ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಅವಹೇಳನ ಮಾಡಲಾಗಿದೆ ಹಾಗೂ ನಾಡಗೀತೆಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.
ರೋಹಿತ್ ಚಕ್ರತೀರ್ಥ ಹಾಗೂ ಲಕ್ಷ್ಮಣ ಅಕಾಶೆ ಕಾರ್ಕಳ ವಿರುದ್ಧ ವಕೀಲ ಎ.ಪಿ.ರಂಗನಾಥ್, ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಗೆ ದೂರು ನೀಡಿದ್ದಾರೆ. ಜೊತೆಗೆ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಪಟ್ಟಿ ತೆರೆಯಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಹಿಂದೂ ದೇವಸ್ಥಾನ ಕೆಡವಿ ನಿರ್ಮಾಣವಾದ ಒಂದೇ ಒಂದು ಮಸೀದಿಯನ್ನೂ ಬಿಡೋದಿಲ್ಲ: ಈಶ್ವರಪ್ಪ
Advertisement
Advertisement
ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಅವಹೇಳನಕಾರಿಯಾಗಿ ಬರೆದು ಸಾಮಾಜಿಕ ಜಾಲಾತಾಣದಲ್ಲಿ ಹಾಕಲಾಗಿತ್ತು. ಅಲ್ಲದೆ ನಾಡಗೀತೆಗೂ ಅಪಮಾನ ಮಾಡಲಾಗಿದೆ. ಲಕ್ಷ್ಮಣ ಎಂಬವರು ಕುವೆಂಪು ಬಗ್ಗೆ ಕೆಟ್ಟ ಪದಗಳಿಂದ ನಿಂದನೆ ಮಾಡಿದ್ದಾರೆ. ಇವರಿಬ್ಬರ ವಿರುದ್ಧ ಸಮಾಜ ಸ್ವಾಸ್ಥ್ಯ ಕದಡುವ ಪ್ರಕರಣದ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಯುಕ್ತರಿಗೆ ದೂರು ನೀಡಲಾಗಿದೆ.