ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಾದ (Wrestlers) ಭಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಶನಿವಾರ ರಾತ್ರಿ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಭೇಟಿಯಾಗಿದ್ದಾರೆ.
ಭೇಟಿ ವೇಳೆ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅಪ್ರಾಪ್ತ ವಯಸ್ಕ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಅವರ ವಿರುದ್ಧ ನಿಷ್ಪಕ್ಷಪಾತ ತನಿಖೆಯಾಗಬೇಕು ಮತ್ತು ತ್ವರಿತ ಕ್ರಮ ತೆಗೆದುಕೊಳ್ಳಬೇಕು ಎಂದು ಕುಸ್ತಿಪಟುಗಳು ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಶೃಂಗೇರಿಯಿಂದ ಪಂಚಲೋಹ ಮೂರ್ತಿ ರವಾನೆ – 75 ವರ್ಷಗಳ ಬಳಿಕ ಕಾಶ್ಮೀರದ ಶಾರದಾಂಬೆ ದೇಗುಲದಲ್ಲಿ ಪೂಜೆ
Advertisement
Advertisement
ಕುಸ್ತಿಪಟುಗಳ ಮನವಿ ಆಲಿಸಿದ ಅಮಿತ್ ಶಾ, ಕಾನೂನು ಎಲ್ಲರಿಗೂ ಒಂದೇ, ಅದು ತನ್ನದೇ ಆದ ಕ್ರಮಗಳನ್ನು ತೆಗೆದುಕೊಳ್ಳಲಿ ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದ್ದು, ಕಾನೂನು ಹೋರಾಟದಲ್ಲಿ ಹಸ್ತಕ್ಷೇಪ ಮಾಡದಿರುವ ಬಗ್ಗೆ ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಒಡಿಶಾ ರೈಲು ದುರಂತ – ಅಪಘಾತವಾಗಿ 51 ಗಂಟೆಗಳ ಬಳಿಕ ಮೊದಲ ರೈಲು ಸಂಚಾರ
Advertisement
ಮೇ 28ರವರೆಗೂ ಕುಸ್ತಿಪಟುಗಳು ದೆಹಲಿಯ (Delhi) ಜಂತರ್ ಮಂತರ್‌ನಲ್ಲಿ ಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಹೊಸ ಸಂಸತ್ ಉದ್ಘಾಟನೆ ದಿನದಂದು ಪಾರ್ಲಿಮೆಂಟ್ ಬಳಿಗೆ ಮೆರವಣಿಗೆ ಹೊರಟ ಅವರನ್ನು ತಡೆದ ಪೊಲೀಸರು ಅಮಾನವೀಯವಾಗಿ ನಡೆದುಕೊಂಡಿದ್ದರು. ಇದನ್ನೂ ಓದಿ: ಮತ್ತೆ ಲಿಂಗಾಯತ ಸ್ವತಂತ್ರ ಧರ್ಮದ ಕೂಗು – ಹೈದರಾಬಾದ್‌ನಲ್ಲಿ ಸಮಾವೇಶ
Advertisement
ಆ ಬಳಿಕ ಕುಸ್ತಿಪಟುಗಳು ತಾವು ಗೆದ್ದಿದ್ದ ಪದಕಗಳನ್ನು ಗಂಗಾ ನದಿಯಲ್ಲಿ ವಿರ್ಸಜನೆ ಮಾಡಲು ಹರಿದ್ವಾರಕ್ಕೆ ತೆರಳಿದ್ದರು. ಅನೇಕ ಜನರು ಮನವಿ ಮಾಡಿದ್ದರಿಂದ, ರೈತ ಮುಖಂಡರಿಗೆ ಪದಕಗಳನ್ನು ನೀಡಲು ನಿರ್ಧರಿಸಿ, ಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ ಐದು ದಿನದ ಗಡುವು ನೀಡಿದ್ದರು. ಇದನ್ನೂ ಓದಿ: ಕುಸಿದೇ ಬಿಡ್ತು 1,700 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಸೇತುವೆ