ಶ್ರೀಹರಿಕೋಟ: ಕಪ್ಪು ಕುಳಿಗಳ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ದ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ (XPoSat Launch) ಯಶಸ್ವಿಯಾಗಿದೆ.
ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಪಿಎಸ್‍ಎಲ್‍ವಿ ಮೂಲಕ ಈ ಉಪಗ್ರಹ ಉಡಾವಣೆ ಮಾಡಲಾಗಿದೆ. ಈ ಮೂಲಕ ದೇಶದ ಮೊದಲ ಎಕ್ಸ್-ರೇ ಪೋಲರಿಮೀಟರ್ ಉಪಗ್ರಹ ಎಕ್ಸ್‌ಪೋಸ್ಯಾಟ್ ಉಡಾವಣೆ ಯಶಸ್ವಿಯಾಗಿದ್ದು, ಹೊಸ ವರ್ಷದ ದಿನವೇ ಇಸ್ರೋ ಇತಿಹಾಸ ನಿರ್ಮಿಸಿದೆ. ಇದರೊಂದಿಗೆ ಪಿಎಸ್‍ಎಲ್‍ವಿ ಇತರ ಹತ್ತು ಉಪಗ್ರಹಗಳನ್ನು ಹೊತ್ತೊಯ್ದಿದೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ – ತಿರುಪತಿಗೆ ಇಸ್ರೋ ವಿಜ್ಞಾನಿಗಳ ಭೇಟಿ, ಪೂಜೆ
Advertisement
2024 lifted off majestically. ????
XPoSat health is normal.
Power generation has commenced. pic.twitter.com/v9ut0hh2ib
— ISRO (@isro) January 1, 2024
Advertisement
ಈ ಉಪಗ್ರಹಗಳನ್ನು ಸ್ಟಾರ್ಟ್‍ಅಪ್ಸ್, ಶೈಕ್ಷಣಿಕ ಸಂಸ್ಥೆಗಳು ಮತ್ತು ಇಸ್ರೋ ಕೇಂದ್ರಗಳು ನಿರ್ಮಾಣ ಮಾಡಿದ್ದು, ಪಲ್ಸಾರ, ಕಪ್ಪು ಕುಳಿ ,ಎಕ್ಸ್-ರೇ ಬೈನರಿಗಳು, ಸಕ್ರಿಯ ಗ್ಯಾಲಕ್ಸಿಯ ನ್ಯೂಕ್ಲಿಯಸ್‍ಗಳು, ನ್ಯೂಟ್ರಾನ್ ನಕ್ಷತ್ರಗಳು ಮತ್ತು ಸೂಪರ್‍ನೋವಾ ಅವಶೇಷಗಳ ಅಧ್ಯಯನ ನಡೆಸಲಿದೆ. ಈ ಮಿಷನ್ ಕನಿಷ್ಠ ಐದು ವರ್ಷಗಳ ಕಾಲ ಸಕ್ರಿಯವಾಗಿ ಕಾರ್ಯನಿರ್ವಹಿಸಲಿದೆ.
Advertisement
Advertisement
POLIX (ಎಕ್ಸ್-ರೇಗಳಲ್ಲಿ ಪೋಲಾರಿಮೀಟರ್ ಉಪಕರಣ) ಮತ್ತು XSPECT (ಎಕ್ಸ್-ರೇ ಸ್ಪೆಕ್ಟ್ರೋಸ್ಕೋಪಿ ಮತ್ತು ಟೈಮಿಂಗ್) ಪೇಲೋಡ್‌ಗಳಾಗಿವೆ. POLIX ಅನ್ನು ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಅಭಿವೃದ್ಧಿಪಡಿಸಿದೆ. ಎಕ್ಸ್‌ಸ್ಪೆಕ್ಟ್ ಅನ್ನು ಬೆಂಗಳೂರಿನ ಯುಆರ್‌ಎಸ್‌ಸಿಯ ಬಾಹ್ಯಾಕಾಶ ಖಗೋಳವಿಜ್ಞಾನಿಗಳ ತಂಡ ಅಭಿವೃದ್ಧಿಪಡಿಸಿದೆ. ಇದನ್ನೂ ಓದಿ: ಜ.12 ರಂದು ದೇಶದ ಅತಿ ಉದ್ದದ ಸಮುದ್ರ ಸೇತುವೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ ಮೋದಿ