ಬೆಂಗಳೂರು: ಕೊರೊನಾ ಸೋಂಕಿಗೆ ತುತ್ತಾಗಿರುವ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ನಿಧನರಾಗಿದ್ದಾರೆ. ಅವರು ಸಂಗೀತ ಕ್ಷೇತ್ರಕ್ಕೆ ಅಪಾರವಾದ ಕೊಡುಗೆಯನ್ನು ಕೊಟ್ಟಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಕನ್ನಡ ಸಿನಿಮಾಗಳಿಗೂ ಹಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ.
Advertisement
ಲತಾ ಮಂಗೇಶ್ಕರ್ (ಸೆಪ್ಟೆಂಬರ್ 28, 1929) ಭಾರತದ ಪ್ರಸಿದ್ಧ ಗಾಯಕಿಯರಲ್ಲಿ ಒಬ್ಬರು. ಹಿಂದಿ ಚಿತ್ರರಂಗದಲ್ಲಿ ಬಹಳ ಹಾಡುಗಳನ್ನು ಹಾಡಿರುವುದಲ್ಲದೆ ಹಲವಾರು ಭಾರತೀಯ ಭಾಷೆಗಳಲ್ಲಿಯೂ ಹಾಡಿದ್ದಾರೆ. 1967ರಲ್ಲಿ ಬಿಡುಗಡೆಯಾದ “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ಕನ್ನಡ ಚಲನಚಿತ್ರದಲ್ಲಿನ “ಬೆಳ್ಳನೆ ಬೆಳಗಾಯಿತು” ಮತ್ತು “ಎಲ್ಲಾರೆ ಇರತೀರೋ ಎಂದಾರೆ ಬರತೀರೋ” ಹಾಡುಗಳನ್ನು ಹಾಡಿದ್ದಾರೆ.
Advertisement
Advertisement
1967ರಲ್ಲಿ ತೆರೆಕಂಡ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಹಾಲುಂಡ ತವರು ಸಿನಿಮಾಗಳಿಗೆ ಜನಪ್ರಿಯವಾದ ಹಡುಗಳಿಗೆ ಧ್ವನಿ ನೀಡಿದ್ದಾರೆ. 10,000ಕ್ಕೂ ಹೆಚ್ಚು ಹಾಡುಗಳನ್ನು 22 ಭಾಷೆಗಳಲ್ಲಿ ಹಾಡಿದ್ದಾರೆ. ಅಮೆರಿಕ, ಯೂರೊಪ್ ಸುತ್ತಿ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಆಕೆಯ ಹಾಡುಗಳ ವಿಶೇಷವೆಂದರೆ, ಅಸಾಧಾರಣ ಸ್ಪಷ್ಟ ಶಬ್ದೋಚ್ಚಾರ, ಶಾಸ್ತ್ರೀಯ ಸಂಗೀತದ ಸ್ವರಬದ್ಧ ಸಂಸ್ಕಾರ, ಗೀತೆಗಳ ಗುಣಮಟ್ಟ, ಸನ್ನಿವೇಶಕ್ಕೆ ನಟಿಯರ ಕಂಠಕ್ಕೆ ಸರಿಯಾಗಿ ಅಳವಡಿಸಿಹಾಡುವ ಕಲೆ.
Advertisement
ಲತಾ ಅವರು ಬಹುಶಃ ಹಿಂದಿಯ ಪ್ರತಿಯೊಬ್ಬ ಸಂಗೀತ ನಿರ್ದೇಶಕರ ಜೊತೆ ಕೆಲಸ ಮಾಡಿದ್ದಾರೆ. ಇದಕ್ಕೆ ಒಂದೇ ಅಪವಾದವೆಂದರೆ ಓ.ಪಿ. ನಯ್ಯರ್. ಅದೇ ರೀತಿ ಅವರೊಂದಿಗೆ ಹಿಂದಿಯ ಪ್ರತಿಯೊಬ್ಬ ಗಾಯಕನ ಜೊತೆಯೂ ಹಾಡಿದ್ದಾರೆ. ಹಿಂದಿ ಚಿತ್ರರಂಗದ ಬಹುತೇಕ ನಟಿಯಾರಿಗಾಗಿ ಲತಾ ಹಾಡಿದ್ದಾರೆ. ಐವತ್ತರ ದಶಕದಲ್ಲಿ ಮೇಲೇರಿದ ಅವರ ಕೀರ್ತಿ ಪತಾಕೆ ಕೆಳಕ್ಕೆ ಇಳಿಯಲೇ ಇಲ್ಲ. ಗಜಲ್, ಪ್ರೇಮಗೀತೆ, ಭಜನೆ, ಜನಪದ ಗೀತೆ, ಯುಗಳಗೀತೆ, ಕ್ಲಬ್ ಸಾಂಗ್ ಹೀಗೆ ಪ್ರತಿಯೊಂದೂ ಬಗೆಯ ಹಾಡುಗಳನ್ನು ಲತಾ ಹಾಡಿದ್ದಾರೆ. ಇದನ್ನೂ ಓದಿ: ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ
