– ಡಿಕೆಶಿ, ಲಕ್ಷ್ಮಿ ಹೆಬ್ಬಾಳ್ಕರ್ ನಿನ್ನನ್ನ ನೋಡಿಕೊಳ್ತೀವಿ ಅಂದ್ರು
– ಹತ್ತತ್ತು ನಿಮಿಷಕ್ಕೆ ಪೊಲೀಸರಿಗೆ ಫೋನ್ ಮಾಡ್ತಿದ್ರು ಎಂದ ಎಂಎಲ್‌ಸಿ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalakar) ವಿರುದ್ಧ ಅಸಂವಿಧಾನಿಕ ಪದಬಳಕೆ ಆರೋಪದಲ್ಲಿ ಬಂಧನವಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಇಂದು ಬೆಳಗಾವಿ ಕೋರ್ಟ್‌ಗೆ (Belagavi Court) ಹಾಜರುಪಡಿಸಿದರು.
5ನೇ ಸಿವಿಲ್ ಅಂಡ್ ಜೆಎಂಎಫ್‌ಸಿ ಕೋರ್ಟ್‌ಗೆ ಹಾಜರುಪಡಿಸಿದ್ರು, ಕಲಂ 481 ಅಡಿ ವಕೀಲರು ಬೇಲ್‌ಗೆ ಅರ್ಜಿ ಸಲ್ಲಿಸಿದರು. ಈ ವೇಳೆ ಕೋರ್ಟ್‌ಹಾಲ್‌ನಲ್ಲಿ ಸಿ.ಟಿ ರವಿ (CT Ravi) ಕಣ್ಣೀರು ಹಾಕಿದ್ರು, ಬಳಿಕ ಅವರಿಗೆ ಆರ್. ಅಶೋಕ್, ಅಭಯ್ ಪಾಟೀಲ್ ಸಾಂತ್ವನ ಹೇಳಿದ ಪ್ರಸಂಗ ನಡೆಯಿತು. ನಂತರ ನ್ಯಾಯಾಧೀಶರಾದ ಸ್ಪರ್ಶಾ ಎಂ ಡಿಸೋಜಾ ಎದುರು ವಾದ ಮಂಡಿಸಿದ ಸಿ.ಟಿ ರವಿ ಪರ ವಕೀಲರಾದ ಎಮ್.ಬಿ ಜಿರಲಿ ಮತ್ತು ರವಿರಾಜ್ ಪಾಟೀಲ್ ತಮ್ಮ ಕಕ್ಷಿದಾರರಿಗೆ ಜಾಮೀನು ನೀಡುವಂತೆ ಮನವಿ ಮಾಡಿದ್ರು.
Advertisement
Advertisement
ಇದಕ್ಕೆ ನ್ಯಾಯಾಧೀಶರು ಎಲ್ಲಿ ಅರೆಸ್ಟ್? ಎಷ್ಟು ಗಂಟೆಗೆ ಅರೆಸ್ಟ್? ಎಲ್ಲೆಲ್ಲಿಗೆ ಕರ್ಕೊಂಡು ಹೋಗಿದ್ದರು? ಏನು ಮಾಡಿದ್ರು, ತೊಂದರೆ ಕೊಟ್ರಾ ? ಎಂದೆಲ್ಲಾ ಪ್ರಶ್ನಿಸಿದರು. ಕಟಕಟೆಯಲ್ಲಿ ನಿಂತು ಉತ್ತರಿಸಿದ ಸಿ.ಟಿ ರವಿ, ಮೂರು ಜಿಲ್ಲೆಗಳಲ್ಲಿ ಸುತ್ತಾಡಿಸಿದ್ರು, ಗದಗ, ಧಾರವಾಡ, ಸವದತ್ತಿ, ರಾಮದುರ್ಗ ಸುತ್ತಾಡಿಸಿದ್ರು. ಖಾನಾಪುರ ಪೊಲೀಸರು ನನ್ನನ್ನ ಹೊಡೆದರು, ಕಬ್ಬಿನ ಗದ್ದೆಯಲ್ಲಿ ನಿಲ್ಲಿಸಿದ್ದರು. ಪೊಲೀಸರು ನನಗೆ ಮಾನಸಿಕ, ದೈಹಿಕವಾಗಿ ಹಿಂಸೆ ಕೊಟ್ಟಿದ್ದಾರೆ. ಮೊಬೈಲ್ ಜೊತೆಗೆ ವಾಚ್ ಕೂಡ ಕಿತ್ತುಕೊಂಡರು ಎಂದು ಸರಣಿ ಆರೋಪ ಮಾಡಿದ್ರು.
