– ಕೇಂದ್ರ ಗೃಹ ಸಚಿವಾಲಯಕ್ಕೆ ಕಾಂಗ್ರೆಸ್ ಪತ್ರ
ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಅಮೇಥಿಯಲ್ಲಿ ಅಪಾಯವಿದ್ದು, ರ್ಯಾಲಿ ವೇಳೆ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಕಾಂಗ್ರೆಸ್ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದೆ.
ಕಾಂಗ್ರೆಸ್ ಬರೆದಿರುವ ಪತ್ರದಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ 7 ಬಾರಿ ಅವರ ಮೇಲೆ ಲೇಸರ್ ಗ್ರೀನ್ ಲೈಟ್ ಬಿದ್ದಿದೆ ಎಂದು ಉಲ್ಲೇಖಿಸಿದೆ. ಈ ಬಗ್ಗೆ ತನಿಖೆ ನಡೆಸಬೇಕು ಹಾಗೂ ರಾಹುಲ್ ಅವರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ತಿಳಿಸಿದೆ.
Advertisement
Advertisement
ಲೇಸರ್ ಗ್ರೀನ್ ಲೈಟ್ ರಾಹುಲ್ ಗಾಂಧಿ ಅವರ ತಲೆ ಮೇಲೆ ಸುಮಾರು 7 ಬಾರಿ ಅತಿ ಕಡಿಮೆ ಅವಧಿಯಲ್ಲಿ ಬಿದ್ದಿರುವುದು ದೃಢವಾಗಿದೆ. ಅಲ್ಲದೇ ದೇವಾಲಯದ ಭೇಟಿ ಸಂದರ್ಭದಲ್ಲಿ ಅವರ ಎಡಭಾಗದ ತಲೆ ಮೇಲೆ 2 ಬಾರಿ ಲೇಸರ್ ಬೆಳಕು ಕಾಣಿಸಿತ್ತು ಎಂದು ವಿವರಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ವಿಡಿಯೋವನ್ನು ಕೂಡ ಕಾಂಗ್ರೆಸ್ ಗೃಹ ಸಚಿವಾಲಯಕ್ಕೆ ಪತ್ರದೊಂದಿಗೆ ನೀಡಿದೆ. ಈ ಪತ್ರದಲ್ಲಿ ಅಹ್ಮದ್ ಪಟೇಲ್, ಜೈರಾಮ್ ರಮೇಶ್, ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸಹಿ ಇದೆ.
Advertisement
ರಾಹುಲ್ ಗಾಂಧಿ ಅವರ ರಕ್ಷಣೆಗೆ ಸಂಬಂಧಿಸಿದಂತೆ ಇಂತಹ ಘಟನೆ ಎಚ್ಚರಿಕೆಯ ಸಂದೇಶವಾಗಿರಬಹುದು ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಅಲ್ಲದೇ ಘಟನೆಯಿಂದ ನಾವು ಶಾಕ್‍ಗೆ ಒಳಗಾಗಿದ್ದು, ರಾಹುಲ್ ಗಾಂಧಿ ಅವರನ್ನ ಗುರಿಯಾಗಿಸಿ ಕೊಲೆ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಇಂದಿರಾ ಗಾಂಧಿ, ರಾಹುಲ್ ಗಾಂಧಿ ಅವರ ಹತ್ಯೆಯ ವೇಳೆ ಉಂಟಾಗಿದ್ದ ರಕ್ಷಣಾ ಲೋಪಗಳನ್ನು ಪ್ರಸ್ತಾಪಿಸಿ ರಕ್ಷಣೆಯ ಜವಾಬ್ದಾರಿ ಹೊಂದಿರುವ ಉತ್ತರ ಪ್ರದೇಶ ಸರ್ಕಾರದ ಆಡಳಿತದ ಅಪಾಯ ನಡೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
Advertisement
Congress wrote to Home Minister over breach in security of its president Rahul Gandhi y'day; says Gandhi was addressing media after filing nomination from Amethi, "a persual of his interaction will reflect that a laser was pointed at his head, on at least 7 separate occasions" pic.twitter.com/f3Jmnjhzs5
— ANI (@ANI) April 11, 2019
ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳೆ ರಾಹುಲ್ ಅವರು ಪ್ರಚಾರ ಸಭೆಗೆ ಆಗಮಿಸುತ್ತಿದ್ದ ಸಂದರ್ಭದಲ್ಲಿ ನಡೆದ ಘಟನೆ ಬಗ್ಗೆಯೂ ಕಾಂಗ್ರೆಸ್ ಈ ಹಿಂದೆ ಆತಂಕ ವ್ಯಕ್ತಪಡಿಸಿತ್ತು. ಏಪ್ರಿಲ್ 26ರಂದು ಕರ್ನಾಟಕ ವಿಧಾನಸಭೆಯ ಪ್ರಚಾರಕ್ಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹುಬ್ಬಳ್ಳಿಗೆ ಆಗಮಿಸಿದ್ದರು. ರಾಹುಲ್ ಗಾಂಧಿ ಅವರು ವಿಶೇಷ ವಿಮಾನದಲ್ಲಿ ದೆಹಲಿಯಿಂದ ಹುಬ್ಬಳ್ಳಿಗೆ ಹೊರಟಿದ್ದರು. ಆದರೆ ವಿಮಾನದ ಲ್ಯಾಂಡಿಂಗ್ ವೇಳೆ ಸಮಸ್ಯೆ ಕಾಣಿಸಿಕೊಂಡಿತ್ತು. ವಿಮಾನ ದಿಢೀರನೇ ಎಡಭಾಗಕ್ಕೆ ವಾಲಿತ್ತು. ವೇಗವಾಗಿ 8 ಸಾವಿರ ಅಡಿಯಿಂದಲೇ ಆಗಸದಿಂದ ಕೆಳಗಿಳಿಯುತ್ತಿರುವಂತೆ ತೊಂದರೆ ಉಂಟಾಗಿತ್ತು. ಈ ಬಗ್ಗೆ ರಾಹುಲ್ ಗಾಂಧಿ ಅಂದು ಪ್ರತಿಕ್ರಿಯೆ ನೀಡಿ ವಿಮಾನ ಹಠಾತ್ತನೇ 8 ಸಾವಿರ ಅಡಿ ಕೆಳಗೆ ಕುಸಿದಾಗ ಎಲ್ಲಾ ಮುಗಿದು ಹೋಯ್ತು ಅಂದುಕೊಂಡೆ. ಆ ಕ್ಷಣದಲ್ಲೇ ಕೈಲಾಸ ಮತ್ತು ಮಾನಸ ಸರೋವರ ಯಾತ್ರೆಗೆ ನಿರ್ಧರಿಸಿದ್ದೆ. ಕರ್ನಾಟಕ ವಿಧಾನಸಭಾ ಚುನಾವಣೆ ಮುಗಿದ ಮೇಲೆ ಯಾತ್ರೆ ಹೋಗುತ್ತೇನೆ ಎಂದು ರಾಹುಲ್ ಹೇಳಿದ್ದರು.