ಬೆಂಗಳೂರು: 14 ಕ್ಷೇತ್ರಗಳಲ್ಲಿ ಬಹಿರಂಗ ಚುನಾವಣಾ ಪ್ರಚಾರಕ್ಕೆ ಇಂದು ಕೊನೆಯ ದಿನ. ಸಂಜೆಯವರೆಗೆ ಪ್ರಚಾರಕ್ಕೆ ಅವಕಾಶವಿದ್ದು ನಂತರ ಮನೆಮನೆ ಪ್ರಚಾರ ಮಾತ್ರ ನಡೆಸಲು ಅನುಮತಿಯಿದೆ.
ಕೊನೆಯ ದಿನ ಮತದಾರರನ್ನು ಓಲೈಸಲು ರಾಜಕೀಯ ಪಕ್ಷಗಳ ಸರ್ಕಸ್ ನಡೆಸುತ್ತಿದ್ದು, ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಈ ದಿನದ ಮೇಲೆ ಆಯೋಗ ಹದ್ದಿನಕಣ್ಣನ್ನು ಇಟ್ಟಿದೆ.
Advertisement
ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಮತದಾನ ಮುಕ್ತಾಯಕ್ಕೆ 48 ತಾಸು ಮುನ್ನ ಅಂದರೆ ಇಂದು ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.
Advertisement
ಸ್ಥಳೀಯ ಮತದಾರರಲ್ಲದ ನಾಯಕರೂ ಇಂದು ಸಂಜೆಯೇ ಕ್ಷೇತ್ರಗಳನ್ನು ಬಿಟ್ಟು ಹೊರಡಬೇಕಾಗುತ್ತದೆ. ಈ ಕಾರಣಕ್ಕೆ ಬಹುತೇಕ ಅಭ್ಯರ್ಥಿಗಳು ರೋಡ್ ಶೋ ನಡೆಸಿ ಮತಯಾಚನೆ ನಡೆಸುತ್ತಾರೆ.
Advertisement
ಬಹಿರಂಗ ಪ್ರಚಾರಕ್ಕೆ ತೆರೆಬಿದ್ದ ಬಳಿಕ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಬುಧವಾರ ಮನೆ ಮನೆ ಪ್ರಚಾರ ನಡೆಸಲಿದ್ದಾರೆ. ಈ ಪ್ರಚಾರದ ವೇಳೆ ಮತದಾರರಿಗೆ ನಾನಾ ಆಮಿಷಗಳನ್ನು ಒಡ್ಡುವ ಸಾಧ್ಯತೆಯಿತೆ. ಈ ರೀತಿ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಸಿದ್ಧತೆ ಮಾಡಿಕೊಂಡಿದೆ.