ಬಾಲಿವುಡ್ (Bollywood) ನಟ ಸಲ್ಮಾನ್ ಖಾನ್ (Salman Khan) ಮುಂಬೈ ನಿವಾಸದ ಹೊರಗೆ ಗುಂಡಿನ ಸದ್ದು ಕೇಳಿ ಬಂದಿತ್ತು. ಇದೀಗ ಈ ದಾಳಿಯಲ್ಲಿ ತಮ್ಮದೇ ಕೈವಾಡವಿದೆ ಎಂದು ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಹೇಳಿಕೊಂಡಿದ್ದಾರೆ. ಅನ್ಮೋಲ್ ಈಗ ಅಮೆರಿಕದಲ್ಲಿದ್ದು, ಸಲ್ಮಾನ್ ಮನೆಯ ಹೊರಗೆ ನಡೆದ ಗುಂಡಿನ ದಾಳಿ ಹೊಣೆ ಹೊತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.
Advertisement
ಅನ್ಮೋಲ್ನ ಫೇಸ್ಬುಕ್ ಪೇಜ್ನಲ್ಲಿ, ಈ ಘಟನೆ ಟ್ರೈಲರ್ ಮಾತ್ರ. ಇದಕ್ಕಿಂತಲೂ ಭೀಕರ ಪರಿಣಾಮವನ್ನು ಮುಂದೆ ಎದುರಿಸಬೇಕಾಗುತ್ತದೆ ಎಂದು ಸಲ್ಮಾನ್ ಖಾನ್ಗೆ ಎಚ್ಚರಿಕೆ ನೀಡಲಾಗಿದೆ. ಸಲ್ಮಾನ್ ಖಾನ್ ಇದು ನಾವು ನಿಮಗೆ ತೋರಿಸಿದ್ದು, ಟ್ರೈಲರ್ ಮಾತ್ರ. ನಮ್ಮ ಸಾಮರ್ಥ್ಯ, ಶಕ್ತಿ ಏನು ಎಂಬುದರ ಪರಿಚಯ ಮಾಡಲು ಈ ಕ್ರಮ ಕೈಗೊಂಡಿದ್ದೇವೆ. ಇದು ನಾವು ನೀಡುವ ಮೊದಲ ಮತ್ತು ಕೊನೆಯ ವಾರ್ನಿಂಗ್ ಎಂದು ಫೇಸ್ಬುಕ್ನಲ್ಲಿ ಬರೆಯಲಾಗಿದೆ.
Advertisement
Advertisement
ಇಂದು (ಏ.14) ಮುಂಜಾನೆ 5 ಗಂಟೆ ಸುಮಾರಿಗೆ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಬೈಕ್ನಲ್ಲಿ ಬಂದ ಅಪರಿಚಿತ ವ್ಯಕ್ತಿ ಗಾಳಿಯಲ್ಲಿ ಹಲವಾರು ಸುತ್ತು ಗುಂಡು ಹಾರಿಸಿದ್ದಾನೆ. ನಂತರ ಸ್ಥಳದಲ್ಲಿ ಪರಾರಿಯಾಗಿದ್ದಾನೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Advertisement
ಮುಂಬೈ ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದು, ಗುಂಡು ಹಾರಿಸಿದ ವ್ಯಕ್ತಿ ಪತ್ತೆಗೆ ಬಲೆ ಬೀಸಿದ್ದಾರೆ. ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್, ಸಲ್ಮಾನ್ ಖಾನ್ ಹತ್ಯೆ ಮಾಡುವುದಾಗಿ ಹೇಳಿದ್ದ. ತಾನು ಟಾರ್ಗೆಟ್ ಮಾಡಿರುವ 10 ಮಂದಿ ಹೆಸರಿನ ಪಟ್ಟಿಯಲ್ಲಿ ಸಲ್ಮಾನ್ ಖಾನ್ ಮೊದಲಿಗರಾಗಿದ್ದಾರೆ ಎಂದಿದ್ದ. 1998ರ ಕೃಷ್ಣಮೃಗ ಬೇಟೆ ಆರೋಪ ಹೊತ್ತಿರುವ ಬಾಲಿವುಡ್ ನಟನ ಮೇಲೆ ಬಿಷ್ಣೋಯ್ ಹಗೆ ಸಾಧಿಸುತ್ತಿದ್ದಾನೆ.
ಬಿಷ್ಣೋಯ್ ತನ್ನ ಸಹಾಯಕ ಸಂಪತ್ ನೆಹ್ರಾ ಬಳಸಿಕೊಂಡು ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸದ ಮೇಲೆ ಕಣ್ಣಿಟ್ಟಿದ್ದ. ವಿಚಾರ ತಿಳಿಯುತ್ತಿದ್ದಂತೆ ನೆಹ್ರಾನನ್ನು ಹರಿಯಾಣ ಪೊಲೀಸರ ವಿಶೇಷ ಕಾರ್ಯಪಡೆ ವಶಪಡಿಸಿಕೊಂಡಿದೆ. ಇದನ್ನೂ ಓದಿ:ಸೌಂದರ್ಯ ಜಗದೀಶ್ ಆತ್ಮಹತ್ಯೆ ಬಗ್ಗೆ ಡಿಸಿಪಿ ಪ್ರತಿಕ್ರಿಯೆ
ಕಳೆದ ವರ್ಷ ಏಪ್ರಿಲ್ 11 ರಂದು ಬಂದ ಮತ್ತೊಂದು ಬೆದರಿಕೆ ಕರೆಯನ್ನು ಅನುಸರಿಸಿ ಮುಂಬೈ ಪೊಲೀಸರು ಸಲ್ಮಾನ್ ಖಾನ್ ಅವರ ಭದ್ರತೆಯನ್ನು Y + ಗೆ ಹೆಚ್ಚಿಸಿದ್ದರು. ಖಾನ್ಗೆ ಬೆದರಿಕೆ ಇಮೇಲ್ ಕಳುಹಿಸಿದ್ದಕ್ಕಾಗಿ ಯುನೈಟೆಡ್ ಕಿಂಗ್ಡಂನಲ್ಲಿರುವ ಭಾರತೀಯ ವಿದ್ಯಾರ್ಥಿಯ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಲಾಗಿದೆ.