ಬಾಲಿವುಡ್‌ನ ‘ರಾಮಾಯಣ’ (Ramayana Film) ಚಿತ್ರದ ಮೇಲೆ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ. ರಾಮನಾಗಿ ರಣ್‌ಬೀರ್ ಕಪೂರ್ (Ranbir Kapoor), ಸೀತೆಯಾಗಿ ಸಾಯಿ ಪಲ್ಲವಿ (Sai Pallavi) ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಕೈಕೇಯಿ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿಗೆ ಲಾರಾ ದತ್ತಾ ಸ್ಪಷ್ಟನೆ ನೀಡಿದ್ದಾರೆ.
‘ರಾಮಾಯಣ’ ಚಿತ್ರದಲ್ಲಿ ಕೈಕೇಯಿ ಪಾತ್ರದಲ್ಲಿ ನಟಿಸುತ್ತಿದ್ದೀರಾ? ಎಂಬ ಪ್ರಶ್ನೆ ನಟಿಗೆ ಸಂದರ್ಶನವೊಂದರಲ್ಲಿ ಎದುರಾಗಿದೆ. ನಾನು ಕೂಡ ಈ ಬಗ್ಗೆ ತುಂಬಾ ಕೇಳುತ್ತಿದ್ದೇನೆ. ನಾನು ಆ ಬಗ್ಗೆ ಓದಲು, ಕೇಳಲು ಇಷ್ಟಪಡುತ್ತೇನೆ. ಆದ್ದರಿಂದ ದಯವಿಟ್ಟು ಮುಂದುವರಿಸಿ ಎಂದು ಲಾರಾ ಮಾತನಾಡಿದ್ದಾರೆ. ಇದನ್ನೂ ಓದಿ:ಪವನ್ ಕಲ್ಯಾಣ್ ನಟನೆಯ ‘ಹರಿಹರ ವೀರ ಮಲ್ಲು’ ಟೀಸರ್ ರಿಲೀಸ್

‘ರಾಮಾಯಣ’ ಚಿತ್ರ ಬಿಗ್ ಬಜೆಟ್‌ನಲ್ಲಿ ಮೂಡಿ ಬರುತ್ತಿದೆ. ಸಿನಿಮಾ ನಿರ್ಮಾಣಕ್ಕೆ ‘ಕೆಜಿಎಫ್ 2’ (KGF 2) ನಟ ಯಶ್ (Yash) ಕೂಡ ಸಾಥ್ ನೀಡುತ್ತಿದ್ದಾರೆ.


