ನವದೆಹಲಿ: ವಕೀಲೆ ಎಲ್.ವಿಕ್ಟೋರಿಯಾ ಗೌರಿ (Victoria Gowri) ಅವರನ್ನು ಮದ್ರಾಸ್ ಹೈಕೋರ್ಟ್ನ (Madras High Court) ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ವಜಾಗೊಳಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ, ಬಿ.ಆರ್ ಗವಾಯಿ ಅವರ ಪೀಠವು, ಅರ್ಜಿಯಲ್ಲಿ ಪ್ರಸ್ತಾಪಿಸಲಾದ ವಿಷಯವು ಗೌರಿಯ ಅರ್ಹತೆ ಮತ್ತು ಯೋಗ್ಯತೆಗೆ ಸಂಬಂಧಿಸಿದೆ. ಇದು ವ್ಯಕ್ತಿನಿಷ್ಠ ಮೌಲ್ಯಮಾಪನವಾಗಿದೆ. ಆದ್ದರಿಂದ ನ್ಯಾಯಾಲಯವು ಅದನ್ನು ಪರಿಶೀಲಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದೆ. ಇದನ್ನೂ ಓದಿ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ – ತೃತೀಯಲಿಂಗಿಗೆ 7 ವರ್ಷ ಜೈಲು ಶಿಕ್ಷೆ
Advertisement
Advertisement
ನಾವು ಅರ್ಹತೆ ಮತ್ತು ಸೂಕ್ತತೆಯ ನಡುವೆ ಅರ್ಹತೆಯ ಸುತ್ತ ಮಾತ್ರ ಕೆಲಸ ಮಾಡಬಹುದು ಎಂದು ನ್ಯಾಯಮೂರ್ತಿ ಖನ್ನಾ ಹೇಳಿದರು. ಕೊಲಿಜಿಯಂ ಗೌರಿ ವಿರುದ್ಧದ ಎಲ್ಲಾ ವಿಷಯಗಳನ್ನು ಪರಿಗಣಿಸಲಿದೆ. ಕೊಲಿಜಿಯಂನ ನಿರ್ಧಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.
Advertisement
ಗೌರಿ ಅವರ ನೇಮಕದ ವಿರುದ್ಧ ಮದ್ರಾಸ್ ಹೈಕೋರ್ಟ್ನಿಂದ ವಕೀಲರು ಅರ್ಜಿ ಸಲ್ಲಿಸಿದ್ದರು. ಅವರು ಬಿಜೆಪಿ ಸದಸ್ಯರಾಗಿದ್ದಾರೆ, ವಕೀಲೆಯಾಗಿ ಬಿಜೆಪಿಯ ಪರ ಕೆಲಸವೂ ಮಾಡಿದ್ದಾರೆ. ಸಮುದಾಯವೊಂದರ ವಿರುದ್ಧ ಅವರು ನೀಡಿರುವ ಹೇಳಿಕೆಗಳು ಸಾರ್ವಜನಿಕ ವಲಯದಲ್ಲಿರುವ ಹಿನ್ನೆಲೆ ಅವರ ನೇಮಕವನ್ನು ತಡೆ ಹಿಡಿಯಬೇಕು ಎಂದು ಮನವಿ ಮಾಡಲಾಗಿತ್ತು. ಇದನ್ನೂ ಓದಿ: Turkey – Syria Earthquakeː ಸಾವಿನ ಸಂಖ್ಯೆ 4 ಸಾವಿರಕ್ಕೆ ಏರಿಕೆ, 15 ಸಾವಿರ ಮಂದಿಗೆ ಗಾಯ- 4,900 ಕಟ್ಟಡಗಳು ಧ್ವಂಸ
Advertisement
ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿರುವ ಹೊತ್ತಲ್ಲೆ ವಿಕ್ಟೋರಿಯಾ ಗೌರಿ ಮದ್ರಾಸ್ ಹೈಕೋರ್ಟ್ ಹೆಚ್ಚುವರಿ ನ್ಯಾಯಧೀಶೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಧೀಶರು ಪ್ರಮಾಣ ವಚನ ಬೋಧಿಸಿದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k