ಬೆಂಗಳೂರು: ದೇಶಾದ್ಯಂತ ಪಿಎಫ್‌ಐ (PFI) ಅನ್ನು 5 ವರ್ಷ ಬ್ಯಾನ್ ಮಾಡಿ ಕೇಂದ್ರ ಸರ್ಕಾರ ಒಳ್ಳೆಯ ನಿರ್ಧಾರವನ್ನೇ ಕೈಗೊಂಡಿದೆ. ಆದರೆ ಇಷ್ಟು ತಡವಾಗಿ ಬ್ಯಾನ್ ಮಾಡಿರುವುದು ಗುಪ್ತಚರ ಇಲಾಖೆಯ (Intelligence Department) ದೊಡ್ಡ ವೈಫಲ್ಯವಾಗಿದೆ ಎಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ.
Advertisement
ಕರ್ನಾಟಕ, ಗುಜರಾತ್, ಅಸ್ಸಾಂ, ಮಧ್ಯಪ್ರದೇಶ, ಸೇರಿದಂತೆ ಇದು ದೇಶವ್ಯಾಪಿ ಇದ್ದಂತಹ ಜಾಲ. ಇಷ್ಟು ವರ್ಷ ಜಾರಿ ನಿರ್ದೆಶನಾಲಯ (ED), ಗುಪ್ತಚರ ಇಲಾಖೆ ಹಾಗೂ ಸ್ಟೇಟ್ ಡಿಪಾರ್ಟ್ಮೆಂಟ್‌ಗಳಿಗೆ ಅವರ ಭಯೋತ್ಪಾದನಾ ಚಟುವಟಿಕೆ, ಅಕ್ರಮ ಹಣ ವರ್ಗಾವಣೆಗಳು ಗಮನಕ್ಕೆ ಬಂದಿರಲಿಲ್ಲವೇ ಎಂದು ಪ್ರಶ್ನಿಸಿದರು.
Advertisement
Advertisement
ಈ ಸಂಘಟನೆ ದೇಶಾದ್ಯಂತ ಇದ್ದರೂ ಇಷ್ಟು ದಿನ ಯಾಕೆ ಹೀಗೇ ಬಿಟ್ಟಿದ್ದರು ಎಂಬ ಪ್ರಶ್ನೆ ಮೂಡುತ್ತದೆ. ಇಷ್ಟು ತಡವಾಗಿ ಪಿಎಫ್‌ಐಯನ್ನು ಬ್ಯಾನ್ ಮಾಡಿರುವುದು ಅಧಿಕಾರಿಗಳ ದೊಡ್ಡ ವೈಫಲ್ಯ ಎಂದು ಹೇಳಿದರು. ಇದನ್ನೂ ಓದಿ: ಉಗ್ರ ಸಂಘಟನೆಗಳ ಜೊತೆ ಲಿಂಕ್ – ಈ ಕ್ಷಣದಿಂದಲೇ PFI, 8 ಅಂಗ ಸಂಸ್ಥೆಗಳು ಬ್ಯಾನ್
Advertisement
ಇಂದು ಕೇಂದ್ರ ಸರ್ಕಾರ ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿರುವ ಪಿಎಫ್‌ಐ ಸಂಘಟನೆ ಹಾಗೂ ಅದರ ಅಂಗಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾನ್ಸ್ ಕೌನ್ಸಿಲ್(AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್(NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್ ಕೇರಳವನ್ನು ನಿಷೇಧಿಸಿದೆ. ಇದನ್ನೂ ಓದಿ: ಸಂಪೂರ್ಣ ನಿಷೇಧವಾಗುತ್ತಾ PFI – ಕೇಂದ್ರ ಸರ್ಕಾರದ ಮುಂದಿನ ಪ್ಲ್ಯಾನ್ ಏನು?