ಮಂಡ್ಯ: ಜಿಲ್ಲೆಯಲ್ಲಿ ಲಕ್ಷ್ಮಿ ಅಶ್ವಿನ್ ಗೌಡಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಉಪಚುನಾವಣೆ ಫೋಷಣೆಯಾಗುತ್ತಿದ್ದಂತೆ ಮಂಡ್ಯ ಕ್ಷೇತ್ರದಲ್ಲಿ ಲಕ್ಷ್ಮಿ ಅಶ್ವಿನ್ ಗೌಡ ಅವರಿಗೆ ಟಿಕೆಟ್ ಸಿಗುತ್ತದೆ ಎಂದು ಖಚಿತವಾಗಿ ಹೇಳಲಾಗುತ್ತಿತ್ತು. ಆದರೆ ಕೊನೆಯ ಕ್ಷಣದಲ್ಲಿ ಅಶ್ವಿನ್ ಗೌಡ ಅವರಿಗೆ ಟಿಕೆಟ್ ಕೈ ತಪ್ಪಿದ್ದು, ಎಲ್.ಆರ್. ಶಿವರಾಮೇಗೌಡ ಅವರಿಗೆ ಮಂಡ್ಯ ಕ್ಷೇತ್ರದಲ್ಲಿ ಟಿಕೆಟ್ ಸಿಕ್ಕಿದೆ. ಇದರಿಂದ ಜೆಡಿಎಸ್ ಕಾರ್ಯಕರ್ತರು ಲಕ್ಷ್ಮಿ ಅಶ್ವಿನ್ ಗೌಡಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಫೇಸ್‍ಬುಕ್ ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
Advertisement
Advertisement
“ಲಕ್ಷ್ಮಿ ಅಶ್ವಿನ್ ಗೌಡರಿಗೆ ಟಿಕೆಟ್ ಕೈ ತಪ್ಪಿದ್ದು, ತುಂಬಾ ದುಃಖಕರ ವಿಷಯ. ಒಬ್ಬರು ಐಆರ್‍ಎಸ್ ಅಧಿಕಾರಿಯ ಕೈಯಲ್ಲಿ ನಮ್ಮ ಮಂಡ್ಯ ಜಿಲ್ಲೆ ಅಭಿವೃದ್ದಿಪಡಿಸುವ ಕನಸು ಎಲ್ಲಾ ಜೆಡಿಎಸ್ ಕಾರ್ಯಕರ್ತರಿಗಿತ್ತು. ದೊಡ್ಡವರು ಏನೇ ನಿರ್ಧಾರ ತೆಗೆದುಕೊಂಡರು ಅದು ನಮ್ಮ ಜಿಲ್ಲೆಯ ಒಳಿತಿಗಾಗಿ ಎಂದು ತಿಳಿದು ಅದನ್ನು ಗೌರವಿಸೋಣ. ಮುಂದಿನ ಚುನಾವಣೆಯಲ್ಲಾದರೂ ಲಕ್ಷ್ಮಿ ಅಶ್ವಿನ್ ಗೌಡರಿಗೆ ಟಿಕೆಟ್ ಕೊಡಲಿ ಅನ್ನೋದು ನಮ್ಮೆಲ್ಲರ ಇಚ್ಚೆ” ಎಂದು ಫೇಸ್‍ಬುಕ್ ನಲ್ಲಿ ಬರೆದು ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ.
Advertisement
Advertisement
ಮಂಡ್ಯ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಸಲಿದ್ದಾರೆ. ಆದರೆ ನಾಮಪತ್ರ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ದೇವರ ಮೊರೆಹೋಗಲಿದ್ದು, ಬಿಜೆಪಿ ಅಭ್ಯರ್ಥಿ ಡಾ. ಸಿದ್ದರಾಮಯ್ಯ ಮಧ್ಯಾಹ್ನ ಮಂಡ್ಯದ ಕಾಳಿಕಾಂಭ ದೇವಾಲಯದಲ್ಲಿ ಪೂಜೆ ಮಾಡಿಸಲಿದ್ದಾರೆ. ಅಲ್ಲಿಂದ ಬಿಜೆಪಿ ಕಚೇರಿಗೆ ಭೇಟಿ ನೀಡಿ ನಂತರ ಕಾರ್ಯಕರ್ತರ ಜೊತೆ ತೆರಳಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಡಾ. ಸಿದ್ದರಾಮಯ್ಯ ಅವರಿಗೆ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಲಿದ್ದಾರೆ.
ಇನ್ನೂ ಜೆಡಿಎಸ್ ಅಭ್ಯರ್ಥಿ ಎಲ್.ಆರ್. ಶಿವರಾಮೇಗೌಡ ಬೆಳಗ್ಗೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕಾಲಭೈರವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮ ಪತ್ರ ಸಲ್ಲಿಕೆ ಮಾಡಲಿದ್ದಾರೆ. ಇವರಿಗೆ ಜೆಡಿಎಸ್ ಮುಖಂಡರಾದ ಸಚಿವ ಸಿ.ಎಸ್. ಪುಟ್ಟರಾಜು ಹಾಗೂ ಕಾಂಗ್ರೆಸ್ಸಿನ ಕೆ.ಜೆ ಜಾರ್ಜ್ ಸೇರಿದಂತೆ ಹಲವರು ಸಾಥ್ ನೀಡಲಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv