-ಸ್ವಾತಂತ್ರ್ಯ ನಂತರ ದೇಶದಲ್ಲಿ ಪ್ರಧಾನಿ ಮೋದಿ ಅವರಿಂದ ಐತಿಹಾಸಿಕ ಕ್ರಮ: ಸಚಿವ ಪ್ರಹ್ಲಾದ್ ಜೋಶಿ ಬಣ್ಣನೆ
-ಹುಬ್ಬಳ್ಳಿಯಿಂದ ಭಾರತ್ ಬ್ರ‍್ಯಾಂಡ್ ಆಹಾರ ಧಾನ್ಯ ಹೊತ್ತು ಸಾಗಿದ 50ಕ್ಕೂ ಹೆಚ್ಚು ಮೊಬೈಲ್ ವಾಹನ
Advertisement
ಹುಬ್ಬಳ್ಳಿ: ಬೆಲೆ ಏರಿಕೆ ನಿಯಂತ್ರಣ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೈಗೊಂಡ ‘ಗ್ರಾಹಕರಿಗೆ ನೇರ ಆಹಾರ ಧಾನ್ಯ ವಿತರಣೆ’ಗೆ ಕೇಂದ್ರ ಆಹಾರ ಸಚಿವರ ತವರು ಕ್ಷೇತ್ರದಲ್ಲಿ ಇಂದು ಚಾಲನೆ ನೀಡಲಾಯಿತು. ಹುಬ್ಬಳ್ಳಿ (Hubballi) 3,000 ಮಠದ ಮೈದಾನದಲ್ಲಿ ಸೋಮವಾರ ಬೆಳಗ್ಗೆ ಕೇಂದ್ರ ಆಹಾರ ಪೂರೈಕೆ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಆಹಾರ ಧಾನ್ಯ ದಾಸ್ತಾನು ಹೊತ್ತ ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿದರು. ಇದನ್ನೂ ಓದಿ: ಮನೆ ಮನೆಗಳಿಂದ ಕಸ ಸಂಗ್ರಹಕ್ಕೆ ಶುಲ್ಕ ವಸೂಲಿ – ರಾಜ್ಯ ಸರ್ಕಾರಕ್ಕೆ ಬಿಬಿಎಂಪಿಯಿಂದ ಪ್ರಸ್ತಾವನೆ
Advertisement
ಇದೇ ವೇಳೆ ಜನಸಾಮಾನ್ಯರಿಗೆ ಆಹಾರ ಧಾನ್ಯ ಕಿಟ್ ವಿತರಿಸಿ ಮಾತನಾಡಿ, ಕೇಂದ್ರ ಸರ್ಕಾರ ಯಾವತ್ತೂ ರೈತರ ಮತ್ತು ಕಡುಬಡವರ ಹಿತ ಕಾಯಲು ಬದ್ಧವಾಗಿದೆ ಎಂದು ಹೇಳಿದರು. ಸ್ವಾತಂತ್ರ‍್ಯ ನಂತರ ದೇಶದಲ್ಲಿ ಬೆಲೆ ಏರಿಕೆ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ತರಲು ಕೇಂದ್ರ ಸರ್ಕಾರ ಇದೇ ಪ್ರಥಮ ಬಾರಿಗೆ ಇಂತಹ ಐತಿಹಾಸಿಕ ಕ್ರಮ ಕೈಗೊಂಡಿದೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ಅನ್ನಭಾಗ್ಯ ಫಲಾನುಭವಿಗಳಿಗೆ ಸರ್ಕಾರ ಶಾಕ್ – ಕಳೆದೆರಡು ತಿಂಗಳಿಂದ ಸಿಕ್ಕಿಲ್ಲ ಅಕ್ಕಿ ದುಡ್ಡು
Advertisement
Advertisement
ಬೆಲೆ ಏರಿಕೆಯಿಂದ ಜನಸಾಮಾನ್ಯರು ಹೈರಾಣುಗುವುದನ್ನು ತಪ್ಪಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ದೇಶಾದ್ಯಂತ ಗ್ರಾಹಕರಿಗೆ ನೇರ ಆಹಾರ ಧಾನ್ಯ ವಿತರಣೆಗೆ ಮುಂದಾಗಿದೆ. ಈಗಾಗಲೇ ದೆಹಲಿ, ಬೆಂಗಳೂರಿನಂತಹ ದೊಡ್ಡ ದೊಡ್ಡ ನಗರಗಳಲ್ಲಿ ಭಾರತ್ ಬ್ರ‍್ಯಾಂಡ್ ಅಡಿ ಆಹಾರ ಧಾನ್ಯ ವಿತರಣೆ ಕೈಗೊಂಡಿದ್ದು, ಈಗ ವಾಣಿಜ್ಯ ನಗರಿ ಹುಬ್ಬಳ್ಳಿ – ಧಾರವಾಡ ಅವಳಿ ನಗರಗಳಲ್ಲಿ ವಿತರಣೆ ನಡೆದಿದೆ ಎಂದರು. ಇದನ್ನೂ ಓದಿ: ಭದ್ರತಾ ಪಡೆ, ಉಗ್ರರ ನಡುವೆ ಗುಂಡಿನ ಚಕಮಕಿ – 100ಕ್ಕೆ ಕರೆ ಮಾಡಿ ಬಚಾವ್ ಆದ ಚಾರಣಿಗರು
50ಕ್ಕೂ ಹೆಚ್ಚು ಸಂಚಾರಿ ವಾಹನಗಳಲ್ಲಿ ಪೂರೈಕೆ:
ಹುಬ್ಬಳ್ಳಿ-ಧಾರವಾಡ ಅವಳಿ ನಗರ ಮತ್ತು ಧಾರವಾಡ (Dharawada) ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 50ಕ್ಕೂ ಹೆಚ್ಚು ವಾಹನಗಳಲ್ಲಿ ಕಡಿಮೆ ಬೆಲೆಯಲ್ಲಿ ಭಾರತ್ ಬ್ರ‍್ಯಾಂಡ್ (Bharat Brand) ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರು | ಬಿಎಂಟಿಸಿ ಚಾಲಕನ ಮೇಲೆ ಬೈಕ್ ಸವಾರನಿಂದ ಹಲ್ಲೆ
ಯಾವುದಕ್ಕೆ ಎಷ್ಟು ಬೆಲೆ:
ಭಾರತ್ ಅಕ್ಕಿ 34 ರೂ., ಭಾರತ್ ಗೋಧಿ ಹಿಟ್ಟು 30 ರೂ., ಭಾರತ್ ಕಡಲೆ ಬೇಳೆ 70 ರೂ. ಮತ್ತು ಭಾರತ್ ಹೆಸರು ಬೇಳೆಯನ್ನು 107 ರೂ. ರಿಯಾಯಿತಿ ದರದಲ್ಲಿ ಜನಸಾಮಾನ್ಯರಿಗೆ ಮೊಬೈಲ್ ವಾಹನಗಳ ಮೂಲಕ ನೇರವಾಗಿ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ರೈತರ ಜತೆ ಸಾಮಾನ್ಯ ಜನರ ಹಿತರಕ್ಷಣೆ:
ಪ್ರಧಾನಿ ಮೋದಿ ಅವರು ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಿ ರೈತರ ಹಿತ ರಕ್ಷಣೆ ಜತೆಗೆ ದೇಶಾದ್ಯಂತ ಕಡಿಮೆ ಬೆಲೆಗೆ ಆಹಾರ ಧಾನ್ಯ ಪೂರೈಸಿ ಜನಸಾಮಾನ್ಯರ ಹಿತವನ್ನೂ ಕಾಯುತ್ತಿದೆ ಎಂದರು. ಇದನ್ನೂ ಓದಿ: ಮೈಸೂರಿನ ಸರ್ಕಾರಿ ಶಾಲೆ ಜಾಗ ವಕ್ಫ್ ಆಸ್ತಿ – ಅಭಿನಂದನೆಗಳು ಸರ್ ಎಂದು ಸಿಎಂಗೆ ಪ್ರತಾಪ್ ಸಿಂಹ ಟಾಂಗ್
ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ (Mahesh Tenginakai), ಮಹಾನಗರ ಪಾಲಿಕೆ ಸದಸ್ಯರು ಮತ್ತು ಪ್ರಮುಖರು ಉಪಸ್ಥಿತರಿದ್ದರು. ಇದನ್ನೂ ಓದಿ: ಪ್ರೇಯಸಿ ತಾಯಿಗಾಗಿ ಚೈನ್ ಕಳ್ಳತನ – ಡ್ಯಾನ್ಸ್ ಮಾಸ್ಟರ್ ಅರೆಸ್ಟ್