Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಚಿಕ್ಕಮಗಳೂರಿನಲ್ಲಿ ತಲೆ ಎತ್ತಲಿದೆ ಸಾಂಬಾರ್ ಪಾರ್ಕ್

Public TV
Last updated: August 27, 2021 10:18 pm
Public TV
Share
2 Min Read
murugesh nirani shobha karandlaje
SHARE

ಬೆಂಗಳೂರು: ಮಲೆನಾಡು ಜನತೆಯ ಬಹುದಿನಗಳ ಬೇಡಿಕೆಯಾದ ಸಾಂಬಾರ್(ಸ್ಪೈಸ್) ಪಾರ್ಕ್ ಸದ್ಯದಲ್ಲೇ ತಲೆ ಎತ್ತಲಿದ್ದು, ದಶಕಗಳ ಕನಸು ಕೊನೆಗೂ ನನಸಾಗುವ ದಿನ ಸಮೀಪಿಸಿದೆ.

ಶುಕ್ರವಾರ ರೇಸ್‍ಕೋರ್ಸ್ ರಸ್ತೆಯ ಖನಿಜ ಭವನದಲ್ಲಿರುವ ಉದ್ಯೋಗ ಮಿತ್ರದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಹಾಗೂ ಕೇಂದ್ರ ಕೃಷಿ ಮತ್ತು ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರು ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

murugesh nirani shobha karandlaje 2

ಚಿಕ್ಕಮಗಳೂರು ಜಿಲ್ಲೆಯ ಹೊಸಕೋಟೆ ಸಮೀಪದ ಅಂಬಾಲಿ ಗ್ರಾಮದಲ್ಲಿ ಸುಮಾರು 10 ಎಕರೆ ಜಮೀನಿನಲ್ಲಿ ಸಾಂಬಾರು ಪಾರ್ಕ್ ನಿರ್ಮಿಸಲು ಸಭೆ ಒಮ್ಮತದ ತೀರ್ಮಾನವನ್ನು ಕೈಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರವೇಶಾಭಿವೃದ್ಧಿ ನಿಗಮ(ಕೆಐಎಡಿಬಿ)ವು 20,35,665 ರೂ. ಆರ್ಥಿಕ ನೆರವು ನೀಡಲಿದ್ದು, 10 ಎಕರೆ ಜಮೀನನಿನಲ್ಲಿ ಪಾರ್ಕ್ ನಿರ್ಮಾಣವಾಗಲಿದೆ. ಇದನ್ನೂ ಓದಿ: ಈ ಬಾರಿಯೂ ಗಣೇಶ ಹಬ್ಬವನ್ನು ಸರಳವಾಗಿ ಆಚರಿಸಬೇಕು: ಬಿಎಸ್‍ವೈ

ಚಿಕ್ಕಮಗಳೂರಿನಲ್ಲಿ ಸಾಂಬಾರ್ ಪಾರ್ಕ್ ನಿರ್ಮಾಣವಾಗಬೇಕೆಂಬುದು ದಶಕಗಳ ಬೇಡಿಕೆಯಾಗಿತ್ತು. ಅದು ಒಂದಿಲ್ಲೊಂದು ಕಾರಣಗಳಿಂದ ಮುಂದೂಡಿಕೆಯಾಗುತ್ತಲೇ ಇತ್ತು. ಇತ್ತೀಚೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಮುರುಗೇಶ್ ನಿರಾಣಿ ಜೊತೆ ಶೋಭಾ ಕರಂದ್ಲಾಜೆ ಅವರು ಮಾತುಕತೆ ನಡೆಸಿದ್ದರು. ಜೊತೆಗೆ ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತರಿಗೆ ಮಾರುಕಟ್ಟೆಯ ದರದಂತೆ ಜಾಗದ 20,35,665 ರೂ. ಪಾವತಿಸಿದ್ದರು. ಇದಕ್ಕೆ ತಕ್ಷಣವೇ ಸ್ಪಂದಿಸಿದ್ದ ನಿರಾಣಿಯವರು ಚಿಕ್ಕಮಗಳೂರಿನ ಸೂಕ್ತ ಸ್ಥಳದಲ್ಲಿ ಕೆಐಎಡಿಬಿಯಿಂದ ಜಾಗ ಗುರುತಿಸುವಂತೆ ಸೂಚನೆ ನೀಡಿದ್ದರು.

