ನವದೆಹಲಿ: 2022 ರಲ್ಲಿ ತನ್ನ ಲಿವ್ ಇನ್ ಪಾಲುದಾರ ಶ್ರದ್ಧಾ ವಾಕರ್ (Shraddha Walkar) ಅವರನ್ನು ಕೊಲೆ ಮಾಡಿದ ಆರೋಪಿ ಅಫ್ತಾಬ್ ಪೂನಾವಾಲಾ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ (Lawrence Bishnoi Gang) ಹಿಟ್ ಲಿಸ್ಟ್‌ನಲ್ಲಿದ್ದಾನೆ ಎಂದು ಮುಂಬೈ ಪೊಲೀಸ್ ಮೂಲಗಳು ಹೇಳಿವೆ. ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರ ಹತ್ಯೆಯ ತನಿಖೆಯ ಸಮಯದಲ್ಲಿ ಈ ಮಾಹಿತಿ ಹೊರ ಬಂದಿದೆ.
ಸದ್ಯ ತಿಹಾರ್ ಜೈಲಿನಲ್ಲಿರುವ ಆರೋಪಿ ಅಫ್ತಾಬ್ ಪೂನಾವಾಲಾ (Aftab Poonawalla) ಕೊಠಡಿಯ ಸುತ್ತ ಭದ್ರತೆಯನ್ನು ಹೆಚ್ಚಿಸಿದೆ ಎಂದು ವರದಿಯಾಗಿದೆ. ಆದರೆ ಮುಂಬೈ ಪೊಲೀಸರಿಂದ ತಮಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆ ಪತ್ನಿಯ ಜೊತೆಗಿನ ಸಮ್ಮತಿಯ ಲೈಂಗಿಕ ಕ್ರಿಯೆ ಅತ್ಯಾಚಾರಕ್ಕೆ ಸಮ – ಬಾಂಬೆ ಹೈಕೋರ್ಟ್
ದೆಹಲಿಯಲ್ಲಿ 27 ವರ್ಷದ ಶ್ರದ್ಧಾ ವಾಕರ್ ಅವರನ್ನು ಕತ್ತು ಹಿಸುಕಿ, ನಂತರ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಅಫ್ತಾಬ್ ಪೂನಾವಾಲಾ ಕೊಲೆ ಮಾಡಿದ್ದ. ಶ್ರದ್ಧಾ ಮದುವೆಯಾಗುವಂತೆ ಒತ್ತಡ ಹೇರಿದ ನಂತರ ಆರೋಪಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಈ ಭಯಾನಕ ಘಟನೆಯು ದೇಶಾದ್ಯಂತ ಆಘಾತ ಮೂಡಿಸಿತ್ತು.
ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂಲಗಳ ಪ್ರಕಾರ, ಬಿಷ್ಣೋಯ್ ಗ್ಯಾಂಗ್ ತನ್ನ ಅಪರಾಧ ಚಟುವಟಿಕೆಗಳ ಭಾಗವಾಗಿ ಹಲವಾರು ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡಿದೆ. ಇದು ಸೇಡು ಮತ್ತು ಪೈಪೋಟಿಯಿಂದ ಪ್ರೇರೇಪಿಸಲ್ಪಟ್ಟಿದೆ. ಅವರ ಪ್ರಾಥಮಿಕ ಗುರಿಗಳಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಸೇರಿದ್ದಾರೆ. ಇದನ್ನೂ ಓದಿ: ಡೆಹ್ರಾಡೂನ್‌ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ 6 ವಿದ್ಯಾರ್ಥಿಗಳು ಬಲಿ
ಇನ್ನು ಅಫ್ತಾಬ್ ಜೊತೆಗೆ ಹಿಟ್ ಲಿಸ್ಟ್‌ನಲ್ಲಿರುವ ಇತರರಲ್ಲಿ ಬಿಷ್ಣೋಯ್ ಗ್ಯಾಂಗ್‌ನಿಂದ ಹತ್ಯೆಗೀಡಾದ ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಅವರ ಮ್ಯಾನೇಜರ್ ಶಗನ್‌ಪ್ರೀತ್ ಸಿಂಗ್ ಸೇರಿದ್ದಾರೆ. ಪ್ರಸ್ತುತ ಗುರುಗ್ರಾಮ್‌ನಲ್ಲಿ ಜೈಲಿನಲ್ಲಿರುವ ದರೋಡೆಕೋರ ಕೌಶಲ್ ಚೌಧರಿ ಮತ್ತು ಪ್ರತಿಸ್ಪರ್ಧಿ ದರೋಡೆಕೋರ ಅಮಿತ್ ದಾಗರ್ ಕೂಡ ಬಿಷ್ಣೋಯಿ ತನ್ನ ಶತ್ರುಗಳ ಲಿಸ್ಟ್‌ನಲ್ಲಿ ಇಟ್ಟುಕೊಂಡಿದೆ.