ಬೆಂಗಳೂರು: ಮರಗಳ್ಳತನ ಕೇಸ್‌ನಲ್ಲಿ ಅರಣ್ಯಾಧಿಕಾರಿಗಳು ಸಂಸದ ಪ್ರತಾಪ್ ಸಿಂಹ (Prathap Simha) ಸಹೋದರ ವಿಕ್ರಂ ಸಿಂಹ (Vikram Simha) ಬಂಧನದ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ಪ್ರತಿಕ್ರಿಯಿಸಿದ್ದು, ನೆಲದ ಕಾನೂನು ಎಲ್ಲರಿಗೂ ಒಂದೆ. ಅರಣ್ಯ ಸಂರಕ್ಷಣೆಗೆ ಅರಣ್ಯ ಇಲಾಖೆ (Forest Department) ಬದ್ಧವಾಗಿದೆ ಎಂದು ಹೇಳಿದ್ದಾರೆ.
ಈ ಕುರಿತು ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಮರ ಕಡಿಯುವ ಪ್ರಕರಣ ಹೆಚ್ಚಾಗಿದೆ. ವಿಕ್ರಂ ಸಿಂಹ ವಿರುದ್ಧ ದೂರು ದಾಖಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ. ಮಾಡೋದೆಲ್ಲ ಮಾಡಿ, ಕಾಂಗ್ರೆಸ್ (Congress) ಅಂತ ಎಲ್ಲಾ ಲೇಪನ ಕೊಡೋದು ಸರಿಯಲ್ಲ. ದಾಖಲೆ ಎಲ್ಲವೂ ಇದೆಯಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಲಹೆಗಾರರನ್ನು ನೇಮಕ ಮಾಡಿಕೊಂಡ ಮುಖ್ಯಮಂತ್ರಿಗೆ ಹ್ಯಾಟ್ಸಾಫ್: ಹೆಚ್‌ಡಿಕೆ ವ್ಯಂಗ್ಯ
- Advertisement
ವಿಕ್ರಂ ಸಿಂಹ 126 ಮರ ಕಡಿದ ದಾಖಲೆ ಇದೆ. ಹಿರಿಯ ಅಧಿಕಾರಿಗಳು ತನಿಖೆ ಮಾಡಿದ್ದಾರೆ. ಇದರಲ್ಲಿ ನಮ್ಮ ಅಧಿಕಾರಿಗಳು ಶಾಮೀಲಾಗಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನ
- Advertisement
ಮರಗಳ್ಳತನ ಪ್ರಕರಣದಲ್ಲಿ ವಿಕ್ರಂ ಸಿಂಹನನ್ನು ಹಾಸನದ ಅರಣ್ಯಾಧಿಕಾರಿಗಳು ಬೆಂಗಳೂರಿನಲ್ಲಿ (Bengaluru) ಬಂಧಿಸಿದ್ದಾರೆ. ಹಾಸನ (Hassan) ಜಿಲ್ಲೆಯಲ್ಲಿ 126 ಮರಗಳನ್ನು ಕಡಿದು ಸಾಗಿಸಿದ ಆರೋಪದ ಮೇಲೆ ಸ್ಥಳೀಯ ಪೊಲೀಸರ ಸಹಾಯದಿಂದ ವಿಕ್ರಂ ಸಿಂಹನನ್ನು ಅರೆಸ್ಟ್ ಮಾಡಲಾಗಿದೆ. ಹಾಸನದ ಬೇಲೂರಿನಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರಿಗೆ ಕಾಣಿಕೆ ಮೇಲೆ ಕಾಣಿಕೆ ಕೊಡ್ತಿದೆ: ಅಶೋಕ್ ವಾಗ್ದಾಳಿ