ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಮತ್ತು ಶ್ರೀನಗರ ಜಿಲ್ಲೆಗಳ ಸೌರಾ ಪ್ರದೇಶದಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಡೆದ ಎನ್‍ಕೌಂಟರ್ ದಾಳಿ ವೇಳೆ ಕಾಶ್ಮೀರ ಪೊಲೀಸರು ನಾಲ್ವರು ಎಲ್‍ಇಟಿ ಉಗ್ರರನ್ನು ಹತ್ಯಗೈದ ಘಟನೆ ನಡೆದಿದೆ.
ಹತ್ಯೆಯಾದ ಎಲ್‍ಇಟಿ ಉಗ್ರರನ್ನು ಶಾಕಿರ್ ಅಹ್ಮದ್ ವಾಜಾ ಮತ್ತು ಅಫ್ರೀನ್ ಅಫ್ತಾಬ್ ಮಲಿಕ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಟ್ರೆಂಜ್ ಶೋಪಿಯಾನ್ ಗ್ರಾಮದ ನಿವಾಸಿಗಳಾಗಿದ್ದರು. 4 ಉಗ್ರರ ಹತ್ಯೆಯಲ್ಲಿ, ಇಬ್ಬರು ಕಿರುತೆರೆ ನಟಿಯ ಹತ್ಯೆಯಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ.
Advertisement
Advertisement
ಪೊಲೀಸರು ಅವರಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಜೊತೆಗೆ ಒಂದು ಎಕೆ-47 ಮತ್ತು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ನಾಯಿ ವಾಕಿಂಗ್‍ಗೆ ಸ್ಟೇಡಿಯಂ ಖಾಲಿ ಮಾಡಿಸಿದ್ದ ಐಎಎಸ್ ಅಧಿಕಾರಿ ವರ್ಗಾವಣೆ
Advertisement
#SrinagarEncounterUpdate: The two killed #terrorists of LeT have been identified as Shakir Ahmed Waza & Afreen Aftab Malik, both residents of Trenz #Shopian & ‘C’ categorised. #Incriminating materials including arms & ammunition recovered. Further details shall follow. https://t.co/8QcGhyTfE7
— Kashmir Zone Police (@KashmirPolice) May 27, 2022
ಈ ಬಗ್ಗೆ ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಮಾತನಾಡಿ, ಕಳೆದ ಮೂರು ದಿನಗಳಲ್ಲಿ ನಡೆದ ಎನ್‍ಕೌಂಟರ್‌ಗಳಲ್ಲಿ ಒಟ್ಟು 10 ಉಗ್ರರನ್ನು ಹತ್ಯೆ ಮಾಡಲಾಗಿದೆ. ಅವರಲ್ಲಿ ಏಳು ಮಂದಿ ಲೆಟ್‍ಗೆ ಸೇರಿದವರಾಗಿದ್ದರೆ, ಮೂವರು ಜೈಶ್-ಎ-ಮೊಹಮ್ಮದ್‍ಗೆ ಸೇರಿದವರು ಎಂದು ತಿಳಿಸಿದರು. ಇದನ್ನೂ ಓದಿ: ವೇಶ್ಯಾವಾಟಿಕೆ ಅಕ್ರಮವಲ್ಲ – ಸುಪ್ರೀಂಕೋರ್ಟ್ ಮಹತ್ವದ ತೀರ್ಪು