ಮುಂಬೈ: ಜನಪ್ರಿಯ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಲತಾ ಮಂಗೇಶ್ಕರ್ಗೆ 92 ವರ್ಷವಾಗಿರುವುದರಿಂದ ಅವರ ಆರೋಗ್ಯದ ದೃಷ್ಟಿಯಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
2019ರಲ್ಲಿ ಉಸಿರಾಟದ ತೊಂದರೆ ಅಥವಾ ಎದೆಯ ದಟ್ಟಣೆ ಶ್ವಾಸಕೋಶದ ಕಾಯಿಲೆಯಿಂದಾಗಿ ಲತಾ ಮಂಗೇಶ್ಕರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಚೇತರಿಸಿಕೊಂಡಿದ್ದರು. ಆದರೆ ಇದೀಗ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಐಸಿಯುವಿನಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಕಾಫಿನಾಡಿನ ಎರಡು ವಸತಿ ಶಾಲೆಯ 55 ಮಕ್ಕಳಿಗೆ ಕೊರೊನಾ
Legendary singer Lata Mangeshkar admitted to ICU after testing positive for Covid-19. She has mild symptoms: Her niece Rachna confirms to ANI
(file photo) pic.twitter.com/8DR3P0qbIR
— ANI (@ANI) January 11, 2022
ಭಾರತೀಯ ಚಿತ್ರರಂಗ ಕಂಡ ಮಹಾನ್ ಪ್ರತಿಭಾವಂತ ಗಾಯಕಿ ಲತಾ ಮಂಗೇಶ್ಕರ್. ಲತಾ ಮಂಗೇಶ್ಕರ್ ಅವರು 2001ರಲ್ಲಿ ಭಾರತ ರತ್ನ ಪ್ರಶಶ್ತಿಯನ್ನು ಪಡೆದಿದ್ದಾರೆ. ಅಷ್ಟೇ ಅಲ್ಲದೇ ಪದ್ಮಭೂಷಣ, ಪದ್ಮವಿಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಹಲವಾರು ರಾಷ್ಟ್ರ ಪ್ರಶಸ್ತಿಗಳು ಮತ್ತು ಚಲನಚಿತ್ರ ಪ್ರಶಸ್ತಿಗಳನ್ನು ತಮ್ಮ ಮೂಡಿಗೆರಿಸಿಕೊಂಡಿದ್ದಾರೆ. ಇದನ್ನೂ ಓದಿ: ಜನವರಿ ಅಂತ್ಯಕ್ಕೆ ನಿತ್ಯ 60 ಸಾವಿರ ಪ್ರಕರಣಗಳು ಪತ್ತೆ ಸಾಧ್ಯತೆ – ದೆಹಲಿಯಲ್ಲಿ ಖಾಸಗಿ ಕಚೇರಿಗಳು ಬಂದ್