ʻಆಪರೇಷನ್‌ ಸಿಂಧೂರʼ ವೇಳೆ ಭಾರತ ಧ್ವಂಸಗೊಳಿಸಿದ್ದ ಮುರಿಡ್ಕೆ ಮಸೀದಿಯಲ್ಲಿ ಮತ್ತೆ ತಲೆಎತ್ತಿದ ಲಷ್ಕರ್‌ ಗುಂಪು; ವಿಡಿಯೋ ವೈರಲ್‌

Public TV
2 Min Read
Lashkar Group

– ಮೋಸ್ಟ್‌ ವಾಂಟೆಡ್‌ಗಳನ್ನ ತಯಾರಿಸುತ್ತಿದ್ದ ಲಷ್ಕರ್‌ ಕೇಂದ್ರ

ಇಸ್ಲಾಮಾಬಾದ್‌: ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆ ವೇಳೆ ಭಾರತ ಧ್ವಂಸಗೊಳಿಸಿದ್ದ ಲಷ್ಕರ್‌ ಪ್ರಧಾನ ಕಚೇರಿಯಾಗಿದ್ದ ಮುರಿಡ್ಕೆ ಮಸೀದಿಯಲ್ಲಿ (Muridke Headquarters) ಮತ್ತೆ ಉಗ್ರ ಚಟುವಟಿಕೆ ಸಕ್ರಿಯವಾಗಿದೆ ಎಂದು ತಿಳಿದುಬಂದಿದೆ. ಲಷ್ಕರ್-ಎ-ತೈಬಾ (LeT) ಗುಂಪಿನ ಕೆಲ ಉಗ್ರರು ಹಾನಿಗೊಳಗಾದ ಮಸೀದಿಯಲ್ಲೇ ನಮಾಜ್‌ ಮಾಡುತ್ತಿರುವ ವಿಡಿಯೋ ಇದಕ್ಕೆ ಸಾಕ್ಷಿಯಾಗಿದೆ.

Operation Sindoor 1 1

ಧಾರ್ಮಿಕ ಕಾರ್ಯಾಚರಣೆಯ ನೆಪದಲ್ಲಿ ಲಷ್ಕರ್‌ ಉಗ್ರರ ಕಾರ್ಯತಂತ್ರಗಳು ಮತ್ತೆ ಸಕ್ರಿಯಗೊಂಡಿವೆ ಎಂದು ಉನ್ನತ ಗುಪ್ತಚರ ಮೂಲಗಳು ಎಚ್ಚರಿಕೆ ನೀಡಿರುವುದಾಗಿ ವರದಿಯಾಗಿದೆ. ಎಲ್‌ಇಟಿ ಗುಂಪು ತನ್ನ ಮುರಿಡ್ಕೆ ಪ್ರಧಾನ ಕಚೇರಿಯಲ್ಲಿ ಕಳೆದ ಶುಕ್ರವಾರ ಪ್ರಾರ್ಥನೆ ಸಲ್ಲಿಸಿದೆ. ಈ ಮಂದಿರವು ಭಾರತದ ದಾಳಿಯಿಂದ ಹಾನಿಯಾಗಿರುವುದು ಕಂಡುಬಂದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲೂ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಉತ್ತರ ಸಿಕ್ಕಿಂನಲ್ಲಿ ಭಾರೀ ಭೂಕುಸಿತ – ದುರ್ಘಟನೆಯಲ್ಲಿ ಮೂವರು ಸೈನಿಕರು ಬಲಿ, 6 ಸೈನಿಕರು ಮಿಸ್ಸಿಂಗ್

ಎಲ್‌ಇಟಿ ಸಂಸ್ಥಾಪಕ ಹಫೀಜ್ ಸಯೀದ್ ಹಾಗೂ ಅವನ ಮಗ ತಲ್ಹಾ ಸಯೀದ್‌, ಸೋದರ ಮಾವ ಅಬ್ದುಲ್ ರೆಹಮಾನ್ ಮಕ್ಕಿ ನಿಯಮಿತವಾಗಿ ಧರ್ಮೋಪದೇಶ, ಜಿಗಾದಿ ಪ್ರವಚನಗಳನ್ನು ನೀಡುತ್ತಿದ್ದ ಅದೇ ಸಭಾಂಗಣ ಇದಾಗಿದೆ ಎಂದು ಗುಪ್ತಚರ ಮೂಲಗಳು ಹೇಳಿವೆ. ಇದನ್ನೂ ಓದಿ: ಪಂಜಾಬ್ ಪೊಲೀಸರ ಭರ್ಜರಿ ಕಾರ್ಯಾಚರಣೆ – 113 ಡ್ರಗ್ ಪೆಡ್ಲರ್‌ಗಳು ಅರೆಸ್ಟ್

