ಚೆನ್ನೈ: ಕೋರ್ಟ್‍ನಲ್ಲಿ ನ್ಯಾಯಾಧೀಶರ ಮುಂದೆಯೇ ವಿಚಾರಣೆ ವೇಳೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವಕೀಲನನ್ನು ಮದ್ರಾಸ್ ಹೈಕೋರ್ಟ್ ಅಮಾನತುಗೊಳಿಸಿದೆ.
ಆರ್.ಡಿ.ಸಂಥಾನ ಕೃಷ್ಣನ್ ಅಮಾನತುಗೊಂಡ ವಕೀಲ. ಅವರ ವಿರುದ್ಧ ಬಾಕಿ ಉಳಿದಿರುವ ಶಿಸ್ತು ಕ್ರಮಗಳನ್ನು ವಿಲೇವಾರಿ ಮಾಡುವವರೆಗೆ ಭಾರತದ ಎಲ್ಲಾ ನ್ಯಾಯಾಲಯಗಳು, ನ್ಯಾಯಮಂಡಳಿಗಳು ಮತ್ತು ಇತರ ಪ್ರಾಧಿಕಾರಗಳಲ್ಲಿ ಅವರು ವಕೀಲರಾಗಿ ಕಾರ್ಯನಿರ್ವಹಿಸುವುದನ್ನು ತಡೆಯಲಾಗಿದೆ. ತಮಿಳುನಾಡು ಮತ್ತು ಪುದುಚೇರಿಯ ಬಾರ್ ಕೌನ್ಸಿಲ್‍ನ ಪತ್ರಿಕಾ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಸ್ನಾನಕ್ಕೆ ಹೋದಾಗ ಗ್ಯಾಸ್ ಗೀಸರ್ ಆನ್ ಮಾಡಿ ಬಾಗಿಲು ಮುಚ್ಚಿ ನವವಧುವಿನ ಕೊಲೆ?
Advertisement
Advertisement
ನ್ಯಾಯಾಧೀಶರಾದ ಪಿ.ಎನ್.ಪ್ರಕಾಶ್ ಮತ್ತು ಆರ್.ಹೇಮಲತಾ ಅವರು, ಸಂಥಾನ ಕೃಷ್ಣನ್ ವಿರುದ್ಧ ಪ್ರಕರಣ ದಾಖಲಿಸುವಂತೆ ಸಿಬಿ-ಸಿಐಡಿ ವಿಂಗ್ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಈ ಸಂಬಂಧ ತನಿಖೆ ನಡೆಸಿ ಡಿ.23ರಂದು ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಅಲ್ಲದೇ ವಕೀಲನ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ತಮಿಳುನಾಡು ಬಾರ್ ಕೌನ್ಸಿಲ್‍ಗೆ ಸಲಹೆ ನೀಡಿದ್ದಾರೆ.
Advertisement
Advertisement
ನ್ಯಾಯಾಧೀಶರು ವೀಡಿಯೋ ಕಾನ್ಫರೆನ್ಸ್‍ನಲ್ಲಿ ಪ್ರಕರಣವೊಂದರ ವಿಚಾರಣೆ ನಡೆಸುತ್ತಿದ್ದಾಗ, ಮಹಿಳೆಯೊಂದಿಗೆ ವಕೀಲ ಅಸಭ್ಯವಾಗಿ ವರ್ತಿಸುತ್ತಿದ್ದ ದೃಶ್ಯ ಕಂಡುಬಂದಿದ್ದು, ಎಲ್ಲೆಡೆ ವೈರಲ್ ಆಗಿತ್ತು. ಇದನ್ನೂ ಓದಿ: ಮದುವೆ ಹಿಂದಿನ ದಿನ ಚಿನ್ನಾಭರಣ ದೋಚಿ ಪ್ರಿಯಕರನೊಂದಿಗೆ ಯುವತಿ ಜೂಟ್