ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಮಾಹಿತಿ ಕೊಟ್ಟಿದ್ದಾರೆ.
ಕಳೆದೊಂದು ತಿಂಗಳಿನಿಂದ ಮುಂಬೈನ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಸ್ಥಿತಿ ಗಂಭೀರವಾಗಿದೆ. ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯರ ಹೇಳಿಕೆಯ ಪ್ರಕಾರ, ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ ಎಂದು ಮಾಹಿತಿ ಕೊಟ್ಟಿದ್ದಾರೆ.
Advertisement
Advertisement
ಡಾ ಪ್ರತೀತ್ ಸಮ್ದಾನಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದ್ದು, ಅವರು ಗಂಭೀರರಾಗಿದ್ದಾರೆ. ಅವರನ್ನು ವೆಂಟಿಲೇಟರ್‌ನಲ್ಲಿರಿಸಲಾಗಿದೆ. ಅವರ ಆರೋಗ್ಯದ ಬಗ್ಗೆ ವೈದ್ಯರ ತಂಡ ನಿಗಾವಹಿಸಿದೆ ಎಂದು ಹೇಳಿದ್ದಾರೆ.
Advertisement
Advertisement
ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಲತಾ ಮಂಗೇಶ್ಕರ್‌ಗೆ 92 ವರ್ಷವಾಗಿರುವುದರಿಂದ ಅವರ ಆರೋಗ್ಯದ ದೃಷ್ಟಿಯಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 2019ರಲ್ಲಿ ಉಸಿರಾಟದ ತೊಂದರೆ ಅಥವಾ ಶ್ವಾಸಕೋಶದ ಸಮಸ್ಯೆಯಿಂದಾಗಿ ಲತಾ ಮಂಗೇಶ್ಕರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಚೇತರಿಸಿಕೊಂಡಿದ್ದರು. ಆದರೆ ಇದೀಗ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಐಸಿಯುವಿನಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಆಧಾರ್ ಪೌರತ್ವದ ಪುರಾವೆಯಲ್ಲ: ಸಂಸತ್‌ನಲ್ಲಿ ಕೇಂದ್ರ ಸ್ಪಷ್ಟನೆ
ಭಾರತೀಯ ಚಿತ್ರರಂಗ ಕಂಡ ಮಹಾನ್ ಪ್ರತಿಭಾವಂತ ಗಾಯಕಿ ಲತಾ ಮಂಗೇಶ್ಕರ್. ಲತಾ ಮಂಗೇಶ್ಕರ್ ಅವರು 2001ರಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ಪಡೆದಿದ್ದಾರೆ. ಅಷ್ಟೇ ಅಲ್ಲದೇ ಪದ್ಮಭೂಷಣ, ಪದ್ಮವಿಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಹಲವಾರು ರಾಷ್ಟ್ರ ಪ್ರಶಸ್ತಿಗಳು ಮತ್ತು ಚಲನಚಿತ್ರ ಪ್ರಶಸ್ತಿಗಳನ್ನು ತಮ್ಮ ಮೂಡಿಗೆರಿಸಿಕೊಂಡಿದ್ದಾರೆ.