ಹಿಂದಿಯಲ್ಲದೆ ಭಾರತದ ಪ್ರತಿಯೊಂದು ಭಾಷೆಯಲ್ಲೂ ಹಾಡಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ಅವರನ್ನು ಲತಾ ದೀದಿ ಎಂದೇ ಕರೆಯುತ್ತಾರೆ. ಲತಾ ಅವರು ವಿವಾಹವಾಗಲಿಲ್ಲ. ತಮ್ಮ ಜೀವನವನ್ನು ಸಂಗೀತಕ್ಕೇ ಮುಡಿಪಾಗಿಟ್ಟರು. ಲತಾ ಅವರ ಕುಟುಂಬದಲ್ಲಿ ಪ್ರತಿಯೊಬ್ಬರೂ ಸಂಗೀತ ಕ್ಷೇತ್ರದಲ್ಲಿರುವುದು ಒಂದು ವಿಶೇಷ. ಆಶಾ ಮತ್ತು ಲತಾ, ಉಷಾ ಮತ್ತು ಲತಾ, ಮೀನಾ ಮತ್ತು ಲತಾ ಹಾಡಿರುವ ಕೆಲವು ಯುಗಳಗೀತೆಗಳೂ ಪ್ರಸಿದ್ಧವಾಗಿವೆ. ತಮ್ಮ ಹೃದಯನಾಥ್ ಮಂಗೇಷ್ಕರ್ ಸಂಗೀತ ನಿರ್ದೇಶನದಲ್ಲಿ ಲತಾ ಅನೇಕ ಗೀತೆಗಳನ್ನು ಹಾಡಿದ್ದಾರೆ – ಉದಾ. ಮೀರಾ ಭಜನೆಗಳು. ಲತಾ ಅವರು ಲೇಕಿನ್ ಎಂಬ ಕಲಾತ್ಮಕ ಚಿತ್ರವನ್ನು ನಿರ್ಮಿಸಿದರು.
ಚೀನಾ-ಭಾರತ ಯುದ್ಧದಲ್ಲಿ ಭಾರತದ ಅನೇಕ ಸೈನಿಕರು ತಮ್ಮ ಪ್ರಾಣ ತೆತ್ತರು. ಇವರ ನೆನಪಿನಲ್ಲಿ ಒಂದು ವಿಶೇಷಗೀತೆಯನ್ನು ಪ್ರದೀಪ್ ಎಂಬ ಕವಿ ರಚಿಸಿದರು. ಈ ಗೀತೆಯನ್ನು ಸಿ. ರಾಮಚಂದ್ರ ಅವರ ಸಂಗೀತ ನಿರ್ದೇಶನದಲ್ಲಿ ಲತಾ ಅವರು 1963 ಜನವರಿ 27ರಂದು ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಹಾಡಿದರು. ಐ ಮೇರೆ ವತನ್ ಕೇ ಲೋಗೋಂ, ಜರಾ ಆಂಖ್ ಮೇ ಭರಲೋ ಪಾನಿ .ಎಂದು ಪ್ರಾರಂಭವಾಗುವ ಗೀತೆಯನ್ನು ಕೇಳಿ ಅಂದಿನ ಪ್ರಧಾನಮಂತ್ರಿ ಜವಾಹರಲಾಲ್ ನೆಹರೂ ಅವರ ಕಣ್ಣಿನಲ್ಲಿ ನೀರಾಡಿತು. ಅವರು ಲತಾ ಮಂಗೇಶ್ಕರ್ ಅವರೊಂದಿಗೆ ಕಾರ್ಯಕ್ರಮದ ನಂತರ ಮಾತಾಡಿ “ನೀನು ನನ್ನನ್ನು ಅಳಿಸಿಬಿಟ್ಟೆ, ಎಂದು ಭಾವುಕರಾಗಿ ಹೇಳಿದರಂತೆ. ಈ ಹಾಡನ್ನು ನವದೆಹಲಿಯಲ್ಲಿ ಪ್ರತಿ ಜನವರಿ 26ರ ಸಮಾರಂಭದಲ್ಲಿ ಕೇಳಬಹುದು.
Singing legend Lata Mangeshkar passes away, says Union Minister Nitin Gadkari pic.twitter.com/S1Rhc63OdI
— ANI (@ANI) February 6, 2022