ಮಂಡ್ಯ: ಕೆಆರ್‌ಎಸ್ ಡ್ಯಾಂನಿಂದ (KRS Dam) ತಮಿಳುನಾಡಿಗೆ (Tamil Nadu) ಬಿಡುಗಡೆಯಾಗುವ ನೀರಿನ ಪ್ರಮಾಣ ದಿನೇ ದಿನೇ ಹೆಚ್ಚಿಸಲಾಗುತ್ತಿದೆ. ಸುಪ್ರೀಂ ಕೋರ್ಟ್ (Supreme Court) ಆದೇಶಕ್ಕೂ ಮುನ್ನ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುತ್ತಿದ್ದಾರೆ.
ಭಾನುವಾರ ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ 5,238 ಕ್ಯೂಸೆಕ್ ನೀರು ಬಿಡುಗಡೆಯಾದರೆ, ಸೋಮವಾರ 5,243 ಕ್ಯೂಸೆಕ್ ನೀರು ಬಿಡುಗಡೆಯಾಗಿದೆ. ಮಂಗಳವಾರ 8,590 ಕ್ಯೂಸೆಕ್ ನೀರು ಹಾಗೂ ಇಂದು ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ 9,136 ಕ್ಯೂಸೆಕ್ ನೀರು ಬಿಡುಗಡೆಯಾಗುತ್ತಿದೆ.
Advertisement
Advertisement
ಕೆಆರ್‌ಎಸ್‌ನಿಂದ ರಾಜ್ಯಕ್ಕೆ ನೀರು ಬಿಡುಗಡೆಗಾಗಿ ತಮಿಳುನಾಡು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಆದರೆ ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನವೇ ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ದಿನೇ ದಿನೇ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದನ್ನೂ ಓದಿ: ಸಚಿವ ಸಂಪುಟದ ದೋಸ್ತಿಗಳ ನಡುವೆ ಮಹಾ ಬಿರುಕಿದೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಶಾಸಕ
Advertisement
Advertisement
ಕೆಆರ್‌ಎಸ್ ಡ್ಯಾಂನ ಇಂದಿನ ನೀರಿನ ಮಟ್ಟ:
ಗರಿಷ್ಠ ಮಟ್ಟ – 124.80 ಅಡಿ
ಇಂದಿನ ಮಟ್ಟ – 111.08 ಅಡಿ
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇAದಿನ ಸಾಂದ್ರತೆ – 32.820 ಟಿಎಂಸಿ
ಒಳಹರಿವು – 3,078 ಕ್ಯೂಸೆಕ್
ಹೊರಹರಿವು – 11,602 ಕ್ಯೂಸೆಕ್ ಇದನ್ನೂ ಓದಿ: ಸೇತುವೆ ನಿರ್ಮಿಸಿಕೊಡಿ ಪ್ಲೀಸ್: ಪ್ರಧಾನಿ ಮೋದಿಗೆ ಮಕ್ಕಳ ಪತ್ರ
Web Stories