ಹಾವೇರಿ: ತಡರಾತ್ರಿ ಮನೆಯಲ್ಲಿದ್ದ ಫ್ರಿಡ್ಜ್ ಬ್ಲಾಸ್ಟ್ (Fridge Blast) ಆಗಿ ವಸ್ತುಗಳು ಸುಟ್ಟು ಕರಕಲಾದ ಘಟನೆ ಹಾವೇರಿಯ (Haveri) ಮಂಜುನಾಥ ನಗರದ (Manjunath Nagar) ಎ ಬ್ಲಾಕ್‌ನಲ್ಲಿ ನಡೆದಿದೆ.
ಚನ್ನಬಸಪ್ಪ ಗೂಳಪ್ಪನವರ್ ಎಂಬುವರಿಗೆ ಸೇರಿದ ಮನೆಯಲ್ಲಿ ಈ ದುರ್ಘಟನೆ ನಡೆದಿದೆ. ಮನೆಯಲ್ಲಿದ್ದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಇದನ್ನೂ ಓದಿ: ಭೀಕರ ಕಾರು ಅಪಘಾತ – ಯುವ ಪತ್ರಕರ್ತ ದಾರುಣ ಸಾವು
Advertisement
Advertisement
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಬಳಿಕ ಡಿಕೆಶಿ ಸಿಎಂ – ಶಾಸಕ ಬಾಲಕೃಷ್ಣ
Advertisement