ಹಾಸನ: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇ ಗೌಡರಿಗೆ ಪ್ರಿನ್ಸಿಪಲ್ ಸಿ.ಜೆ. ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಸಿದ್ದರಾಮ್.ಎಸ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪ್ರಜ್ವಲ್ ರೇವಣ್ಣ (Prajwal Revanna) ಪೆನ್‌ಡ್ರೈವ್ ಪ್ರಕರಣದಲ್ಲಿ (Pendrive Case) ದೇವರಾಜೇಗೌಡ ಬ್ಯಾಗ್ ಸಮೇತ ಇನ್ನೋವಾ ಕಾರಿನಲ್ಲಿ ಎಸ್ಕೇಪ್ ಆಗಲು ಯತ್ನಿಸಿದ್ದರು. ಆದರೆ ಶುಕ್ರವಾರ ರಾತ್ರಿ ಹೊಳೆನರಸೀಪುರ ಪೊಲೀಸರ ಮಾಹಿತಿ ಮೇರೆಗೆ ಹಿರಿಯೂರು ಪೊಲೀಸರು ಚಿತ್ರದುರ್ಗ (Chitradurga) ಜಿಲ್ಲೆ ಹಿರಿಯೂರು (Hiriyuru) ತಾಲೂಕಿನ ಗುಯಿಲಾಳ್ ಟೋಲ್ ಬಳಿ ದೇವರಾಜೇಗೌಡರನ್ನು ವಶಕ್ಕೆ ಪಡೆದಿದ್ದರು.
ಹಿರಿಯೂರು ಗ್ರಾಮಾಂತರ ಠಾಣೆ ಸಿಪಿಐ ಕಾಳಿಕೃಷ್ಣ ನೇತೃತ್ವದಲ್ಲಿ ದೇವರಾಜೇಗೌಡರನ್ನು ವಶಕ್ಕೆ ಪಡೆದಿದ್ದು, ಬಳಿಕ ಎಸ್‌ಐ ಅರುಣ್ ನೇತೃತ್ವದಲ್ಲಿ ಹಾಸನ ಪೊಲೀಸರು ದೇವರಾಜೇಗೌಡರನ್ನು ಹೊಳೆನರಸೀಪುರಕ್ಕೆ ಕರೆದೊಯ್ದಿದ್ದರು. ಅರಕಲಗೂಡು, ಹಳ್ಳಿಮೈಸೂರು ಹಾಗೂ ಬಾಣಾವರ ಪಿಎಸ್‌ಐಗಳು ದೇವರಾಜೇಗೌಡರನ್ನು ಕರೆತಂದು ಹೊಳೆನರಸೀಪುರದ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಇರಿಸಿದ್ದರು. ಸತತ ವಿಚಾರಣೆಯ ಬಳಿಕ ಪೊಲೀಸ್ ಅಧಿಕಾರಿಗಳು ಮೆಡಿಕಲ್ ಟೆಸ್ಟ್‌ಗೆ ಕರೆದೊಯ್ದಿದ್ದಾರೆ. ತದ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಇದನ್ನೂ ಓದಿ: ಹೋಟೆಲ್ ರೂಮಿನಲ್ಲಿ ಪರಪುರುಷರೊಂದಿಗೆ ಸರಸ – ಪತಿ ಕೈಗೆ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಡಾಕ್ಟರ್ ಪತ್ನಿ; ಮುಂದೇನಾಯ್ತು?
ಇತ್ತ ದೇವರಾಜೇಗೌಡ ಕಾರು ಚಾಲಕನನ್ನು ಕರೆದೊಯ್ದು ಪೊಲೀಸರು ಕಾರು ತಪಾಸಣೆ ನಡೆಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆ ಸಬ್‌ಇನ್ಸ್‌ಪೆಕ್ಟರ್ ಅಜಯ್‌ಕುಮಾರ್ ಅವರು ಕಾರಿನಲ್ಲಿದ್ದ ಬ್ಯಾಗ್‌ಗಳನ್ನು ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಕಾರಿನಲ್ಲಿದ್ದ ಮೊಬೈಲ್ ಕೂಡ ವಶಕ್ಕೆ ಪಡೆದಿದ್ದಾರೆ. ಸದ್ಯ ದೇವರಾಜೇಗೌಡ ಕಾರು ಪೊಲೀಸರ ವಶದಲ್ಲಿದೆ.