ಮುಜಫರಾಬಾದ್‌ನಲ್ಲಿ ದಾಳಿಯಲ್ಲಿ ಮೃತಪಟ್ಟ ವ್ಯಕ್ತಿಗೆ ಜನರು ಅಂತ್ಯಕ್ರಿಯೆಯ ಪ್ರಾರ್ಥನೆ ಸಲ್ಲಿಸುತ್ತಿರುವುದು

ಏಪ್ರಿಲ್‌ 22ರ ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಮೇ 7ರ ತಡರಾತ್ರಿ ಭಾರತ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿತ್ತು. ರಾತ್ರೋ ರಾತ್ರಿ ನಡೆಸಿದ್ದ ದಾಳಿಯಲ್ಲಿ ನಿಷೇಧಿತ ಮೂರು ಉಗ್ರ ಸಂಘಟನೆಗಳಾದ ಜೈಶ್‌ ಎ ಮೊಹಮ್ಮದ್‌, ಲಷ್ಕರ್‌ ಎ ತೈಬಾ (LET) ಮತ್ತು ಹಿಜ್ಬುಲ್‌ ಮುಜಾಹಿದ್ದೀನ್‌ ಉಗ್ರರ ಪ್ರಧಾನ ಕಚೇರಿಗಳು ಧ್ವಂಸವಾಗಿದ್ದವು. ಪಾಕಿಸ್ತಾನ ಮತ್ತು ಪಾಕ್ ಅಕ್ರಮಿತ ಕಾಶ್ಮೀರದಲ್ಲಿರುವ 9 ಅಡಗುತಾಣಗಳ ಮೇಲೆ ಭಾರತೀಯ ವಾಯು ಸೇನೆ (IAF) ದಾಳಿ ನಡೆಸಿತ್ತು. ಭಾರತ ಧ್ವಂಸ ಮಾಡಿರುವ ಈ ಉಗ್ರರ (Terrorist) ನೆಲೆಗಳು ಮೋಸ್ಟ್‌ ಡೇಂಜರಸ್‌ ತಾಣಗಳು ಎಂದೇ ಗುರುತಿಸಿಕೊಂಡಿದ್ದು, ಇಡೀ ವಿಶ್ವಕ್ಕೆ ಕಂಟಕವಾಗಿದ್ದವು. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಇಲ್ಲಿ ಅಡಗಿಸಿಡಲಾಗಿತ್ತು. ಜೊತೆಗೆ ವಿಶ್ವಾದ್ಯಂತ ವಿವಿಧೆಡೆಗೆ ಕಳುಹಿಸಲು ಇಲ್ಲಿ ತರಬೇತಿ ನೀಡಲಾಗುತ್ತಿತ್ತು ಅನ್ನೋ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿತ್ತು. ಅದಕ್ಕಾಗಿ ಭಾರತೀಯ ಸೇನೆಯು ನಾಗರಿಕರು ಮತ್ತು ಸೇನೆಯನ್ನ ಗುರಿಯಾಗಿಸದೇ ಕೇವಲ ಉಗ್ರರ ನೆಲೆಗಳನ್ನ ಗುರಿಯಾಗಿಸಿ ದಾಳಿ ನಡೆಸಿತ್ತು. ಇದನ್ನೂ ಓದಿ: ಟೆಸ್ಲಾಗೆ 2 ಶೋ ರೂಂ ತೆರೆಯುವ ಆಸಕ್ತಿ ಇದೆ, ಆದ್ರೆ ಭಾರತದಲ್ಲೇ ಕಾರು ಉತ್ಪಾದಿಸುವ ಆಸಕ್ತಿ ಇಲ್ಲ: ಹೆಚ್‌ಡಿಕೆ

Share This Article