ನವದೆಹಲಿ: ನಾಗಾಲ್ಯಾಂಡ್‌ನ (Nagaland) 9 ಜಿಲ್ಲೆಗಳಲ್ಲಿ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆಯನ್ನು ಇಂದಿನಿಂದ ಮುಂದಿನ ವರ್ಷದ ಮಾರ್ಚ್ 30ರವರೆಗೆ ವಿಸ್ತರಿಸಿದೆ ಎಂದು ಗೃಹ ಸಚಿವಾಲಯ (Central government) ಅಧಿಸೂಚನೆ ಹೊರಡಿಸಿದೆ.
ನಾಗಾಲ್ಯಾಂಡ್‌ನ ದಿಮಾಪುರ್, ನಿಯುಲ್ಯಾಂಡ್, ಚುಮೌಕೆಡಿಮಾ, ಮೊನ್, ಕಿಫಿರೆ, ನೋಕ್ಲಾಕ್, ಫೆಕ್, ಪೆರೆನ್ ಮತ್ತು ಝುನ್ಹೆಬೊಟೊ ಜಿಲ್ಲೆಗಳು AFSPA ಕಾಯ್ದೆಯಡಿಯಲ್ಲಿ ಬರುತ್ತವೆ. ನಾಗಾಲ್ಯಾಂಡ್‌ನಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಪರಿಶೀಲಿಸಿದ ನಂತರ ಕೇಂದ್ರವು ಈ ಕ್ರಮ ಕೈಗೊಂಡಿದೆ.
Advertisement
Advertisement
ಇದಕ್ಕೂ ಮೊದಲು ಕೇಂದ್ರ ಸರ್ಕಾರವು ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರಗಳು) ಕಾಯ್ದೆಯನ್ನು ಏಪ್ರಿಲ್ 1ರಿಂದ ಸೆಪ್ಟೆಂಬರ್ 30, 2022 ರವರೆಗೆ ನಾಗಾಲ್ಯಾಂಡ್‌ನ ಇತರ ನಾಲ್ಕು ಜಿಲ್ಲೆಗಳಲ್ಲಿ ಘೋಷಿಸಿತ್ತು. ಇದನ್ನೂ ಓದಿ: ಹೈಕೋರ್ಟ್ ವಕೀಲ ಆತ್ಮಹತ್ಯೆ- ಕೋರ್ಟ್ ಕೊಠಡಿ ಧ್ವಂಸ
Advertisement
ಏನಿದು AFSPA ಕಾಯ್ದೆ?: ಭದ್ರತೆಗೆ ಸಮಸ್ಯೆಯಾಗುವ ಪ್ರದೇಶದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸುವ ಅಧಿಕಾರವನ್ನು ನೀಡುತ್ತದೆ. ಇದು ಭದ್ರತಾ ಸಿಬ್ಬಂದಿಗೆ ಬಲವನ್ನು ಬಳಸಲು ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಉಲ್ಲಂಘನೆಯ ಸಂದರ್ಭದಲ್ಲಿ ಸರಿಯಾದ ಎಚ್ಚರಿಕೆಯ ನಂತರ ಗುಂಡಿನ ದಾಳಿ ನಡೆಸಲು ಸಹ ಅನುಮತಿಸುತ್ತದೆ.
Advertisement
ಇದರ ಅನ್ವಯ ಕಾನೂನು ಮತ್ತು ಸುವ್ಯವಸ್ಥೆಗೆ ವಿರುದ್ಧವಾಗಿ ವರ್ತಿಸುವ ಯಾರೊಬ್ಬರ ಮೇಲೆ ಗುಂಡು ಹಾರಿಸುವುದು, ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸುವುದು, ಯಾವುದೇ ವಾಹನ ನಿಲ್ಲಿಸುವುದು ಮತ್ತು ಹುಡುಕುವುದು ಮತ್ತು ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಸಭೆಯನ್ನು ನಿಷೇಧಿಸುವುದು ಸೇರಿದಂತೆ ಕೆಲವು ಅಧಿಕಾರಗಳನ್ನು ಸಶಸ್ತ್ರ ಪಡೆಗಳಿಗೆ ನೀಡಲಾಗುತ್ತದೆ. AFSPA ಅಡಿಯಲ್ಲಿ ನಾಗರಿಕರು ಬಂದೂಕುಗಳನ್ನು ಹೊಂದುವುದನ್ನು ಸಹ ನಿಷೇಧಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನ ಐದು ರೈಲು ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್ ದರ ಏರಿಕೆ