ಮುಂಬೈ: ಗಾಯಕಿ ಲತಾ ಮಂಗೇಶ್ಕರ್ ಅವರ ಚಿಕಿತ್ಸೆಗಾಗಿ ಆಟೋ ಚಾಲಕ ತನ್ನ ಸಂಪಾದನೆಯನ್ನು ನೀಡುವುದಾಗಿ ಹೇಳಿದ್ದಾನೆ.
ಲತಾ ಮಂಗೇಶ್ಕರ್ ಅವರಿಗೆ ಇತ್ತೀಚೆಗೆ ಕೋವಿಡ್-19 ಪಾಸಿಟಿವ್ ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ದಾಖಲಾದ ನಂತರ ಅವರಿಗೆ ನ್ಯುಮೋನಿಯಾ ಇರುವುದು ಪತ್ತೆಯಾಗಿದ್ದು, ಕಳೆದ 10 ದಿನಗಳಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಮುದ್ದು ಮಗಳಿಗೆ ಕನ್ನಡ ಕಲಿಸುತ್ತಿದ್ದಾರೆ ರಾಕಿಂಗ್ ಸ್ಟಾರ್
ಲತಾ ಮಂಗೇಶ್ಕರ್ ಅವರು ತಮ್ಮ ಮಧುರ ಧ್ವನಿಯ ಮೂಲಕ ಜಗತ್ತಿನಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿದ್ದಾರೆ. ಅವರ ಶ್ರೇಯೋಭಿವೃದ್ಧಿಗಾಗಿ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಆ ಅಭಿಮಾನಿಗಳಲ್ಲಿ ಮುಂಬೈನ ಆಟೋ ಚಾಲಕ ಸತ್ಯವಾನ್ ಗೀತೆ ಸಹ ಒಬ್ಬರು. ಅವರು ತಮ್ಮ ದುಡಿಮೆಯನ್ನೆಲ್ಲ ಲತಾ ಮಂಗೇಶ್ಕರ್ ಅವರ ಚಿಕಿತ್ಸೆಗೆ ನೀಡುವುದಾಗಿ ಹೇಳಿದ್ದಾರೆ.
ಸತ್ಯವಾನ್ ಗೀತೆ ಅವರು ತಮ್ಮ ರಿಕ್ಷಾವನ್ನು ಲತಾ ಮಂಗೇಶ್ಕರ್ ಅವರು ಹಾಡಿದ ಹಾಡುಗಳಿಂದ ಅಲಂಕರಿಸಿದ್ದಾರೆ. ಆಟೋಗೆ ಲತಾ ಅವರ ದೊಡ್ಡ ಫೋಟೋವನ್ನು ಸಹ ಹಾಕಿಸಿದ್ದಾರೆ. ಇದರ ಜೊತೆಗೆ ಅವರ ಆರೋಗ್ಯದಲ್ಲಿ ಸರಿಯಿಲ್ಲ ಎಂದು ತಿಳಿದ ಕ್ಷಣದಿಂದ ಲತಾ ಮಂಗೇಶ್ಕರ್ ಅವರು ಬೇಗ ಗುಣಮುಖರಾಗಿ ಬರಲಿ ಎಂದು ಸತ್ಯವಾನ್ ಗೀತೆ ಪ್ರಾಥಿಸುತ್ತಿದ್ದಾರೆ.
ಲತಾ ಮಂಗೇಶ್ಕರ್ ಅವರ ಆರೋಗ್ಯದ ಬಗ್ಗೆ ತಿಳಿದ ನಂತರ, ಹಲವಾರು ಅಭಿಮಾನಿಗಳು, ಚಲನಚಿತ್ರ ಬಂಧುಗಳು ಮತ್ತು ಇತರ ಕ್ಷೇತ್ರದ ಜನರು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದು ಪ್ರಾಥಿಸಿದ್ದಾರೆ. ಇದನ್ನೂ ಓದಿ: ಮೃತ ವ್ಯಕ್ತಿಯ ದೇಹದ ಪಕ್ಕ ಸಿಕ್ತು 124 ಹಾವುಗಳು!
ಗಾಯಕಿಯ ಆರೋಗ್ಯದ ಕುರಿತು ಮಾತನಾಡಿದ ಆರೋಗ್ಯ ಸಚಿವ ರಾಜೇಶ್ ಟೋಪೆ, ಲತಾ ಮಂಗೇಶ್ಕರ್ ಅವರ ಆರೋಗ್ಯ ಸುಧಾರಿಸುತ್ತಿದೆ. ನಾನು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಅವರು ಲತಾ ಮಂಗೇಶ್ಕರ್ ಅವರ ಆರೋಗ್ಯದ ಬಗ್ಗೆ ನನಗೆ ತಿಳಿಸಿದ್ದಾರೆ ಎಂದಿದ್ದರು.