ಬೆಳಗಾವಿ: ಬ್ಯಾರಿಕೇಡ್ ಎಸೆದು, ಮುಖ್ಯ ದ್ವಾರದ ಮೇಲೆ ವಕೀಲರು ಹತ್ತಿ ಪ್ರತಿಭಟನೆ(Lawyers Protest) ನಡೆಸಿ ಹೈಡ್ರಾಮಾ ಮಾಡಿದ ಘಟನೆ ಸುವರ್ಣ ಸೌಧದ( Suvarna Soudha) ಆವರಣದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ನಡೆಸುತ್ತಿದ್ದ ವಕೀಲರು ಇಂದು ನೇರವಾಗಿ ಸುವರ್ಣ ಸೌಧ ಒಳಗಡೆ ಪ್ರವೇಶಿಸಲು ಮುಂದಾಗಿದ್ದಾರೆ.
Advertisement
ಸುವರ್ಣ ಸೌಧ ಬಳಿ ಯಾವುದೇ ಪ್ರತಿಭಟನೆಗೆ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಪೊಲೀಸರು ವಕೀಲರನ್ನು ತಡೆದಿದ್ದಾರೆ. ಈ ವೇಳೆ ಕೆಲ ವಕೀಲರು ದ್ವಾರದ ಮೇಲೆ ಹತ್ತಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸ್ಪೆಷಲ್ ಮಾಸ್ಕ್ ರಿಲೀಸ್ – ಬಾರ್, ಪಬ್‌ಗಳಲ್ಲಿ ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡ್ಬೋದು: ಆರ್.ಅಶೋಕ್
Advertisement
Advertisement
ವಕೀಲರು ನುಗ್ಗುತ್ತಿದ್ದ ಹಿನ್ನೆಲೆಯಲ್ಲಿ ಸುವರ್ಣ ಸೌಧದ 4 ದ್ವಾರಗಳನ್ನು ಪೊಲೀಸರು ಬಂದ್ ಮಾಡಿದ್ದರು. ಅಗತ್ಯವಿದ್ದವರಿಗೆ ಮಾತ್ರ ಓಡಾಟಕ್ಕೆ ಅವಕಾಶ ನೀಡಿದ್ದರು.
Advertisement
ಮುಖ್ಯದ್ವಾರದಲ್ಲಿ ಪ್ರತಿಭಟನಾನಿರತ ವಕೀಲರ ಮನವಿ ಸ್ವೀಕರಿಸಿ ಮಾತನಾಡಿದ ಕಂದಾಯ ಸಚಿವ ಅಶೋಕ್, ಜನವರಿಯಲ್ಲಿ ಜಂಟಿ ಅಧಿವೇಶನ ನಡೆಯಲಿದ್ದು ಈ ವೇಳೆ ಸಾಧಕ ಬಾಧಕ ಚರ್ಚಿಸಿ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದರು.
ವಕೀಲರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ನ್ಯಾಯ ಇದೆ. ಅವರಿಗೆ ರಕ್ಷಣೆ ಕೊಡಬೇಕು ಎಂದು ನನಗೂ ಅನಿಸಿದೆ. ಈ ಕುರಿತು ಸಿಎಂ ಬೊಮ್ಮಾಯಿ ಜೊತೆಗೆ ಮಾತನಾಡಿದ್ದು ಅವರಿಗೆ ರಕ್ಷಣೆ ಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಕೀಲರಿಗೆ ಕೊಲೆ ಬೆದರಿಕೆ ಆಗಲಿ, ಹಲ್ಲೆ ಆಗಲಿ ಮೊದಲಾದವುಗಳು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಹೇಳಿದರು.
ಸಚಿವ ಅಶೋಕ್ ಅವರು ಭರವಸೆ ನೀಡಿದ ಬಳಿಕ ವಕೀಲರು ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದರು.