ನವದೆಹಲಿ: ಪಂಚಮಸಾಲಿ ಮೀಸಲಾತಿ (Panchamasali Reservation) ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ನಡೆಯನ್ನು ರಾಜ್ಯ ಬಿಜೆಪಿ (BJP) ಸಂಸದರು ಖಂಡಿಸಿದ್ದಾರೆ. ಮೀಸಲಾತಿ ಹೋರಾಟಗಾರರ ವಿರುದ್ಧ ಲಾಠಿಚಾರ್ಜ್ ಖಂಡನೀಯ. ಪಂಚಮಸಾಲಿ ಸಮುದಾಯದಲ್ಲಿ ಬಡವರಿದ್ದಾರೆ. ಅವರಿಗೂ ಮೀಸಲಾತಿ ಸಿಗಬೇಕು ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ (Govinda Karajola) ಆಗ್ರಹಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ (Siddaramaiah) ಸರ್ಕಾರ ಬಡವರ ವಿರೋಧಿ ಸರ್ಕಾರ. ನಾವು 2ಡಿ ಮೀಸಲಾತಿ ಮಾಡಿದ್ದೇವೆ. ಅದನ್ನು ಮೊದಲು ಜಾರಿ ಮಾಡಲಿ. ನ್ಯಾಯಕೇಳಲು ಬಂದವರ ಮೇಲೆ ಲಾಠಿ ಚಾರ್ಚ್ ಮಾಡುವುದು ಸರಿಯಲ್ಲ. ಭಯದ ವಾತಾವರಣ ನಿರ್ಮಿಸಲು ಲಾಠಿ ಚಾರ್ಜ್ ಮಾಡಿದೆ. ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಮುಂದಾಗಬಾರದು ಎಂದು ಕಿಡಿಕಾರಿದರು. ಇದನ್ನೂ ಓದಿ: 2ಎ ಮೀಸಲಾತಿಗಾಗಿ ಪಂಚಮಸಾಲಿಗಳ ಒತ್ತಾಯ ಸಂವಿಧಾನ ವಿರೋಧಿ: ಸಿಎಂ
Advertisement
Advertisement
ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಮಾತನಾಡಿ, ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿರುವುದು ಅಕ್ಷಮ್ಯ ಅಪರಾಧ. ಒಂದು ಪ್ರತಿಭಟನೆಗೆ ಅಗತ್ಯ ವ್ಯವಸ್ಥೆ ಮಾಡಲು ಇವರಿಗೆ ಸಾಧ್ಯವಾಗಿಲ್ಲ. ಈಗ ಪ್ರತಿಭಟನಾಕಾರರು ಕಲ್ಲು ತೂರಿದರು ಎಂದು ಸಿದ್ಧ ಉತ್ತರ ಕೊಡುತ್ತಾರೆ. ಸರ್ಕಾರದ ಈ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ. ಹೋರಾಟಗಾರರ ಮೇಲೆ ಈಗಾಗಲೇ ಪ್ರಕರಣ ದಾಖಲಿಸಿದೆ. ಅಧಿವೇಶನ ಅಂತ್ಯವಾಗುತ್ತಿದ್ದಂತೆ ಅವರನ್ನು ಬಂಧಿಸುವ ಕೆಲಸ ಮಾಡಲಾಗುತ್ತದೆ. ಮೀಸಲಾತಿ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಹೋರಾಟಗಾರರು ಕೇಳುತ್ತಿದ್ದಾರೆ. ಅದನ್ನು ಸರ್ಕಾರ ಮಾಡುತ್ತಿಲ್ಲ ಎಂದು ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: ಹಿಂದೂ ಪದ ವಿವಾದ – ಸಚಿವ ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್
Advertisement
ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಮಾತನಾಡಿ, ಸರ್ಕಾರಕ್ಕೆ ಈ ರೀತಿಯ ಸಮಸ್ಯೆ ಸಹಜ. ಜನರ ಆಶೋತ್ತರಗಳು ಬದಲಾದಗ ಈ ರೀತಿಯ ಬೇಡಿಕೆ ಬರುತ್ತವೆ. ಮೀಸಲಾತಿ ಮೂಲಕ ಬದಲಾವಣೆ ಕೇಳುತ್ತಾರೆ. ಈಗ ಸಾಮಾಜಿಕವಾಗಿ, ಆರ್ಥಿಕವಾಗಿ ಬದಲಾವಣೆಯಾಗಿವೆ. ಇಂತಹ ಬೇಡಿಕೆ ಬಂದಾಗ ಸೂಕ್ಷ್ಮವಾಗಿ ನಿಭಾಯಿಸಬೇಕು ಎಂದರು. ಇದನ್ನೂ ಓದಿ: 2024-25ರಲ್ಲಿ 1.4 ಲಕ್ಷ ಕೋಟಿ ಸಾಲ ಮಾಡಿದ್ದೇವೆ, ಬೇರೆ ರಾಜ್ಯಗಳಿಗಿಂತ ನಮ್ಮದು ಕಡಿಮೆ: ಸಿದ್ದರಾಮಯ್ಯ
Advertisement
ಪಂಚಮಸಾಲಿ ಹೋರಾಟಗಾರರಿಗೆ ಸಿಎಂ ಭೇಟಿಗೆ ಅವಕಾಶ ನೀಡಿಲ್ಲ. ನೀಡಿದಾಗಲೂ ಸರಿಯಾಗಿ ಮಾತನಾಡಿಲ್ಲ. ಧಾರ್ಮಿಕ ಮೀಸಲಾತಿ ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ಅದನ್ನು ತೆಗೆದು ಅಗತ್ಯ ಇರುವವರಿಗೆ ಮೀಸಲಾತಿ ನೀಡಬೇಕು. ನಾವು ಅದನ್ನೇ ಮಾಡಿದ್ದೆವು. ಆದರೆ ಕಾಂಗ್ರೆಸ್ ಬೆಂಬಲಿಗರು ಸುಪ್ರೀಂ ಕೋರ್ಟ್‌ಗೆ ಹೋಗಿದ್ದರು. ಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಮುಂದಿನ ವಿಚಾರಣೆವರೆಗೂ ನಾವು ಅದಕ್ಕೆ ಒಪ್ಪಿಗೆ ನೀಡಿದ್ದೆವು. ಹೊಸ ಸರ್ಕಾರ ಬಂದಮೇಲೆ ಕ್ರಮ ತೆಗೆದುಕೊಂಡಿಲ್ಲ ಎಂದು ಗುಡುಗಿದರು. ಇದನ್ನೂ ಓದಿ: ಸೋನಿಯಾ ಗಾಂಧಿ ಮನವೊಲಿಸಲು ವಯನಾಡಿಗೆ ನೂರು ಮನೆ: ಈಶ್ವರಪ್ಪ ವ್ಯಂಗ್ಯ
ಕೋರ್ಟ್‌ನಲ್ಲೂ ಈ ಬಗ್ಗೆ ಯಾವ ಬೆಳವಣಿಗೆ ನಡೆದಿಲ್ಲ. ಈಗಲಾದರೂ ನ್ಯಾಯ ಕೊಡಿಸುವ ಕೆಲಸ ಮಾಡಬೇಕು. ಇದು ರಾಷ್ಟ್ರದ ವಿಚಾರವಾಗಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಈ ರೀತಿಯ ಬೇಡಿಕೆ ಇದೆ. ಮುಂದೆ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಿ ಬದಲಾವಣೆಯಾಗಲಿದೆ. ರಾಜ್ಯ ಸರ್ಕಾರಕ್ಕೆ ಇದನ್ನು ಮಾಡಲು ಮನಸ್ಸಿಲ್ಲ. ಸಂವಿಧಾನ ಕೈಯಲ್ಲಿ ಹಿಡಿದು ಅದರ ವಿರುದ್ಧ ನಿರ್ಣಯ ಮಾಡುತ್ತಾರೆ. ಲಾಠಿ ಚಾರ್ಜ್ ನಿರಕುಂಶವಾದ ನಡೆ. ಕೂಡಲೇ ಹೋರಾಟಗಾರರನ್ನು ಕರೆದು ಮಾತನಾಡಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಉಕ್ಕು ಕ್ಷೇತ್ರದಲ್ಲಿ ಹಸಿರು ಕ್ರಾಂತಿ – ಪ್ರಧಾನಿ ಮೋದಿ ಕನಸು ಅನಾವರಣಗೊಳಿಸಿದ ಹೆಚ್‌ಡಿಕೆ