ಪಾಟ್ನಾ: ನಡುರಸ್ತೆಯಲ್ಲೇ ವಕೀಲನಿಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆದಿದೆ.
ಸಾರ್ವಜನಿಕರ ಎದುರೇ ಗುಂಡಿಟ್ಟು ಹತ್ಯೆ ಮಾಡಲಾಗಿದೆ. ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ರಾಜ್ಯದಲ್ಲಿ ಒಂದು ವಾರದಲ್ಲಿ ನಡೆದ ಮೂರನೇ ಕೊಲೆ ಇದಾಗಿದೆ. ಪಾಟ್ನಾದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಕಳವಳ ವ್ಯಕ್ತವಾಗಿದೆ.
ವಕೀಲ ಜಿತೇಂದ್ರ ಕುಮಾರ್ ಅವರನ್ನು ಗುಂಡು ಹಾರಿಸಿ ಕೊಲ್ಲಲಾಯಿತು. ಕನಿಷ್ಠ ಮೂರು ಗುಂಡುಗಳನ್ನು ಹಾರಿಸಿ ದಾಳಿಕೋರರು ಪರಾರಿಯಾದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಾಳಿಕೋರರನ್ನು ಗುರುತಿಸಲು ಪೊಲೀಸರು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ಗಂಭೀರ ಗಾಯಗೊಂಡಿದ್ದ ವಕೀಲನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ದಾಳಿ ನಡೆದಾಗ ಜಿತೇಂದ್ರ ಕುಮಾರ್ ರಸ್ತೆ ಬದಿಯ ಅಂಗಡಿಯಲ್ಲಿ ಚಹಾ ಕುಡಿಯಲು ಹೋಗಿದ್ದಾಗ ಘಟನೆ ನಡೆದಿದೆ. ಅಪರಾಧ ನಡೆದ ಸ್ಥಳದಿಂದ ವಿಧಿವಿಜ್ಞಾನ ತಂಡವು ಸಾಕ್ಷ್ಯಗಳನ್ನು ಸಂಗ್ರಹಿಸಿದೆ.
ಈ ವಾರದ ಆರಂಭದಲ್ಲಿ ಬಿಹಾರದ ಪ್ರಮುಖ ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆಯಾಗಿತ್ತು. ಇವರ ಬೆನ್ನಲ್ಲೇ ಪಶುವೈದ್ಯ ಮತ್ತು ರೈತರಾಗಿದ್ದ ಬಿಜೆಪಿ ನಾಯಕ ಸುರೇಂದ್ರ ಕೆವಾತ್ ಅವರನ್ನು ಸಹ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.