-ವಯೋಮಿತಿ ಸಡಿಲಿಕೆ ಹೊಸ ಅಧಿಸೂಚನೆ ಹೊರಡಿಸಲಿರುವ ಕೆಪಿಎಸ್‌ಸಿ
ಬೆಂಗಳೂರು: ಸೆ.14 ಮತ್ತು 15ರಂದು ಗ್ರೂಪ್ ಬಿ ಹುದ್ದೆಗಳಿಗಾಗಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಕೊನೆಯ ಕ್ಷಣದಲ್ಲಿ ಮುಂದೂಡಿಕೆ ಮಾಡಿ ಕೆಪಿಎಸ್‌ಸಿ (Karnataka Public Service Commission) ಆದೇಶ ಹೊರಡಿಸಿದೆ.
Advertisement
3 ವರ್ಷ ವಯೋಮಿತಿ ಸಡಿಲಿಕೆಗೆ ಸರ್ಕಾರದಿಂದ ಆದೇಶ ಬಂದ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ. ವಯೋಮಿತಿ ಸಡಿಲಿಕೆ ಮಾಡಿದ ಬಳಿಕ ಕೆಪಿಎಸ್‌ಸಿ (KPSC) ಹೊಸ ಅಧಿಸೂಚನೆಯನ್ನು ಹೊರಡಿಸಲಿದೆ.ಇದನ್ನೂ ಓದಿ: ಟ್ರಕ್, ಸಾರಿಗೆ ಬಸ್ ಡಿಕ್ಕಿ – 8 ಜನರು ರ್ದುಮರಣ, 30ಕ್ಕೂ ಹೆಚ್ಚು ಜನರಿಗೆ ಗಾಯ
Advertisement
Advertisement
ಹೊಸದಾಗಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಬೇಕಾಗಿರುವ ಕಾರಣದಿಂದ ನಾಳೆ, ನಾಡಿದ್ದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
Advertisement
ಪ್ರಕಟಣೆಯಲ್ಲಿ ಏನಿದೆ?
ಸೆ.14 ಮತ್ತು 15ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿ ಅಭ್ಯರ್ಥಿಗಳನ್ನು ಪರೀಕ್ಷಾ ಉಪಕೇಂದ್ರಗಳಿಗೆ ಹಂಚಿಕೆ ಮಾಡಲಾಗಿತ್ತು. ಸೆ.10ರ ಕರ್ನಾಟಕ ಸರ್ಕಾರದ ನಡವಳಿಗಳಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಟ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ ಎಂದು ತಿಳಿಸಲಾಗಿರುತ್ತದೆ.
ಮೇಲ್ಕಂಡ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಸೆ.13 2024ರನ್ವಯ ಅಧಿಸೂಚಿಸಿರುವ ಎಲ್ಲಾ ಹುದ್ದೆಗಳಿಗೂ ವಯೋಮಿತಿ ಸಡಿಲಿಕೆ ಅನ್ವಯಿಸಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕಾಗಿರುತ್ತದೆ. ಆದ್ದರಿಂದ ಸೆ.14 ಕನ್ನಡ ಭಾಷಾ ಪರೀಕ್ಷೆ ಮತ್ತು 15ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸದರಿ ಅಧಿಸೂಚನೆಯಲ್ಲಿನ ಹುದ್ದೆಗಳಿಗೆ ಇತರೆ ದಿನಾಂಕಗಳಲ್ಲಿ ನಿಗದಿಪಡಿಸಲಾಗಿದ್ದ ನಿರ್ದಿಷ್ಟ ಪತ್ರಿಕೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ.
ಸರ್ಕಾರದ ಆದೇಶದಂತೆ ವಯೋಮಿತಿ ಸಡಿಲಿಕೆ ನೀಡಿ, ಅಭ್ಯರ್ಥಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕಾಲಾವಾಕಾಶ ಮುಕ್ತಾಯವಾದ ನಂತರ ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ತಿಳಿಸಲಾಗುವುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇದನ್ನೂ ಓದಿ: ಸರಸ ಸಲ್ಲಾಪದ ವೇಳೆ ರೆಡ್‌ಹ್ಯಾಂಡಾಗಿ ಲಾಕ್; ಪ್ರಿಯಕರನ ಜೊತೆ ಸೇರಿ ತಾಯಿಯನ್ನೇ ಕೊಂದ ಮಗಳು