ರಾಜ್ಯದಲ್ಲಿ ರೈತರು ಬೆಳೆಯುವ ಕೃಷಿ ಉತ್ಪನ್ನಗಳನ್ನು ವಿದೇಶಕ್ಕೆ ರಫ್ತು ಮಾಡಲು ವಿಶೇಷ ಘಟಕ ಸ್ಥಾಪನೆ ಮಾಡಬೇಕೆಂಬ ಪ್ರಸ್ತಾವನೆಯನ್ನು ಶೋಭಾ ಕರಂದ್ಲಾಜೆ ಅವರ ಮುಂದಿಟ್ಟರು. ಇದಕ್ಕೆ ತಕ್ಷಣವೇ ಸ್ಪಂದಿಸಿದ ಮುರುಗೇಶ್ ನಿರಾಣಿ ಅವರು, ಶೀಘ್ರದಲ್ಲೇ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ವತಿಯಿಂದ ವಿಶೇಷ ಘಟಕವನ್ನು ಆರಂಭಿಸಲಾಗುವುದು. ರೈತರಿಗೆ ಅನುಕೂಲವಾಗಲು ಯಾವುದೇ ಕ್ರಮ ಕೈಗೊಳ್ಳಲು ಸಿದ್ಧ ಎಂದು ಪ್ರಕಟಿಸಿದರು.

ಇದೇ ಸಂದರ್ಭದಲ್ಲಿ ಸಚಿವ ಮುರುಗೇಶ್ ನಿರಾಣಿ ಅವರು, ತಮ್ಮ ತವರು ಜಿಲ್ಲೆ ಬಾಗಲಕೋಟೆಯ ಜಮಖಂಡಿ ಉಪವಿಭಾಗದಲ್ಲಿ ಕೃಷ್ಣಾನದಿ ಪ್ರವಾಹದಿಂದ ಉಂಟಾಗಿರುವ ಸವಕಳಿ-ಜವಕಳಿ ಮಣ್ಣು ಕುಸಿದ ಬಗ್ಗೆ ಸಚಿವರ ಗಮನ ಸೆಳೆದರು. ಪ್ರತಿ ವರ್ಷ ಮಳೆಗಾಲದಲ್ಲಿ ಪ್ರವಾಹ ಬಂದರೆ ಕೃಷ್ಣನದಿ ಉಕ್ಕಿ ಹರಿದು ಜಮಖಂಡಿ ಉಪವಿಭಾಗದಲ್ಲಿ ಪ್ರವಾಹ ಉಂಟಾಗುತ್ತದೆ. ಇದರಿಂದ ರೈತರ ಜಮೀನಿನಲ್ಲಿರುವ ಫಲವತ್ತಾದ ಮಣ್ಣು ಕೊಚ್ಚಿಹೋಗಿ ರೈತರು ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂದು ಶೋಭಾ ಕರಂದ್ಲಾಜೆ ಅವರಿಗೆ ಮನವರಿಕೆ ಮಾಡಿದರು.

ಅತಿವೃಷ್ಟಿ ಮತ್ತು ಪ್ರವಾಹ ಸಂದರ್ಭದಲ್ಲಿ ಕೃಷಿ ಭೂಮಿಯಲ್ಲಿ ಆಗಬಹುದಾದ ಕೊರಕಲು, ಭೂ ಸವಕಳಿಯಂತಹ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಲು ಹೊಲ ಸಮತಟ್ಟು ಉಳಿಸಲು ರೈತರಿಗೆ ಕೇಂದ್ರದಿಂದ ಅಗತ್ಯ ಪರಿಹಾರ ಒದಗಿಸಲು ಎನ್‍ಡಿಆರ್ ಎಪ್ ಕಾನೂನಿನಲ್ಲಿ ಅವಕಾಶವಿದೆ. ಸರ್ಕಾರ ನೀಡುತ್ತಿರುವ ಪರಿಹಾರವು ರೈತರಿಗೆ ಸಾಕಾಗುತ್ತಿಲ್ಲ. ಇದೊಂದು ಶಾಶ್ವತ ಸಮಸ್ಯೆಯಾಗಿರುವುದರಿಂದ ಕೇಂದ್ರ ಸರ್ಕಾರ ಈಗಿರುವ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಿದರೆ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ಇದಕ್ಕೆ ಸ್ಪಂದಿಸಿದ ಶೋಭಾ ಕರಂದ್ಲಾಜೆ ಅವರು, ಈ ಸಂಬಂಧ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಜೊತೆ ಚರ್ಚಿಸಿ ರೈತರಿಗೆ ಪರಿಹಾರ ಹೆಚ್ಚಳ ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಆಶ್ವಾಸನೆ ನೀಡಿದರು.

