– ಮೂರು ತಿಂಗಳಲ್ಲಿ ವರದಿ ನೀಡುವಂತೆ ಸೂಚನೆ
ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ (Bhovi Corporation Scam) ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ (SIT) ರಚಿಸಿ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ಆದೇಶಿಸಿದೆ.
Advertisement
ಅಲ್ಲದೇ ಮೂರು ತಿಂಗಳಲ್ಲಿ ವಿಚಾರಣೆ ಮುಗಿಸಿ ವರದಿ ನೀಡುವಂತೆ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಸೂಚನೆ ನೀಡಿದೆ. ಒಟ್ಟಾರೆ ಮೂವರು ಐಪಿಎಸ್ ಅಧಿಕಾರಿಗಳನ್ನು (ಸಿಬಿಐ ಎಸ್ಪಿ ವಿನಾಯಕ್ ವರ್ಮ, ಐಪಿಎಸ್ ಅಕ್ಷಯ್ ಮಜ್ಲಿ, ಎಸ್ಪಿ ನಿಶಾ ಜೇಮ್ಸ್) ಎಸ್‌ಐಟಿ ಹೊಂದಿರಲಿದೆ. ಈ ಪೈಕಿ ಇಬ್ಬರು ಎಸ್ಪಿಗಳಿದ್ದಾರೆ. ಇದನ್ನೂ ಓದಿ: ಸಚಿವರ ಕಾರ್ಯವೈಖರಿ ಬಗ್ಗೆ ಹೈಕಮಾಂಡ್ ರಿಪೋರ್ಟ್ ಕೇಳಿದೆ: ಡಾ. ಎಂ.ಸಿ.ಸುಧಾಕರ್
Advertisement
Advertisement
ಉದ್ಯಮಿ ಹಾಗೂ ವಕೀಲೆ ಜೀವಾ ಆತ್ಮಹತ್ಯೆ ಪ್ರಕಣದ ತನಿಖೆಯನ್ನು ಸಿಬಿಐಗೆ (CBI) ವಹಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘ ಅರ್ಜಿ ಸಲ್ಲಿಸಿತ್ತು. ಸಿಬಿಐ ತನಿಖೆ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಎಸ್‌ಐಟಿ ರಚಿಸಿ ಆದೇಶ ಹೊರಡಿಸಿತು. ಇದನ್ನೂ ಓದಿ: ವಿಜಯೇಂದ್ರ ಕೆಳಗಿಳಿಸಲು ಆಗಲ್ಲ, ಒಂದು ಸಾರಿ ಅಧ್ಯಕ್ಷರಾದ್ರೆ ಎಲ್ರೂ ಒಪ್ಪಿಕೊಳ್ಳಲೇಬೇಕು: ಯತ್ನಾಳ್‌ಗೆ ಶ್ರೀರಾಮುಲು ಟಾಂಗ್
Advertisement
ಏನಿದು ಪ್ರಕರಣ?
ಭೋವಿ ನಿಗಮ ಅಕ್ರಮ ಸಂಬಂಧ ಜೀವಾರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ ಕಿರುಕುಳದ ಆರೋಪ ಮಾಡಿ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೋವಿ ನಿಗಮದಲ್ಲಿ ಒಟ್ಟು 34 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ. ಇದರಲ್ಲಿ ಜೀವಾ ಮಾಲೀಕತ್ವದ ಸಂಸ್ಥೆ ಅನ್ನಿಕಾ ಎಂಟರ್‌ಪ್ರೆಸಸ್‌ಗೆ 7.16 ಕೋಟಿ ರೂ., ಅವರ ಸಹೋದರಿ ಹೆಸರಲ್ಲಿರುವ ಹರ್ನಿತಾ ಕ್ರಿಯೇಷನ್ಸ್‌ಗೆ 3.79 ಕೋಟಿ ರೂ. ವರ್ಗಾವಣೆ ಆಗಿತ್ತು. ಇನ್ನುಳಿದ ಹಣ ಮಾಜಿ ಎಂಡಿಗಳ ಆಪ್ತರ ಪಾಲುದಾರಿಕೆಯ ಸಂಸ್ಥೆಗಳಿಗೆ ವರ್ಗವಾಗಿತ್ತು. ಈ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸಲು ಗೃಹ ಇಲಾಖೆ ಮುಂದಾಗಿತ್ತು.
ಸಿಐಡಿ ಅಧಿಕಾರಿಗಳ ವಿರುದ್ಧ ಪ್ರಕರಣ:
ಜೀವಾ ಅವರ ಕಿರಿಯ ಸಹೋದರಿ ಸಂಗೀತಾ ಅವರು ನೀಡಿದ ದೂರಿನಲ್ಲಿ ವಿಚಾರಣೆ ನೆಪದಲ್ಲಿ ಸಿಐಡಿ ಅಧಿಕಾರಿಗಳು ತನ್ನ ಅಕ್ಕ ಜೀವಾಗೆ ಅವಮಾನ ಮಾಡಿದ್ದಾರೆ. ಅಂತೆಯೇ ಹಣಕ್ಕೆ ಬೇಡಿಕೆ ಇರಿಸಿದ್ದಾರೆ ಎಂದು ಆರೋಪಿಸಿದ್ದರು. ಈ ದೂರಿನಮೇರೆಗೆ ಬನಶಂಕರಿ ಠಾಣೆ ಪೊಲೀಸರು ಸಿಐಡಿ ಅಧಿಕಾರಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದರು. ಇದನ್ನೂ ಓದಿ: ಮೋಹಕ ತಾರೆ ಫ್ಯಾನ್ಸ್‌ಗೆ ಗುಡ್ ನ್ಯೂಸ್- ಉಪೇಂದ್ರ ಜೊತೆ ‘ರಕ್ತ ಕಾಶ್ಮೀರ’ದ ಕಥೆ ಹೇಳಲು ಸಜ್ಜಾದ ರಮ್ಯಾ
11 ಪುಟಗಳ ಡೆತ್ ನೋಟ್?:
ಆತ್ಮಹತ್ಯೆಗೂ ಮುನ್ನ ಮಹಿಳಾ ಉದ್ಯಮಿ ಜೀವಾ 11 ಪುಟಗಳ ಮರಣಪತ್ರ ಬರೆದಿದ್ದಾರೆ. ಅದರಲ್ಲಿ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ಸಿಐಡಿ ಅಧಿಕಾರಿಗಳ ವಿಚಾರಣೆ ವಿಚಾರ ಪ್ರಸ್ತಾಪಿಸಿದ್ದಾರೆ. ಸಿಐಡಿ ವಿಚಾರಣೆಯಿಂದ ನನಗೆ ಅವಮಾನವಾಗಿದ್ದು, ಮಾನಸಿಕವಾಗಿ ನೊಂದಿದ್ದೇನೆ. ಎಂದು ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೆ ನನಗೆ ಅವಿವಾಹಿತ ತಂಗಿ ಇರುವುದರಿಂದ ನನ್ನ ಆತ್ಮಹತ್ಯೆ ಸುದ್ದಿಗೆ ಹೆಚ್ಚು ಪ್ರಚಾರ ನೀಡದಂತೆಯೂ ಜೀವಾ ಮರಣಪತ್ರದಲ್ಲಿ ಮನವಿ ಮಾಡಿದ್ದಾರೆ ಎಂದು ಅಧಿಕಾರಿ ಮೂಲಗಳಿಂದ ತಿಳಿದುಬಂದಿತ್ತು.