ಕೊಲಂಬೋ: ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
ಶ್ರೀಲಂಕಾದಲ್ಲಿನ ಆರ್ಥಿಕ ಬಿಕ್ಕಟ್ಟಿನಿಂದ ಕಂಗಲಾಗಿರುವ ಸಾವಿರಾರು ಮಂದಿ ಧಂಗೆ ಎದ್ದಿದ್ದು, ಅಧ್ಯಕ್ಷ ಗೊಟಬಯ ರಾಜಪಕ್ಸೆ ಅಧಿಕೃತ ನಿವಾಸವನ್ನು ಆಕ್ರಮಿಸಿಕೊಂಡಿದ್ದರು. ಈ ಬಳಿಕ ಗೊಟಬಯ ರಾಜಪಕ್ಸೆ ಅವರು ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶನಿವಾರ ತಿಳಿಸಿದ್ದರು. ಆದರೆ ರಾಜೀನಾಮೆ ನೀಡುವುದಕ್ಕೂ ಮುನ್ನವೇ ರಾಜಪಕ್ಸೆ ಅವರು ಮಾಲ್ಡೀವ್ಸ್‌ಗೆ ತಮ್ಮ ಪತ್ನಿ ಹಾಗೂ ಇಬ್ಬರು ಅಂಗರಕ್ಷಕರೊಂದಿಗೆ ಲಂಕಾ ವಾಯುಪಡೆಯ ವಿಮಾನದಲ್ಲಿ ಮಾಲ್ಡೀವ್ಸ್‌ನ ರಾಜಧಾನಿ ಮಾಲೆಗೆ ತೆರಳಿದ್ದಾರೆ.
Advertisement
Advertisement
ಇದರಿಂದ ರೊಚ್ಚಿಗೆದ್ದಿರುವ ಜನರು ಗೊಟಬಯ ರಾಜಪಕ್ಸೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಏಕಾಏಕಿ ಸಾವಿರಾರು ಮಂದಿ ಲಂಕಾ ಸಂಸತ್ತಿನ ಗೇಟ್‍ಗಳನ್ನು ತಳ್ಳಿ ಸಾವಿರಾರು ಜನರು ಪ್ರಧಾನಿ ರನಿಲ್ ವಿಕ್ರಮಸಿಂಘೆ ಕಚೇರಿಗೆ ನುಗ್ಗಿ ಧಾಂದಲೇ ನಡೆಸಿದ್ದು, ಪೊಲೀಸರು ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಯೋಗ ನಡೆಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ – 5 ವಾರಗಳಲ್ಲಿ ಎರಡನೇ ಬಾರಿ ಹೇರಿಕೆ
Advertisement
ಪ್ರತಿಭಟನಾಕಾರರು ಹೆಚ್ಚಾಗುತ್ತಿದ್ದು, ಅವರನ್ನು ನಿಯಂತ್ರಿಸಲು ಕೊಲಂಬೊ ಸೇರಿದಂತೆ ಪಶ್ಚಿಮ ಪ್ರಾಂತ್ಯದಾದ್ಯಂತ ಕರ್ಫ್ಯೂ ವಿಧಿಸಲಾಗಿದೆ. ಕಚೇರಿ ಮೇಲೆ ದಾಳಿ ನಡೆಸುತ್ತಿರುವ ಹಲವಾರು ಗಲಭೆಕೋರರನ್ನು ಬಂಧಿಸುವಂತೆ ಪ್ರಧಾನಿ ಭದ್ರತಾ ಪಡೆಗಳಿಗೆ ಆದೇಶಿಸಿದ್ದಾರೆ.
Advertisement
ಈ ಮುನ್ನ ಜುಲೈ 7 ರಂದು ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು. ಆರ್ಥಿಕ ಬಿಕ್ಕಟ್ಟಿನ ಬಳಿಕ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆ ನಡೆದಿತ್ತು. ಕಳೆದ ಕೆಲ ತಿಂಗಳ ಬಳಿಕ ಶ್ರೀಲಂಕಾದಲ್ಲಿ ಅಗತ್ಯ ವಸ್ತುಗಳು, ಆಹಾರ ಸೇರಿದಂತೆ ತೈಲ ಸಿಗದೆ ಜನ ತತ್ತರಿಸಿ ಹೋಗಿದ್ದರು. ಆ ಬಳಿಕ ಜನ ಪ್ರತಿಭಟನೆಗೆ ಮುಂದಾಗಿದ್ದರು. ಇದನ್ನೂ ಓದಿ: ರಾಜೀನಾಮೆಗೂ ಮುನ್ನವೇ ಮಾಲ್ಡೀವ್ಸ್‌ಗೆ ಹಾರಿದ ಗೊಟಬಯ ರಾಜಪಕ್ಸೆ
ಇದಕ್ಕೂ ಮುನ್ನ ಕೂಡ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ಸಂಸತ್‍ನತ್ತ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಲಾಗಿತ್ತು. ಈ ವೇಳೆ ಕೂಡ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು. ಇದೀಗ ಮತ್ತೆ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.