TAGGED:ChikkamagaluruMurugesh niraniPublic TVshobha karandlajeSpice Parkಚಿಕ್ಕಮಗಳೂರುಪಬ್ಲಿಕ್ ಟಿವಿಮುರುಗೇಶ್ ನಿರಾಣಿಶೋಭಾ ಕರಂದ್ಲಾಜೆಸ್ಪೈಸ್ ಪಾರ್ಕ್
Share This Article
Facebook Whatsapp Whatsapp Telegram

Cinema news

balaramana dinagalu
ಬಹುಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ ಬಲರಾಮನ ದಿನಗಳು
Cinema Latest South cinema Top Stories
ashwini gowda
ʻನನ್ ತಲೇಲಿ ಬುದ್ಧಿ ಇಲ್ಲ’ ಹೇಳಲು ಅಶ್ವಿನಿ ಒಪ್ಪಲ್ಲ!
Cinema Latest TV Shows
Bigg Boss
ಗಿಲ್ಲಿ ಜೊತೆ ಕಿರಿಕ್ ಮಾಡ್ಕೊಂಡ ಬಿಗ್‌ಬಾಸ್ ಮಾಜಿ ಸ್ಪರ್ಧಿಗಳು
Cinema Latest Sandalwood Top Stories
Sathish Ninasam 2
ʻಏಳೋ ಏಳೋ ಮಾದೇವʼ ಸಾಂಗ್ – ಸತೀಶ್ ನೀನಾಸಂ ಸೂಪರ್
Cinema Latest Sandalwood

You Might Also Like

karnataka high court
Court

KSCA ಚುನಾವಣೆ |ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿ ನಾಳೆಯವರೆಗೆ ಪ್ರಕಟಿಸುವಂತಿಲ್ಲ: ಹೈಕೋರ್ಟ್‌

Public TV
By Public TV
21 minutes ago
cyclone montha rain weather Coast beach
Latest

ಬರ್ತಿದೆ `ಸೆನ್ಯಾರ್’ ಚಂಡಮಾರುತ – ತಮಿಳುನಾಡು, ಕೇರಳ ಸೇರಿ ಕೆಲ ರಾಜ್ಯಗಳಿಗೆ ಮಳೆ ಮುನ್ನೆಚ್ಚರಿಕೆ: IMD

Public TV
By Public TV
27 minutes ago
fraud case accused
Crime

ಇನ್‌ಸ್ಟಾದಲ್ಲಿ ಡಾಕ್ಟರ್‌ ಆಗೋ ಹುಡುಗಿ ಪರಿಚಯ – ಪ್ರೀತಿ, ಮದುವೆ ಹೆಸರಲ್ಲಿ ಅರ್ಧ ಕೆಜಿ ಚಿನ್ನಕ್ಕೆ ಕನ್ನ ಹಾಕಿದ್ದ ಆರೋಪಿ ಅರೆಸ್ಟ್‌

Public TV
By Public TV
27 minutes ago
Pan Masala baron Kamal Kishor Chaurasia Daughter In Law
Crime

ಪಾನ್‌ ಮಸಾಲಾ ಉದ್ಯಮಿಯ ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Public TV
By Public TV
1 hour ago
Satish Jarakiholi dinner meeting with Close MLAs
Bengaluru City

ಡಿಕೆಶಿ ಭೇಟಿ ಬಳಿಕ ಆಪ್ತರ ಜೊತೆ ಜಾರಕಿಹೊಳಿ ಡಿನ್ನರ್‌ ಮೀಟಿಂಗ್‌

Public TV
By Public TV
1 hour ago
Google Meet
Latest

ಭಾರತದಲ್ಲಿ ಗೂಗಲ್ ಮೀಟ್ ಡೌನ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?