ ಬೆಟ್ಟ, ಗುಡ್ಡ ಕುಸಿದಿದ್ದವು. ಊರಿನ ಚಿತ್ರಣವೇ ಬದಲಾಗಿತ್ತು. ಅಂದು ಪ್ರವಾಹ ಕಂಡಿದ್ದ ಗ್ರಾಮದಲ್ಲಿ ಈಗ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ. ಇಲ್ಲಿ ಪ್ರಕೃತಿ ವಿಕೋಪಕ್ಕೂ ಮೊದಲು, ನೈಸರ್ಗಿಕವಾಗಿ ಸಿಗುತ್ತಿದ್ದ ನೀರನ್ನು ಮನೆಗಳಲ್ಲಿ ಬಳಸಲಾಗುತ್ತಿತ್ತು. ಈಗ ಅಂತಹ ಬಹುತೇಕ ಜಲಮೂಲಗಳು ನಾಶವಾಗಿವೆ. ಗುಡ್ಡಗಳೇ ಕೊಚ್ಚಿಕೊಂಡು ಹೋಗಿದ್ದು, ನೀರಿನ ಹರಿವು ಬದಲಾದ್ದರಿಂದ ಹಳ್ಳಗಳು ಒಣಗಿವೆ. ಕಳಚೆಯ ಒಂದು ಭಾಗದಲ್ಲಿ ಕೆಲವರು ತಲಾ 10 ಸಾವಿರ ಖರ್ಚು ಮಾಡಿ ಪೈಪ್‍ಲೈನ್ ಅಳವಡಿಸಿಕೊಂಡಿದ್ದಾರೆ. ಮತ್ತೊಂದು ಕಡೆಗೆ ಅದೂ ಸಾಧ್ಯವಾಗಿಲ್ಲ. ಇದರಿಂದ ಬೇಸತ್ತ ಕೆಲವರು ಊರು ಬಿಟ್ಟು ಯಲ್ಲಾಪುರದಲ್ಲಿ ವಾಸಿಸುತ್ತಿದ್ದಾರೆ.
Advertisement
Advertisement
ಮುನ್ನೆಚ್ಚರಿಕೆ ಅಗತ್ಯ
ಕಳಚೆಯಲ್ಲಿ ಮತ್ತೆ ಭೂ ಕುಸಿತವಾಗಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಎಚ್ಚರಿಗೆ ನೀಡಿದ್ದು ಈ ಪ್ರದೇಶ ವಾಸಿಸಲು ಯೋಗ್ಯವಾಗಿಲ್ಲ ಎಂದು ವರದಿ ನೀಡಿದೆ. ಆದರೇ ಪರ್ಯಾಯ ವ್ಯವಸ್ಥೆಯನ್ನು ಸರ್ಕಾರ ನೀಡದೆ ನಿರ್ಲಕ್ಷ ಮಾಡಿದೆ. ಸಂತ್ರಸ್ತರಿಗೆ ಪರ್ಯಾಯ ಜಾಗ ಕೊಡಲಾಗದಿದ್ದರೆ ಅರಣ್ಯ ಇಲಾಖೆಯಿಂದ ಈ ಭೂ ಭಾಗವನ್ನು ವನ್ಯಜೀವಿ ವಲಯಕ್ಕೆ ಸೇರಿಸಿ ಪರಿಹಾರ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಸದ್ಯ ಕಳಚೆ ಗ್ರಾಮದ ಭೂ ಪ್ರದೇಶ ಅತೀ ಅಪಾಯಕಾರಿಯಾಗಿ ಪರಿಣಮಿಸಿದ್ದು ಯಾವಾಗ ಬೇಕಾದರೂ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಸರ್ಕಾರ ನಿರ್ಲಕ್ಷ ಮಾಡದೇ ಪರ್ಯಾಯ ವ್ಯವಸ್ಥೆಯನ್ನು ಆದಷ್ಟು ಬೇಗ ನೀಡಬೇಕಾಗಿದೆ. ಇದನ್ನೂ ಓದಿ: ಕಡ್ಡಾಯ ಮಾಡಬಾರದು, ಹಿಜಬ್ ಧರಿಸುವುದು ಮಹಿಳೆಯರ ಆಯ್ಕೆಗೆ ಬಿಡಬೇಕು: ಸರ್ಕಾರ