– ಸಭಾತ್ಯಾಗ, ಪ್ರತಿಭಟನೆ ಮೂಲಕ ಬಿಸಿ ಮುಟ್ಟಿಸಿದ ಡಿಎಂಕೆ ಸಂಸದರು
ನವದೆಹಲಿ: ಹೊಸ ಶಿಕ್ಷಣ ನೀತಿ ಮತ್ತು ತ್ರಿಭಾಷಾ ಸೂತ್ರಕ್ಕೆ ವಿರೋಧ (language war) ವ್ಯಕ್ತಪಡಿಸುತ್ತಿರುವ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ವಿರೋಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ತಮಿಳುನಾಡಿನಲ್ಲಿ (Tamil Nadu) ವಿದ್ಯಾರ್ಥಿಗಳ ಅಭಿವೃದ್ಧಿ ಬಗ್ಗೆ ಡಿಎಂಕೆ ಪಕ್ಷವು ಅಪ್ರಾಮಾಣಿಕ ಮತ್ತು ಅಸಡ್ಡೆ ಹೊಂದಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಬಿಹಾರದಲ್ಲಿ ಸೀತಾ ಮಾತೆಯ ಭವ್ಯ ಮಂದಿರ ನಿರ್ಮಾಣಕ್ಕೆ ಬಿಜೆಪಿ ಪ್ಲ್ಯಾನ್
ಡಿಎಂಕೆ ನಾಯಕರು ತಮಿಳುನಾಡಿನ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ, ಅವರ ಏಕೈಕ ಕಾರ್ಯಸೂಚಿ ಭಾಷಾ ಆಧಾರಿತ ವಿಭಜನೆಗಳನ್ನು ಹುಟ್ಟುಹಾಕುವುದು. ಅವರು ರಾಜಕೀಯ ಕಿಡಿಗೇಡಿತನ ಮಾಡುತ್ತಿದ್ದಾರೆ. ಅವರು ಪ್ರಜಾಪ್ರಭುತ್ವ ವಿರೋಧಿ ಮತ್ತು ಅನಾಗರಿಕರು ಎಂದು ಅವರು ಟೀಕಿಸಿದರು.
ಪ್ರಧಾನ್ ಅವರು ಡಿಎಂಕೆ ಪಕ್ಷದ ವಿರುದ್ಧ ಮಾಡಿದ ಕಟು ಟೀಕೆ ಕೋಲಾಹಲಕ್ಕೆ ಕಾರಣವಾಯಿತು, ಇದು ಡಿಎಂಕೆ ಸಂಸದರ ಪ್ರತಿಭಟನೆಗೆ ಕಾರಣವಾಯಿತು ಮತ್ತು ಕಲಾಪವನ್ನು 30 ನಿಮಿಷಗಳ ಕಾಲ ಮುಂದೂಡಲಾಯಿತು. ರಾಜ್ಯಸಭೆಯಲ್ಲೂ ತ್ರಿಭಾಷಾ ನೀತಿ ಮತ್ತು ಗಡಿ ರಚನಾ ವಿಷಯಗಳ ವಿಷಯವನ್ನು ಎತ್ತಿದ್ದ ನಂತರ ಡಿಎಂಕೆ ಸಭಾತ್ಯಾಗ ಮಾಡಿತು.
ಸಭಾತ್ಯಾಗದ ಬಗ್ಗೆ ವಿರೋಧ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ, ಇದು ಬೇಜವಾಬ್ದಾರಿ ವರ್ತನೆ, ಅವರು ನಿಯಮಗಳನ್ನು ಅರ್ಥಮಾಡಿಕೊಳ್ಳಬೇಕು. ಇದು ಸಂಸತ್ತಿನ ಅವಮಾನಿಸುವ ದುಷ್ಟ ಸಂಚು, ನಮ್ಮ ಸರ್ಕಾರ ನಿಯಮಗಳ ಅಡಿಯಲ್ಲಿ ಎಲ್ಲವನ್ನೂ ಚರ್ಚಿಸಲು ಸಿದ್ಧವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಸರ್ಕಾರಿ ವೈದ್ಯಕೀಯ ಕಾಲೇಜು ವೈದ್ಯರ ಹಾಜರಾತಿಗೆ ಬಯೋ ಮೆಟ್ರಿಕ್ ವ್ಯವಸ್ಥೆ: ಶರಣು ಪ್ರಕಾಶ್ ಪಾಟೀಲ್