ಮಂಡ್ಯ: ಮಂಗಳವಾರ ವಿಧಿವಶರಾದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರವನ್ನು ಮದ್ದೂರು ತಾಲೂಕಿನ ಸೋಮನಹಳ್ಳಿಯ ಹೊರವಲಯದ ಕೆಫೆ ಕಾಫಿ ಡೇ ಆವರಣಕ್ಕೆ ಕರೆತರಲಾಯಿತು. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಅಂತಿಮ ದರ್ಶನ ಪಡೆದರು.
ಪೊಲೀಸರು ಕುಶಾಲತೋಪು ಸಿಡಿಸಿ, ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಿ ಗೌರವ ನಮನ ಸಲ್ಲಿಸಿದರು. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸ್ಪೀಕರ್ ಯು.ಟಿ.ಖಾದರ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛವನ್ನಿಟ್ಟು ಅಂತಿಮ ನಮನ ಸಲ್ಲಿಕೆ ಮಾಡಿದರು. ಇದನ್ನೂ ಓದಿ: ಸಂಸ್ಕಾರವಂತ ಮನುಷ್ಯ ಹೇಗಿರಬೇಕು ಎಂಬುದಕ್ಕೆ ಎಸ್‌ಎಂಕೆ ಮಾದರಿ: ಮಾಧುಸ್ವಾಮಿ
ಸಚಿವರಾದ ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಹೆಚ್.ಕೆ.ಪಾಟೀಲ್, ಕೆ.ಸುಧಾಕರ್, ಕೆ.ವೆಂಕಟೇಶ್, ಲಕ್ಷ್ಮೀ ಹೆಬ್ಬಾಳ್ಕರ್, ಆರ್.ಬಿ.ತಿಮ್ಮಾಪುರ, ಶಾಸಕರಾದ ನರೇಂದ್ರ ಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಗಣಿಗ ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಕದಲೂರು ಉದಯ್, ಟಿ.ಬಿ.ಜಯಚಂದ್ರ, ವಿವೇಕಾನಂದ, ಸಂಸದ ಡಾ.ಸುಧಾಕರ್, ಮಾಜಿ ಸಂಸದ ಡಿ.ಕೆ.ಸುರೇಶ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಜೆಡಿಎಸ್ ಶಾಸಕಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಮಾಜಿ ಡಿಸಿಎಂ ಅಶ್ವಥ್ ನಾರಾಯಣ್, ಮಾಜಿ ಸಂಸದೆ ಸುಮಲತಾ, ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಅಂತಿಮ ನಮನದಲ್ಲಿ ಪಾಲ್ಗೊಂಡಿದ್ದರು.