ಬೆಳಗಾವಿ: ಮಾರಕಾಸ್ತ್ರಗಳಿಂದ ಹಲ್ಲೆಗೈದು ಯುವಕನನ್ನು ಹತ್ಯೆಗೈದಿರುವ ಘಟನೆ ಬೆಳಗಾವಿ ತಾಲೂಕಿನ ರಣಕುಂಡೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ನಾಗೇಶ್ ಪಾಟೀಲ್ (30) ಮೃತ ಯುವಕ. ಹಳೆಯ ವೈಷಮ್ಯದ ಕಾರಣಕ್ಕೆ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟಿನಿಂದ ರೊಚ್ಚಿಗೆದ್ದ ಶ್ರೀಲಂಕಾ ಜನತೆ- ಪ್ರತಿಭಟನೆಗೆ ಪ್ರಮುಖ ಕಾರಣಗಳೇನು?
Advertisement
Advertisement
ತಡರಾತ್ರಿ ಯುವಕನ ಮನೆಗೆ ನುಗ್ಗಿರುವ ದುಷ್ಕರ್ಮಿಗಳ ತಂಡ ಹಲ್ಲೆ ಮಾಡಿದ್ದಾರೆ. ಬಳಿಕ ಯುವಕನನ್ನು ಎಳೆದೊಯ್ದು ಮಾರಕಾಸ್ತ್ರಗಳಿಂದ ಹತ್ಯೆಗೈಯಲಾಗಿದೆ. ಶವವನ್ನು ಮನೆಯ ಬಳಿ ಎಸೆದು ಹಂತಕರು ಪರಾರಿಯಾಗಿದ್ದಾರೆ. ಬೆಳಗಾವಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.