Advertisement
Advertisement
ಪ್ರತಿ 10 ನಿಮಿಷಕ್ಕೆ ಪೊಲೀಸರಿಗೆ ಯಾರೋ ಫೋನ್ ಮಾಡ್ತಿದ್ರು. ಯಾವ ಕಾರಣಕ್ಕೆ ಅರೆಸ್ಟ್ ಮಾಡಿದ್ದಾರೆ, ಅನ್ನೋ ಮಾಹಿತಿ ಕೂಡ ಕೊಡಲಿಲ್ಲ. ನನ್ನ ಕುಟುಂಬಕ್ಕೂ ಕೂಡ ಮಾಹಿತಿ ನೀಡಲಿಲ್ಲ ಎಂದು ಕಣ್ಣೀರಿಟ್ಟರು.
ನನ್ನ ಮೇಲೆ ಮೂರು ಬಾರಿ ಅಟ್ಯಾಕ್ ಆಯಿತು. ಝಿರೋ ಎಫ್‌ಐಆರ್ ಮಾಡಿ ಎಂದು ಕೇಳಿದೆ ಅದನ್ನು ಮಾಡಲಿಲ್ಲ. ಮಿನಿಸ್ಟರ್ ವಿರುದ್ಧ ಕೇಸ್ ಮಾಡದೇ ಇರುವುದು ಅಪರಾಧ. ಎರಡೂವರೆ ಗಂಟೆ ಯಾವ ನಾಯಕರನ್ನು ಒಳಗಡೆ ಬಿಟ್ಟಿಲ್ಲ. ಮಧ್ಯಾಹ್ನ ಕಾರಿಡಾರ್‌ನಲ್ಲಿ ನಿನ್ನ ಹೆಣವೂ ಚಿಕ್ಕಮಗಳೂರಿಗೆ ಹೋಗಲ್ಲ ಅಂತ ಮಂತ್ರಿಯೊಬ್ಬರು ಧಮ್ಕಿ ಹಾಕಿದರು. ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಡಿಕೆ ಶಿವಕುಮಾರ್ ನಿನ್ನನ್ನ ನೋಡಿ ಕೊಳ್ಳುತ್ತೇನೆ ಅಂದ್ರು. ಇದೆಲ್ಲವನ್ನೂ ನೋಡಿ ನಾನು ರಾತ್ರಿಯಿಡಿ ಆತಂಕದಲ್ಲಿದ್ದೆ ಎಂದು ನ್ಯಾಯಾಧೀಶರ ಎದುರು ಅಳಲು ತೋಡಿಕೊಂಡರು.
ಇದಕ್ಕೆ ದನಿಗೂಡಿಸಿದ ವಕೀಲ ಜಿರಲಿ, ನ್ಯಾಯಾಂಗದ ಸಮಯ ವ್ಯರ್ಥವಾಗುತ್ತದೆ ಅಲ್ಲದೇ ನನ್ನ ಕಕ್ಷಿದಾರ ಮಾನಸಿಕ ಹಾಗು ದೈಹಿಕ ಆರೋಗ್ಯ ಹಾಳಾಗಬಹುದು. ಸ್ಪೀಕರ್ ಸಾವಿಂಧಾನಿಕ ಹೆಡ್ ಇರುತ್ತಾರೆ, ಸ್ಪೀಕರ್‌ಗೆ ಎಲ್ಲವೂ ಗೊತ್ತಿದೆ, ಅಲ್ಲಿ ಯಾವುದೇ ಡಿಸಿಶನ್ ಸ್ಪೀಕರ್ ತೆಗೆದುಕೊಂಡಿಲ್ಲ. ಮೊದಲು ನನ್ನ ಕಕ್ಷಿದಾರನಿಗೆ ಮೆಡಿಕಲ್ ಟ್ರೀಟ್‌ಮೆಂಟ್ ಬೇಕಾಗಿದೆ, ಹೀಗಾಗಿ ಬೇಲ್ ನೀಡುವಂತೆ ಮನವಿ ಮಾಡಿದ್ರು. ವಾದ ಪ್ರತಿವಾದ ಆಲಿಸಿದ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.