ಮಡಿಕೇರಿ: ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ಹದಗೆಟ್ಟು ಹೋಗಿದೆ ಎಂದು ಟೀಕಿಸುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ಇದ್ದಾಗ ಅವರು ಏನು ಮಾಡಿದ್ದರು ಎಂದು ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್. ಅಂಗಾರ ಪ್ರಶ್ನೆ ಮಾಡಿದ್ದಾರೆ.
Advertisement
ಮಡಿಕೇರಿಯಲ್ಲಿ ನಡೆಯುತ್ತಿರುವ ಅರೆಭಾಷೆ ದಶವರ್ಷ ಸಂಭ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತಾನಾಡಿದ ಅಂಗಾರ, ಅದೆಲ್ಲಾ ರಾಜಕೀಯವಾಗಿ ಹೇಳೋದೆಲ್ಲಾ ಇದ್ದೇ ಇದೆ. ಕಾಂಗ್ರೆಸ್ ಅವರ ಸರ್ಕಾರದ ಸಂದರ್ಭ ರಾಜ್ಯದಲ್ಲಿ ಏನು ನಡೆದಿತ್ತು ಎನ್ನುವುದು ಎಲ್ಲರಿಗೆ ಗೊತ್ತಿದೆ. ಅದನ್ನು ಸ್ವಲ್ಪ ಅವರು ಯೋಚನೆ ಮಾಡಲಿ. ಈಗ ನಮ್ಮ ಸರ್ಕಾರವಿದೆ ಕಾನೂನು ಸುವ್ಯವಸ್ಥೆಗೆ ಏನು ಮಾಡಬೇಕೋ ಅದನ್ನು ನಾವು ಮಾಡುತ್ತೇವೆ ಎಂದರು. ಇದನ್ನೂ ಓದಿ: ಗ್ಯಾಂಗ್‍ರೇಪ್ ಪ್ರಕರಣ ಸಂಬಂಧ ಕಾಲಹರಣ ಮಾಡಿಲ್ಲ – ಗೃಹ ಸಚಿವ ಸ್ಪಷ್ಟನೆ
Advertisement
Advertisement
ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ವಿಷಯದಲ್ಲಿ ರಾಜಕೀಯ ಮಾಡುವುದು ಸರಿ ಅಲ್ಲ. ಕಾಂಗ್ರೆಸ್ ನವರು ನನ್ನ ಮೇಲೆ ಅತ್ಯಾಚಾರ ಮಾಡುತ್ತಿದ್ದಾರೆ ಎನ್ನುವ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿಕೆ ವಿಚಾರ ಸಂಬಂಧಿಸಿದಂತೆ ನಾನು ವಿಚಾರಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಗ್ಯಾಂಗ್‍ರೇಪ್ ಪ್ರಕರಣದ ಸಂತ್ರಸ್ತೆ ತನಿಖೆಗೆ ಸ್ಪಂದಿಸುತ್ತಿಲ್ಲ: ಎಸ್‍ಟಿಎಸ್ ಆರೋಪ
Advertisement