ನವದೆಹಲಿ: ಕೊರೊನಾ ಸೋಂಕಿಗೆ ತುತ್ತಾಗಿ ನಿಧನರಾಗಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂತಾಪ ಸೂಚಿಸಿದ್ದಾರೆ.
ಲತಾ ದೀದಿಯವರಿಂದ ನಾನು ಯಾವಾಗಲೂ ಅಪಾರ ಪ್ರೀತಿಯನ್ನು ಪಡೆದಿದ್ದೇನೆ. ಇದು ನನ್ನ ಸೌಭಾಗ್ಯವೆಂದೆ ಅಂದುಕೊಳ್ಳುತ್ತೇನೆ. ಅವರೊಂದಿಗಿನ ನನ್ನ ಸಂವಾದಗಳು ಎಂದಿಗೂ ಅವಿಸ್ಮರಣೀಯವಾಗಿ ಉಳಿಯುತ್ತವೆ. ಲತಾ ದೀದಿ ಅವರ ನಿಧನಕ್ಕೆ ಇಡೀ ದೇಶದ ಜೊತೆಗೆ ನಾನು ಸಹ ದುಃಖಿಸುತ್ತೇನೆ. ಲತಾ ಮಂಗೇಶ್ಕರ ಸಾವಿನ ಕುರಿತು ಕುಟುಂಬದವರೊಂದಿಗೆ ಮಾತನಾಡಿ ಅವರಿಗೆ ಸಾಂತ್ವನ ಹೇಳಿದ್ದೇನೆ ಎಂದು ಪ್ರಧಾನಿ ಮೋದಿ ತಿಳಿಸಿದರು. ಇದನ್ನೂ ಓದಿ: ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ
Advertisement
I consider it my honour that I have always received immense affection from Lata Didi. My interactions with her will remain unforgettable. I grieve with my fellow Indians on the passing away of Lata Didi. Spoke to her family and expressed condolences. Om Shanti.
— Narendra Modi (@narendramodi) February 6, 2022
Advertisement
ಲತಾ ಜಿ ಅವರ ನಿಧನವು ನನ್ನು ಸೇರಿದಂತೆ ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ನೋವು ತಂದಿದೆ. ಅವರ ವಿಶಾಲ ಶ್ರೇಣಿಯ ಹಾಡುಗಳಲ್ಲಿ, ಭಾರತದ ಸಾರ ಮತ್ತು ಸೌಂದರ್ಯವನ್ನು ನಿರೂಪಿಸಿದೆ. ಮುಂದಿನ ತಲೆಮಾರುಗಳು ತಮ್ಮ ಆಂತರಿಕ ಭಾವನೆಗಳ ಅಭಿವ್ಯಕ್ತಿಯನ್ನು ಕಂಡುಕೊಳ್ಳಲು ಸಹಕಾರಿಯಾಗುವಂತಹ ಹಾಡುಗಳಾಗಿವೆ. ಭಾರತ ರತ್ನ, ಲತಾ ಮಂಗೇಶ್ಕರ್ ಅವರ ಸಾಧನೆಗಳು ಎಂದಿಗೂ ಅಚ್ಚಳಿಯದೇ ಉಳಿಯುತ್ತವೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂತಾಪ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ
Advertisement
Advertisement
ಲತಾ ಮಂಗೇಶ್ಕರ್ ಅವರು ಹಲವು ದಶಕಗಳಿಂದ ಭಾರತದ ಅತ್ಯಂತ ಪ್ರೀತಿಯ ಧ್ವನಿಯಾಗಿ ಉಳಿದರು. ಅವರ ಚಿನ್ನದ ಧ್ವನಿಯು ಅಮರವಾಗಿದೆ ಮತ್ತು ಅವರ ಅಭಿಮಾನಿಗಳ ಹೃದಯದಲ್ಲಿ ಪ್ರತಿಧ್ವನಿಸುತ್ತಲೇ ಇರುತ್ತದೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಂತಾಪ ಸೂಚಿಸಿದರು.
मैं खुद को सौभाग्यशाली समझता हूँ कि समय-समय पर मुझे लता दीदी का स्नेह और आशीर्वाद प्राप्त होता रहा। अपने अतुलनीय देशप्रेम, मधुर वाणी और सौम्यता से वो सदैव हमारे बीच रहेंगी। उनके परिजनों व असंख्य प्रशंसकों के प्रति अपनी संवेदनाएं व्यक्त करता हूँ। ॐ शांति शांति pic.twitter.com/52fy46tOmE
— Amit Shah (@AmitShah) February 6, 2022
ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿ, ಲತಾ ದೀದಿಯವರ ವಾತ್ಸಲ್ಯ ಮತ್ತು ಆಶೀರ್ವಾದವನ್ನು ಪಡೆದಿರುವುದು ನನ್ನ ಅದೃಷ್ಟ ಎಂದು ಭಾವಿಸುತ್ತೇನೆ. ಅಪ್ರತಿಮ ದೇಶಭಕ್ತಿ, ಮಧುರವಾದ ಮಾತು, ಸಜ್ಜನಿಕೆಯಿಂದ ಸದಾ ನಮ್ಮ ನಡುವೆ ಇರುತ್ತಾರೆ. ಅವರ ಕುಟುಂಬ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದರು.